Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೋರೇಟರ್ ಕೊಟ್ಟ ದೂರಿನ ಆಧಾರದ ಮೇರೆಗೆ ಬಿಜೆಪಿ ಕಾರ್ಯಕರ್ತೆಯನ್ನು ಹಿಡಿದ ಪೊಲೀಸರು ಆಕೆಯನ್ನು ಬಟ್ಟೆ ಬಿಚ್ಚಿ ಚಿತ್ರಹಿಂಸೆ ನೀಡಿರುವ ಘಟನೆ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಕೇಶ್ವಾಪುರ ರಾಣಾ ವ್ಯಾಪ್ತಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ್ ಅಲಿಯಾಸ್ ವಿಜಯಲಕ್ಷ್ಮಿ ಹಂಡಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಜಗಳ ನಡೆದಿತ್ತು.
ಸುಜತಾ ಹಂಡಿ ವಿರುದ್ಧ ಕಾಂಗ್ರೆಸ್ ಕಾರ್ಪೋರೇಟರ್ ಸುವರ್ಣ ಕಲ್ಲಕುಂಟ್ಲಾ ದೂರು ನೀಡಿದ್ದರು.
ಗಲಾಟೆ ವೇಳೆ ದೂರು ಪ್ರತಿದೂರು ದಾಖಲಾಗಿತ್ತು. ಕಾಂಗ್ರೆಸ್ ಕಾರ್ಪೋರೆಟ್ ನೀಡಿದ ದೂರಿನ ಮೇಲೆ ಬಂಧಿಸಿದ ಪೊಲೀಸರು ಬಂಧನ ವೇಳೆ ಪ್ರತಿರೋಧ ತೋರಿ ಚೀರಾಟ ನಡೆಸಿದ್ದಕ್ಕೆ ಆಕೆಯನ್ನು ವಿವಸ್ತ್ರಗೊಳಿಸಿ ಥಳಿಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತೆ ವಿರುದ್ಧ 307 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈಕೆಯ ವಿರುದ್ದ ಬೇರೆ ಬೇರೆ ಆರೋಪಗಳಡಿಯಲ್ಲಿ 9 ಪ್ರಕರಣ ದಾಖಲಿಸಿದ್ದಾರೆ. ರಾಜಕೀಯ ವೈಷಮ್ಯದಿಂದ ಸುಜಾತಾಳ ವಿರುದ್ದ ಈ ರೀತಿಯ ಹಲ್ಲೆ ನಡೆದಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.