Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ದೇವಿಯ ತೇರು ಎಳೆಯುತ್ತಿರುವ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿರುವ ಘಟನೆ ಚಾಮರಾಜಪೇಟೆ ಬಳಿಯ ಜೆ.ಜೆ.ನಗರ (ಜಗಜೀವನ್ ರಾಮ್ ನಗರ) ಠಾಣೆವ್ಯಾಪ್ತಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಓಂ ಶಕ್ತಿ ಅಧ್ಯಕ್ಷ ಶಶಿಕುಮಾರ್ ಅವರು ನೀಡಿದ ದೂರಿನ ಮೇರೆಗೆ FIR ದಾಖಲಾಗಿದೆ. ಎಫ್ ಐ ಆರ್ ದಾಖಲಾಗುತ್ತಿದ್ದಂತೆ ಇಡೀ ಏರಿಯಾ ಸಂಪೂರ್ಣವಾಗಿ ಸೈಲೆಂಟ್ ಆಗಿದ್ದು ಪೊಲೀಸರು ಇದೀಗ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ವರದರಾಜು ಎಂಬುವರ ಅಪ್ರಾಪ್ತ ಮಗಳ ತಲೆಗೆ ಗಂಭೀರವಾದ ಗಾಯವಾಗಿದೆ. ಜತೆಗೆ ಇಬ್ಬರು ಮಹಿಳೆಯ ಕಾಲಿಗೆ ಗಾಯವಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಮತ್ತು ಎಸಿಪಿ ಭರತ್‌ರೆಡ್ಡಿ ಸೇರಿ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
https://www.newsics.com/2026/01/05/spandana-somanna-who-came-out-of-the-mansion/