Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಮೈಸೂರು ಹಳೇ ಕೋರ್ಟ್, ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಬಳಿಕ ಇದೀಗ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ.
ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಪಾಸ್ ಪೋರ್ಟ್ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಪಾಸ್ ಪೋರ್ಟ್ ಕಚೇರಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ದುಷ್ಕರ್ಮಿಗಳು ಸಂದೇಶ ರವಾನಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ವಿಲ್ಸನ್ ಗಾರ್ಡನ್ ಹಾಗೂ ಎಸ್.ಆರ್.ನಗರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.
https://www.newsics.com/2026/01/06/kantaras-rani-kanakavati-is-now-melissa-in-toxic/