Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿಟ್ ಆ್ಯಂಡ್ ರನ್ ಕೇಸ್: ಮಾಜಿ ಸಚಿವ ರೇವಣ್ಣ ದರ್ಪ- ಮೃತ ಯುವಕನ ಪೋಷಕರ ಆರೋಪ
ಕರ್ನಾಟಕಪ್ರಮುಖ

ಹಿಟ್ ಆ್ಯಂಡ್ ರನ್ ಕೇಸ್: ಮಾಜಿ ಸಚಿವ ರೇವಣ್ಣ ದರ್ಪ- ಮೃತ ಯುವಕನ ಪೋಷಕರ ಆರೋಪ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com
ಬೆಂಗಳೂರು: ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರ ಪುತ್ರ ಶಶಾಂಕ ಹಿಟ್‌ ಅಂಡ್ ರನ್ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ.

ಪರಿಹಾರ ನೀಡುವ ಬದಲು, ‘ನಮ್ಮ ಕಾರೇ ಬೇಕಿತ್ತಾ ಸಾಯೋಕೆ’ ಎಂದು ಅವಮಾನಿಸಿ ದರ್ಪ ತೋರಿದ್ದಾರೆಂದು ಮೃತನ ಕುಟುಂಬ ಗಂಭೀರ ಆರೋಪ ಮಾಡಿದೆ. ಹಣ ಬೇಡ, ನ್ಯಾಯ ಬೇಕು ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಯುವಕನ ಪೋಷಕರು ಹೆಚ್.ಎಂ.ರೇವಣ್ಣ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪರಿಹಾರ ನೀಡುವುದಾಗಿ ಕರೆಸಿ, ಹಣದ ವಿಚಾರದಲ್ಲಿ ಅವಮಾನಿಸಿ ದರ್ಪ ತೋರಲಾಗಿದೆ ಎಂದು ಮೃತ ಯುವಕ ರಾಜೇಶ್ ಅವರ ಕುಟುಂಬ ಕಣ್ಣೀರಿಟ್ಟಿದೆ.
ಕಳೆದ ಡಿಸೆಂಬರ್ 11ರ ತಡರಾತ್ರಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸಮೀಪ ನಡೆದ ರಸ್ತೆ ಅಪಘಾತದಲ್ಲಿ, ರೇವಣ್ಣ ಪುತ್ರ ಶಶಾಂಕ್ ಚಾಲನೆ ಮಾಡುತ್ತಿದ್ದ ಕಾರು ಡಿಕ್ಕಿ ಹೊಡೆದು ಬಿಳಗುಂಬ ಗ್ರಾಮದ 23 ವರ್ಷದ ರಾಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದರು. ಈ ಅಪಘಾತ ಒಂದು ಕುಟುಂಬವನ್ನು ಸಂಪೂರ್ಣವಾಗಿ ಸಂಕಷ್ಟಕ್ಕೆ ತಳ್ಳಿದೆ ಎಂದು ಕುಟುಂಬಸ್ಥರು ನೋವು ವ್ಯಕ್ತಪಡಿಸಿದ್ದಾರೆ.
ಮೃತ ರಾಜೇಶ್ ಅವರ ಪೋಷಕರು ಮಾಧ್ಯಮಗಳ ಮುಂದೆ ಮಾತನಾಡಿ, ಅಪಘಾತದ ನಂತರ ನಮ್ಮನ್ನು ಕರೆಸಿ, ನಿಮ್ಮ ಮಗ ಸಾಯಲು ನಮ್ಮ ಕಾರೇ ಬೇಕಿತ್ತಾ?’ ಎಂದು ಅವಮಾನಿಸಲಾಗಿದೆ. ಎರಡು ಲಕ್ಷ ರೂಪಾಯಿ ಕೊಡ್ತೀವಿ, ತೆಗೆದುಕೊಂಡು ಹೋಗಿ ಎಂದು ದರ್ಪ ತೋರಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಮ್ಮ ಕಾರಿಗೆ ಇನ್ಸೂರೆನ್ಸ್ ಇದೆ, ನ್ಯಾಯಾಲಯದಲ್ಲಿ ನೋಡಿಕೊಳ್ಳೋಣ. ಮಾಧ್ಯಮಗಳ ಮುಂದೆ ಹೋಗಿ ನಮ್ಮ ಮರ್ಯಾದೆ ಹಾಳು ಮಾಡಿದ್ದೀರಿ. ಬೇಕಿದ್ದರೆ ಹಣ ತೆಗೆದುಕೊಳ್ಳಿ, ಇಲ್ಲದಿದ್ದರೆ ಹೋಗಿ ಎಂದು ಹೇಳಿ ನಮಗೆ ಬೆದರಿಕೆ ಹಾಕಲಾಗಿದೆ ಎಂದು ಕುಟುಂಬಸ್ಥರು ದೂರಿದ್ದಾರೆ. ಈ ಅವಮಾನದಿಂದ ಮನನೊಂದ ಕುಟುಂಬಸ್ಥರು ಯಾವುದೇ ಹಣ ಸ್ವೀಕರಿಸದೇ ವಾಪಸ್ ಬಂದಿದ್ದಾರೆ.
ಒಂದು ಕುಟುಂಬ ಹಾಳಾದರೂ ಪಶ್ಚಾತ್ತಾಪವೇ ಇಲ್ಲ ಎಂದು ಯುವಕನ ಕುಟುಂಬ ಬೇಸರ ವ್ಯಕ್ತಪಡಿಸಿದೆ. ಅಪಘಾತದಿಂದ ನಮ್ಮ ಜೀವನವೇ ನಾಶವಾಗಿದೆ. ಆದರೆ, ಯಾವುದೇ ಪಶ್ಚಾತ್ತಾಪವಿಲ್ಲದೇ ನಮ್ಮನ್ನು ಅವಮಾನಿಸಲಾಗಿದೆ. ಮಾಧ್ಯಮಗಳ ಮುಂದೆ ಪರಿಹಾರ ಕೊಡುತ್ತೇನೆ ಎಂದು ಹೇಳಿ, ಈಗ ನಮ್ಮ ಮೇಲೆ ಒತ್ತಡ ಮತ್ತು ಧಮ್ಕಿ ಹಾಕುತ್ತಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.
ಆರೋಪಗಳ ಕುರಿತು ಪ್ರತಿಕ್ರಿಯೆ ಕೇಳಿದಾಗ, ಮಾಜಿ ಸಚಿವ ಹೆಚ್.ಎಂ.ರೇವಣ್ಣ ಮಾತನಾಡಲು ನಿರಾಕರಿಸಿದ್ದಾರೆ. ಅವರು ಏನು ಬೇಕಾದರೂ ಹೇಳಿಕೆ ಕೊಡಲಿ. ನಾನು ಈ ವಿಚಾರದಲ್ಲಿ ಮಾತನಾಡಲ್ಲ. ಯಾಕೆ ಮಾತನಾಡಬೇಕು? ಎಂದು ಹೇಳಿದ್ದಾರೆ. ಬಳಿಕ ಮಾತನಾಡಿದ ಅವರು, ಕಾರಿಗೆ ಇನ್ಸೂರೆನ್ಸ್ ಇದೆ, ಕ್ಲೇಮ್ ಆಗುತ್ತದೆ. ಆದರೂ ಮಾನವೀಯ ದೃಷ್ಟಿಯಿಂದ ಎರಡು ಲಕ್ಷ ಅಥವಾ ಐದು ಲಕ್ಷ ರೂಪಾಯಿ ಸಹಾಯ ಮಾಡಲು ಹೋಗಿದ್ದೆವು. ಆದರೆ ಅವರು 25 ಲಕ್ಷ ರೂಪಾಯಿ ಕೊಡಬೇಕು ಎಂದು ಬೇಡಿಕೆ ಇಟ್ಟರೆ ನಾವು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಾರೆ.

Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ

ಮಕ್ಕಳ ಮುಂದೆ ಈ ಎರಡು ಕೆಲ್ಸ ಮಾಡಬೇಡಿ; ಪಾಲಕರು ಏನು ಮಾಡ್ಬೇಕು?

ಫಸ್ಟ್ ನೈಟಲ್ಲಿ ತಲೆಗೆ ಹಾಕಿದ್ದ ವಿಗ್ ತೆಗೆದ; ಮುಂದೇನಾಯ್ತು?

ಹಣೆ ಮೇಲೆ ಟೆಂಪಲ್‌ ಇಟ್ಕೊಂಡು ಓಡಾಡ್ತಿರುವ ಝೊಮ್ಯಾಟೊ ಸಂಸ್ಥಾಪಕ, ಏನಿದು TEMPLE?

TAGGED:Hit and run case: Former minister Revanna insulted - allegations made by parents of deceased youth
Share This Article
Facebook Twitter Copy Link Print
Previous Article Transgenders torcher ಬಿಕಾಂ ಪದವೀಧರೆಯ ತಲೆ ಬೋಳಿಸಿ ಲಿಂಗ ಬದಲಾವಣೆ ಮಾಡಿದ ಮಂಗಳಮುಖಿಯರು, ವೇಶ್ಯಾವಾಟಿಕೆಗೆ ತಳ್ಳಲು ಯತ್ನ
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 08-01-2026, ಗುರುವಾರ

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?