Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > S.A. Ramadas retires ಮೋದಿಯವರಿಂದ ಬೆನ್ನಿಗೆ ಗುದ್ದು ಪಡೆದು ಬೀಗಿದ್ದ ಮಾಜಿ ಸಚಿವ ರಾಮದಾಸ್ ಸಕ್ರಿಯ ರಾಜಕಾರಣದಿಂದ ದಿಢೀರ್ ನಿವೃತ್ತಿ!
ಕರ್ನಾಟಕದೇಶಪ್ರಮುಖ

S.A. Ramadas retires ಮೋದಿಯವರಿಂದ ಬೆನ್ನಿಗೆ ಗುದ್ದು ಪಡೆದು ಬೀಗಿದ್ದ ಮಾಜಿ ಸಚಿವ ರಾಮದಾಸ್ ಸಕ್ರಿಯ ರಾಜಕಾರಣದಿಂದ ದಿಢೀರ್ ನಿವೃತ್ತಿ!

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಮೈಸೂರು: ಖುದ್ದು ಪ್ರಧಾನಿ‌ ಮೋದಿಯವರಿಂದ ಮೈಸೂರಿನ ವೇದಿಕೆಯಲ್ಲಿ ಬೆನ್ನಿಗೆ ಪ್ರೀತಿಯ ಗುದ್ದು ಪಡೆದು ಬೀಗಿದ್ದ ಮಾಜಿ ಸಚಿವ,‌ ಬಿಜೆಪಿ ಹಿರಿಯ ನಾಯಕ ಎಸ್.ಎ. ರಾಮದಾಸ್ ಸಕ್ರಿಯ ರಾಜಕಾರಣದಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್‌.ಎ.ರಾಮದಾಸ್‌ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿದ್ದಾರೆ.

ಈ ಮೂಲಕ ಹಳೆ ಮೈಸೂರು ಭಾಗದ ಹಿರಿಯ ರಾಜಕಾರಣಿಯೊಬ್ಬರು ತಮ್ಮ ರಾಜಕೀಯಕ್ಕೆ ಭಾವುಕ ವಿದಾಯ ಹೇಳಿದ್ದಾರೆ. ಆದರೆ, ರಾಮದಾಸ್ ಅವರ ಈ ದಿಢೀರ್ ನಿರ್ಧಾರಕ್ಕೆ ಸ್ಪಷ್ಟ‌ ಕಾರಣ ತಿಳಿದುಬಂದಿಲ್ಲ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ ಸಂಘದ ವತಿಯಿಂದ ಹೊರತಂದಿರುವ ಕ್ಯಾಲೆಂಡ‌ರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ನಾನು ಬಿಜೆಪಿ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಸುತ್ತೂರು ಸ್ವಾಮೀಜಿ ಸೇರಿದಂತೆ ನನ್ನನ್ನು ಹತ್ತಿರದಿಂದ ಬಲ್ಲ ಅನೇಕರು ನೀವು ಮತ್ತೆ ಸಕ್ರಿಯವಾಗಿ ಸಮಾಜದ ಜತೆ ಇರಬೇಕು ಎಂದು ಹೇಳುತ್ತಿದ್ದಾರೆ. ನನಗೆ ಚುನಾವಣಾ ರಾಜಕೀಯ ಸಾಕಾಗಿದೆ. ಚುನಾವಣಾ ರಾಜಕೀಯ ಮಾಡುವುದಿಲ್ಲ. ಪರಿಸರ ಉಳಿಸುವ ನಿಟ್ಟಿನಲ್ಲಿ ಸಮಾಜ ಸೇವೆ ಮುಂದುವರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಹೇಳಿದರು.

ಶ್ರೀರಾಮನಿಗೆ ನಾಳೆ ಪಟ್ಟಾಭಿಷೇಕ ಆಗಬೇಕಿತ್ತು. ಹಿಂದಿನ ರಾತ್ರಿ ದಶರಥನ ಮೂಲಕ ಕಾಡಿಗೆ ಹೋಗುವಂತೆ ಹೇಳಿಸಲಾಯಿತು. ಅಂತಹ ಶ್ರೀರಾಮಚಂದ್ರನೇ ಮರು ಮಾತನಾಡದೇ ಕಾಡಿಗೆ ಹೊರಟು ಹೋದ. ನಾನು ರಾಮದಾಸ, ನಾನೇನು ಮಾಡಲಿ. ಭಾರತೀಯ ಜನತಾ ಪಕ್ಷ ನನಗೆ ತಾಯಿ ಇದ್ದಂತೆ. ಯಾವುದೇ ಕಾರಣಕ್ಕೂ ತಾಯಿಗೆ ದ್ರೋಹ ಮಾಡುವುದಿಲ್ಲ ಎಂದು ಅನೇಕ ಬಾರಿ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ ಎಂದು ಮಾರ್ಮಿಕವಾಗಿ ಮಾತನಾಡಿದರು.

ನಾನು ಊಟಕ್ಕೆ ಕುಳಿತಿದ್ದೆ. ನನ್ನನ್ನು ಎಬ್ಬಿಸಿ ಬೇರೆಯವರನ್ನು ತಂದು ಕೂರಿಸಿದರು. ನಾನು ಎಲ್ಲರಿಗೂ ಊಟ ಬಡಿಸಿದ್ದೇನೆ. ಅದ್ಯಾವುದರ ಬಗ್ಗೆಯೂ ನನಗೆ ದುಃಖವಿಲ್ಲ. ನನ್ನ ತಂದೆ ಮಾಜಿ ಸೈನಿಕ. ನಾನೂ ಸೇನೆಗೆ ಸೇರಬೇಕು ಎಂದುಕೊಂಡಿದ್ದೆ. ರಾಜಕೀಯಕ್ಕೆ ಬಂದಿದ್ದು ಆಕಸ್ಮಿಕ. ನನಗಿನ್ನೂ ಚೆನ್ನಾಗಿ ನೆನಪಿದೆ. 1994ರ ನವೆಂಬರ್ ತಿಂಗಳಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಗೆದ್ದು ರಾತ್ರಿ ಮನೆಗೆ ಬಂದೆ. ಒಂದು ಕಡೆ ತಂದೆ, ಮತ್ತೊಂದು ಕಡೆ ತಾಯಿ ನಿಂತಿದ್ದರು. ಇಬ್ಬರೂ ಹೆಗಲ ಮೇಲೆ ಕೈಹಾಕಿ ರಾಜಕೀಯ ತುಂಬಾ ಕೆಟ್ಟದ್ದು, ನಿನ್ನ ಕೈ ಕೆಸರು ಮಾಡಿಕೊಳ್ಳಬೇಡ, ರಕ್ತ ಅಶುದ್ಧ ಮಾಡಿಕೊಳ್ಳಬೇಡ. 30 ವರ್ಷ ರಾಜಕೀಯ ಮಾಡಿದ್ದೇನೆ. ಈಗಲೂ ನಾನು ಕೈ ಮತ್ತು ರಕ್ತವನ್ನು ಅಶುದ್ಧ ಮಾಡಿಕೊಂಡಿಲ್ಲ ಎಂದು ಅವರು ಭಾವುಕರಾಗಿ ಮಾತನಾಡುತ್ತಲೇ ಪಕ್ಷದಲ್ಲಿ ತಮಗಾದ ನೋವನ್ನು ಹೊರಹಾಕಿದರು.

ರಾಮದಾಸ್‌ಗೇನು ಕೊರತೆ, ಅರ್ಧ ಮೈಸೂರು ಅವರದ್ದು ಅಂತೆಲ್ಲ ಹೊರಗೆ ಜನ ಮಾತನಾಡುತ್ತಾರೆ. ನನ್ನ ಕುಟುಂಬದಲ್ಲಿ ಉದ್ಯಮಿಗಳಿದ್ದಾರೆ, ಅದರಲ್ಲಿ ತಪ್ಪೇನು? ಅವರ ಬಳಿ ಇರುವ ಯಾವುದೂ ನನ್ನದಲ್ಲ. 1.50 ಲಕ್ಷ ರೂ. ನಿವೃತ್ತಿ ವೇತನ ಬರುತ್ತೆ, ನನ್ನ ಜೀವನಕ್ಕೆ ಅಷ್ಟು ಸಾಕೆಂದು ಅವರು ಹೇಳಿದರು.

ನಾನು ಚುನಾವಣಾ ರಾಜಕೀಯ ಮಾಡುವುದಿಲ್ಲ. ರೋಗ ಬಂದಾಗ ಚಿಕಿತ್ಸೆ ಪಡೆಯುವುದು ಬೇರೆ, ಕಾಯಿಲೆಯೇ ಬಾರದ ರೀತಿಯಲ್ಲಿ ಪರಿಸರ ಉಳಿಸಿಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಚಿಂತನೆ ಮಾಡುತ್ತಿದ್ದೇನೆ. ಒಂದು ವರ್ಷದಿಂದ ಅಧ್ಯಯನ ಮಾಡುತ್ತಿದ್ದು, ಶೀಘ್ರದಲ್ಲೇ ಪರಿಸರ ಸಂರಕ್ಷಣಾ ಕಾರ್ಯದ ಮೂಲಕ ಸಾಮಾಜಿಕವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಅವರು ನುಡಿದರು.

ಈ ಹಿಂದೆ ಜನೌಷಧಿ ಕೇಂದ್ರ ತೆರೆದಾಗ ಔಷಧ ಕಂಪನಿಗಳು ಲಾಬಿ ಮಾಡಿದವು. ರಾಜ್ಯದ ವಿವಿಧೆಡೆ ನನ್ನ ವಿರುದ್ಧ ಪ್ರತಿಭಟನೆ ನಡೆಸಿ, ಭಾವಚಿತ್ರಕ್ಕೆ ಅಪಮಾನ ಮಾಡಿದವು. ಆದರೆ ಎದೆಗುಂದಲಿಲ್ಲ. ಬಳಿಕ ಅದು ಎಷ್ಟು ಜನಪ್ರಿಯವಾಯಿತೆಂದರೆ ದೇಶದಾದ್ಯಂತ ಪ್ರಧಾನಮಂತ್ರಿ ಜನೌಷಧಿ ಕೇಂದ್ರವಾಗಿ ಸಾವಿರಾರು ಸಂಖ್ಯೆಯಲ್ಲಿ ಆರಂಭವಾದವು ಎಂದು ಹೇಳಿದರು.

ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಸಸ್ಪೆಂಡ್!

Holiday’s list ರಜಾಪ್ರಿಯರಿಗೆ ಖುಷಿ ಸುದ್ದಿ: 2026ರ ಲಾಂಗ್ ವೀಕೆಂಡ್ ಲಿಸ್ಟ್ ನೋಡಿ

ಗೋವಾದಲ್ಲಿ ಬಿಯರ್ ಬಾಟಲಿ ಹಿಡಿದು ಕೈಯಲ್ಲಿ ಸಾರಾಯಿ ಹಿಡಿದು ಓಡಾಡಿದ ಸಾರ – ವಿಡಿಯೋ ನೋಡಿ

TAGGED:Former minister Ramdassuddenly retires from active politics!who was befriended by Modi
Share This Article
Facebook Twitter Copy Link Print
Previous Article Karnataka Weather: ರಾಜ್ಯದಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆ
Next Article ಬಂಡೆ ಬ್ಲಾಸ್ಟ್​​ನಿಂದ ಗರ್ಭಿಣಿ ಚಿರತೆ, 3 ಮರಿಗಳ ಸಾವು – ತನಿಖೆಗೆ ಆದೇಶ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?