Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಹೈಗ್ರೌಂಡ್ ಪೊಲೀಸ್ ಠಾಣೆ ಹಿಂಭಾಗದ ರಾಮಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ಅಪಘಾತಕ್ಕೀಡಾದ ಯುವಕನನ್ನು ಇನ್ನೂ ಗುರುತಿಸಲಾಗಿಲ್ಲ. ಪೊಲೀಸರು ತಿಳಿಸಿದಂತೆ, ಯುವಕ ಬೈಕ್‌ನಲ್ಲಿ ವೇಗವಾಗಿ ಹೋಗುತ್ತಿದ್ದ. ನಸುಕಿನ ಸಮಯದಲ್ಲಿ ರಸ್ತೆಯಲ್ಲಿ ಯಾರೂ ಇಲ್ಲದ ಕಾರಣ ನಿಯಂತ್ರಣ ತಪ್ಪಿ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಯುವಕನ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹೈಗ್ರೌಂಡ್ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.