Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಲಖನೌ : ಕಾರ್ಯಕ್ರಮ ನಿಮಿತ್ತ ಕಾರಿನಲ್ಲಿ ತೆರಳುತ್ತಿದ್ದ ಸಚಿವರ ಕಾರಿಗೆ ಅಡ್ಡ ಬಂದ ನಾಯಿ ಉಳಿಸಲು ಹೋಗಿ ಅಪಘಾತಕ್ಕೀಡಾದ ಘಟನೆ ಉತ್ತರ ಪ್ರದೇಶದ ಫತೇಬಾದ್ ರಸ್ತೆಯಲ್ಲಿ ನಡೆದಿದೆ.
ಉತ್ತರ ಪ್ರದೇಶದ ಸರ್ಕಾರದ ಸಚಿವ ಸಂಜಯ್ ನಿಶಾದ್ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಠವಶಾತ್ ಸಂಜಯ್ ನಿಶಾದ್ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಅಡ್ಡ ಬಂದ ನಾಯಿ ಜೀವ ಉಳಿಸಲು ಸಚಿವರ ಕಾರು ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾರೆ. ಆದರೆ ವೇಗವಾಗಿ ಸಚಿವರ ಕಾರು ಹಾಗೂ ಬೆಂಗಾವಲು ಕಾರುಗಳು ಸಾಗುತ್ತಿದ್ದ ಕಾರಣ ಸಚಿವರ ಕಾರಿಗೆ ಹಿಂಬದಿಯಿಂದ ಬೇರೆ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮುವಿನಿಂದ ಶೌರ್ಯ ಪ್ರಶಸ್ತಿ ಪಡೆದ ಅಜಯ್ ರಾವ್ ಜೊತೆ ಸಚಿವ ಸಂಜಯ್ ರಾವ್ ಫತೇಬಾದ್‌ನಿಂದ ಆಗ್ರಾ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಿಂದ ಕೆಲ ಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.