Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರೋಬ್ಬರಿ 14 ವರ್ಷಗಳ ಬಳಿಕ ಎಸಿಎಫ್ ಮದನ್ ನಾಯ್ಕ ಹತ್ಯೆ ಪ್ರಕರಣ ಸುಖಾಂತ್ಯ
ಕರ್ನಾಟಕಪ್ರಮುಖ

ಬರೋಬ್ಬರಿ 14 ವರ್ಷಗಳ ಬಳಿಕ ಎಸಿಎಫ್ ಮದನ್ ನಾಯ್ಕ ಹತ್ಯೆ ಪ್ರಕರಣ ಸುಖಾಂತ್ಯ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬರೋಬ್ಬರಿ 14 ವರ್ಷಗಳ ಕಾನೂನು ಹೋರಾಟದ ಬಳಿಕ ದಾಂಡೇಲಿ ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಮದನ್ ನಾಯ್ಕ ಅವರ ಹತ್ಯೆ ಪ್ರಕರಣ ಸುಖಾಂತ್ಯ ಕಂಡಿದೆ.

ದೀರ್ಘ ಕಾಲದ ನ್ಯಾಯಾಂಗ ಪ್ರಕ್ರಿಯೆಯ ಬಳಿಕ ಯಲ್ಲಾಪುರ ಸಂಚಾರಿ ನ್ಯಾಯಾಲಯವು ತೀರ್ಪು ಪ್ರಕಟಿಸಿದ್ದು, ಪ್ರಕರಣದ ಒಟ್ಟು 12 ಆರೋಪಿಗಳ ಪೈಕಿ 8 ಜನರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪ್ರಕರಣದ ಮೂರನೇ ಆರೋಪಿ ಪ್ರಶಾಂತ್ ರಾಮು ಲಂಬಾಣಿಗೆ 10 ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹11,000 ದಂಡ ವಿಧಿಸಲಾಗಿದೆ. ಜೊತೆಗೆ, ಮೃತ ಮದನ್ ನಾಯ್ಕ ಅವರ ಅವಲಂಭಿತರಿಗೆ ₹50,000 ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ. ಮೂರನೇ ಆರೋಪಿ ಹೊರತುಪಡಿಸಿ, ಆರೋಪಿತರಾದ 1 ರಿಂದ 4, 6, 8 ಮತ್ತು 10ನೇ ಆರೋಪಿಗಳಿಗೆ ತಲಾ ₹1,000 ದಂಡ ವಿಧಿಸಲಾಗಿದೆ. ಈ ಮೂಲಕ, ಪ್ರಕರಣದಲ್ಲಿ ಮಹಿಳೆಯರು ಸೇರಿದಂತೆ ಒಟ್ಟು ಎಂಟು ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ.

ನ್ಯಾಯಾಲಯವು ತನ್ನ ತೀರ್ಪಿನಲ್ಲಿ, ಆರೋಪಿಗಳು ಮದನ್ ನಾಯ್ಕ ಅವರ ಮೇಲೆ ಹಲ್ಲೆ ನಡೆಸಿರುವುದು ಪ್ರತ್ಯಕ್ಷದರ್ಶಿ ಸಾಕ್ಷಿಗಳಿಂದ ಸ್ಪಷ್ಟವಾಗಿ ಸಾಬೀತಾಗಿದೆ. ಆದರೆ, ಕೊಲೆ ಎಂಬುದನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ಅಭಿಯೋಗ ವಿಫಲವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

2012ರ ಮೇ 6ರಂದು ನಡೆದಿದ್ದ ದುರ್ಘಟನೆ
ಈ ಪ್ರಕರಣವು 2012ರ ಮೇ 6ರಂದು ದಾಂಡೇಲಿಯ ಖಾಸಗಿ ಮೊಸಳೆ ಉದ್ಯಾನವನ (ಮೊಸಳೆ ಪಾರ್ಕ್) ನಲ್ಲಿ ನಡೆದ ಘಟನೆಯಾಗಿದ್ದು, ಆ ಸಮಯದಲ್ಲಿ ಮದನ್ ನಾಯ್ಕ ಅವರು ದಾಂಡೇಲಿ ಅರಣ್ಯ ಇಲಾಖೆಯ ಎಸಿಎಫ್ ಆಗಿ ಕರ್ತವ್ಯ ಸಲ್ಲಿಸುತ್ತಿದ್ದರು. ಘಟನೆ ದಿನ, ಮದ್ಯಪಾನದಲ್ಲಿದ್ದ ಪ್ರವಾಸಿಗರ ಗುಂಪೊಂದು ಮೊಸಳೆಗಳಿಗೆ ಮಾಂಸ ಎಸೆಯುತ್ತಿದ್ದುದನ್ನು ಮದನ್ ನಾಯ್ಕ ತಡೆಯಲು ಯತ್ನಿಸಿದ್ದರು. ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಈ ಕೃತ್ಯ ನಡೆಯುತ್ತಿದ್ದುದನ್ನು ಪ್ರಶ್ನಿಸಿದ್ದ ಮದನ್ ನಾಯ್ಕ ಅವರೊಂದಿಗೆ ಪ್ರವಾಸಿಗರ ಗುಂಪು ವಾಗ್ವಾದ ನಡೆಸಿತ್ತು.
ವಾಗ್ವಾದ ತೀವ್ರಗೊಂಡು, ಪ್ರವಾಸಿಗರು ಮತ್ತು ಅವರೊಂದಿಗೆ ಇದ್ದ ಮಹಿಳೆಯರೂ ಸೇರಿ ಮದನ್ ನಾಯ್ಕ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಮದನ್ ನಾಯ್ಕ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಧಾರವಾಡ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 8ರಂದು ಮದನ್ ನಾಯ್ಕ ಅವರು ಮೃತಪಟ್ಟಿದ್ದರು.

ಈ ಘಟನೆಯ ಬಳಿಕ ಸ್ಥಳೀಯ ಪೊಲೀಸರ ನಿಷ್ಕ್ರಿಯತೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಅಂದಿನ ರಾಜ್ಯ ಸರ್ಕಾರವು ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಮೃತ ಎಸಿಎಫ್ ಮದನ್ ನಾಯ್ಕ ಅವರ ಪತ್ನಿ ಸುಮತಿ ನಾಯ್ಕ ಅವರು ನೀಡಿದ ದೂರಿನ ಆಧಾರದಲ್ಲಿ ಸಿಐಡಿ ತನಿಖೆ ಆರಂಭಿಸಿತು. ತನಿಖೆಯ ವೇಳೆ, ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಮೊಸಳೆ ಪಾರ್ಕ್ ನಡೆಸುತ್ತಿದ್ದ ಮಾಲೀಕ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಪ್ರಕರಣದ ತೀರ್ಪನ್ನು ಶಿರಸಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಕಿಣಿ ಅವರು ಪ್ರಕಟಿಸಿದರು. ಸರ್ಕಾರದ ಪರವಾಗಿ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಮಾಳಗೇಕರ್ ಅವರು ವಾದ ಮಂಡಿಸಿದ್ದರು. ಪ್ರಕರಣದ ಶಿಕ್ಷೆ ಘೋಷಣೆಯ ಬಳಿಕ, ಅರಣ್ಯ ಇಲಾಖೆ ಹಾಗೂ ವಕೀಲರ ಸಂಘದಿಂದ ಪಬ್ಲಿಕ್ ಪ್ರಾಸಿಕ್ಯೂಟರ್ ರಾಜೇಶ್ ಮಾಳಗೇಕರ್ ಅವರಿಗೆ ಅಭಿನಂದನೆ ಹಾಗೂ ಸನ್ಮಾನ ಸಲ್ಲಿಸಲಾಯಿತು. ಅರಣ್ಯಾಧಿಕಾರಿಗಳ ಕರ್ತವ್ಯ ನಿರ್ವಹಣೆಯ ವೇಳೆ ನಡೆದ ದೌರ್ಜನ್ಯಕ್ಕೆ ನ್ಯಾಯಾಂಗ ಸ್ಪಂದನೆ ದೊರೆತಿದೆ ಎಂದು ಅರಣ್ಯ ಇಲಾಖೆ ಸಂತಸ ವ್ಯಕ್ತಪಡಿಸಿದೆ.

ಶಬರಿಮಲೆ ಚಿನ್ನ ಕಳ್ಳತನ ಕೇಸ್; ಪ್ರಧಾನ ಅರ್ಚಕ ಅರೆಸ್ಟ್

TAGGED:ACF Madan Naik murder case has a happy ending after exactly 14 years
Share This Article
Facebook Twitter Copy Link Print
Previous Article ಶಬರಿಮಲೆ ಚಿನ್ನ ಕಳ್ಳತನ ಕೇಸ್; ಪ್ರಧಾನ ಅರ್ಚಕ ಅರೆಸ್ಟ್
Next Article ಪಂದ್ಯದ ವೇಳೆ ಕುಸಿದು ಬಿದ್ದು ಭಾರತೀಯ ಕ್ರಿಕೆಟಿಗ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?