Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇಶದ ಕೆಲವೆಡೆ ಮಳೆ, ಹಲವೆಡೆ ಚಳಿ, ಶೀತಗಾಳಿ! ಇದೆಂಥ ಹವಾಮಾನ ವೈಪರೀತ್ಯ?
ದೇಶಪ್ರಮುಖ

ದೇಶದ ಕೆಲವೆಡೆ ಮಳೆ, ಹಲವೆಡೆ ಚಳಿ, ಶೀತಗಾಳಿ! ಇದೆಂಥ ಹವಾಮಾನ ವೈಪರೀತ್ಯ?

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದೇಶದ ಬಹುತೇಕ ರಾಜ್ಯಗಳಲ್ಲಿ ಚಳಿ ಪ್ರಮಾಣ ಹೆಚ್ಚುತ್ತಲೇ ಇದ್ದು, ಶೀತಗಾಳಿಯೂ ಬೀಸುತ್ತಿದೆ. ಈ ನಡುವೆಯೇ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ನಾಲ್ಕು ದಿನ ಈ ಭಾಗಗಳಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಉತ್ತರ ಭಾರತದ ಹೆಚ್ಚಿನ ಭಾಗಗಳಲ್ಲಿ ಮೈಕೊರೆಯುವ ದಟ್ಟ ಮಂಜಿನ ಜೊತೆ ಭಾರೀ ಶೀತಗಾಳಿ ಮುಂದುವರೆದಿದೆ. ಈ ನಡುವೆಯೇ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹೆಚ್ಚಿನ ಪ್ರದೇಶಗಳಲ್ಲಿ ಇಂದು (ಡಿಸೆಂಬರ್ 1) ಇನ್ನೂ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದೇ ವೇಳೆ ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್‌ಗಳಲ್ಲಿ ಭಾರೀ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.

ಮುಂದಿನ ನಾಲ್ಕು ದಿನ ಮಳೆ: ಜನವರಿ 5ರ ವರೆಗೆ ಒಡಿಶಾ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ, ಪೂರ್ವ ಉತ್ತರ ಪ್ರದೇಶದಲ್ಲಿ ಜನವರಿ 2 ರವರೆಗೆ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಜನವರಿ 3ರ ವರೆಗೆ ಸಂಜೆ ಹಾಗೂ ಬೆಳಗಿನ ವೇಳೆಯಲ್ಲಿ ಮಂಜು ಕವಿದ ವಾತಾವರಣದ ಜೊತೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಟ್ಟ ಮಂಜು ಕವಿದ ವಾತಾವರಣ: ಮುಂದಿನ ಮೂರು ದಿನ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್‌ ಮುಜಫರಾಬಾದ್ ಮತ್ತು ಜಾರ್ಖಂಡ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಮುಂದುವರೆಯಲಿದೆ. ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಗಳಲ್ಲಿ ಜನವರಿ 5ರ ವರೆಗೆ ಇದೇ ರೀತಿಯ ವಾತಾವರಣ ಇರಲಿದೆ ಎಂದು ತಿಳಿಸಿದೆ.

ಉತ್ತರ ಪ್ರದೇಶ, ಬಿಹಾರ, ಪಂಜಾಬ್, ಹರಿಯಾಣ, ಚಂಡೀಗಢ ಮತ್ತು ದೆಹಲಿಯಲ್ಲಿ ಜನವರಿ 7ರ ವರೆಗೆ, ಪಶ್ಚಿಮ ರಾಜಸ್ಥಾನದಲ್ಲಿ ಜನವರಿ 4ರ ವರೆಗೆ ಮತ್ತು ಪೂರ್ವ ರಾಜಸ್ಥಾನದಲ್ಲಿ ಜನವರಿ 2 ರಿಂದ 4ರವರೆಗೆ ದಟ್ಟವಾದ ಮಂಜು ಬೀಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 4 ಮತ್ತು 5ರಂದು ಮಧ್ಯಪ್ರದೇಶದಲ್ಲಿ ಇದೇ ರೀತಿಯ ವಾತಾವರಣ ಇರಲಿದ ಎಂದು ಹಾವಾಮನ ಇಲಾಖೆ ತಿಳಿಸಿದೆ. ಇನ್ನೂ ಜನವರಿ 2ರಿಂದ 4ರ ವರೆಗೆ ಹಿಮಾಚಲ ಪ್ರದೇಶ, ಜನವರಿ 5 ಮತ್ತು 6ರಂದು ತೆಲಂಗಾಣದ ಪ್ರತ್ಯೇಕ ಪ್ರದೇಶಗಳಲ್ಲಿ ಶೀತಗಾಳಿ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನವದೆಹಲಿ ಹವಾಮಾನ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇಂದು (ಜನವರಿ 1) ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಮುಂದಿನ ಹಲವು ದಿನಗಳವರೆಗೆ ಬೆಳಗಿನ ವೇಳೆ ಕೆಲವು ಸ್ಥಳಗಳಲ್ಲಿ ದಟ್ಟವಾದ ಮಂಜು ಬೀಳಲಿದೆ. ಇನ್ನೂ ಕೆಲವು ಭಾಗಗಳಲ್ಲಿ ಭಾರೀ ಶೀತಗಾಳಿ ವಾತಾವರಣ ಇರಲಿದ ಎಂದು ಮುನ್ಸೂಚನೆ ನೀಡಿದೆ.

ಮುಂದಿನ ದಿನಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಮುಂದುವರೆಯಲಿದ್ದು, ಇದು ವಾಹನ ಸಂಚಾರಕ್ಕೆ ಹಾಗೂ ವಿಮಾನಗಳ ಹಾರಾಟಕ್ಕೆ ಅಡಚಣೆ ಉಂಟುಮಾಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಎಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಒಳಿತು ಎಂದು ಸಲಹೆ ನೀಡಿದೆ. ಈಗಾಗಲೇ ದಟ್ಟ ಮಂಜು ಕವಿದ ವಾತಾವರಣ ಹಿನ್ನೆಲೆ ವಿಮಾನ ಹಾರಾಟದಲ್ಲಿ ವಿಳಂಬ ಆಗಿರುವ ಘಟನೆಗಳು ನಡೆದಿರುವ ಬಗ್ಗೆ ವರದಿಯಾಗಿದೆ

ಹುಣಸೆಹಣ್ಣನ್ನು ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ;

TAGGED:Meanwhilerain continues in many places and cold winds are blowing in most states of the country.
Share This Article
Facebook Twitter Copy Link Print
Previous Article Health ಹುಣಸೆಹಣ್ಣು ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆ ಬರೋದೇ ಇಲ್ಲ
Next Article Fire accident ಹೊಸ ವರ್ಷಾಚರಣೆ ವೇಳೆ ಅಗ್ನಿ ಅವಘಡ: 40 ಮಂದಿ ಸಾವು, ನೂರಕ್ಕೂ ಹೆಚ್ಚು ಜನರಿಗೆ ಗಾಯ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?