Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ನವದೆಹಲಿ: ತಂಬಾಕು ಉತ್ಪನ್ನಗಳು ಹಾಗೂ ಪಾನ್ ಮಸಾಲಾ ಬಳಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಹೊಸ ತೆರಿಗೆ, ಸೆಸ್ ಜಾರಿ ಹಿನ್ನೆಲೆಯಲ್ಲಿ ಫೆಬ್ರವರಿ 1ರಿಂದ ತಂಬಾಕು ಉತ್ಪನ್ನಗಳ ದರ ಹೆಚ್ಚಳವಾಗಲಿದೆ. ತಂಬಾಕು ಹಾಗೂ ಪಾನ್ ಮಸಾಲಾ ಮೇಲಿನ ಹೊಸ ಸುಂಕ ಜಿಎಸ್ ಟಿ ದರಕ್ಕಿಂತ ಹೆಚ್ಚಿರಲಿದೆ.
ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಸಿಗರೇಟ್, ತಂಬಾಕು ಉತೊಅನ್ನಗಳಿಗೆ ಶೇ.40ರಷ್ಟು ಜಿಎಸ್ ಟಿ ದರ ಇರಲಿದೆ. ಬೀಡಿಗಳಿಫ಼ೆ ಶೇ.18ರಷ್ಟು ಸರಕು ಮತ್ತು ಸೇವಾ ತೆರಿಗೆ ಬೀಳಲಿದೆ. ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು. ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳು ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸಲಾಗುತ್ತಿದೆ.
https://www.newsics.com/2026/01/01/huge-increase-in-commercial-lpg-gas-cylinder-prices/