Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತದ ಮೇಲೆ 500% ಸುಂಕ ವಿಧಿಸಲು ಮುಂದಾದ ಟ್ರಂಪ್‌
ದೇಶಪ್ರಮುಖವಿದೇಶ

ಭಾರತದ ಮೇಲೆ 500% ಸುಂಕ ವಿಧಿಸಲು ಮುಂದಾದ ಟ್ರಂಪ್‌

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಅಮೆರಿಕಾ ಅಧ್ಯಕ್ಷ ಟ್ರಂಪ್ ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ 500% ಸುಂಕ ವಿಧಿಸಲು ಮುಂದಾಗಿದ್ದಾರೆ. ಈ ಮಸೂದೆ ಪ್ರಸ್ತಾವನೆ ಬಗ್ಗೆ ತಮ್ಮ ಅಧಿಕೃತ X ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ‌ ರಿಪಬ್ಲಿಕನ್‌ ಸೆನೆಟರ್ ಲಿಂಡ್ಸೆ ಗ್ರಾಹಂ ಮುಂದಿನ ವಾರ ಈ ಮಸೂದೆಗೆ ಅಂಗೀಕಾರಕ್ಕೆ ಮತದಾನ ನಡೆಯಲಿದ್ದು, ಭಾರತ ಮತ್ತು ಚೀನಾದಂತಹ ದೇಶಗಳ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ರಷ್ಯಾದ ಯುದ್ಧಕ್ಕೆ ಹಣಕಾಸು ನೀಡುವ ದೇಶಗಳನ್ನು ತಡೆಯುವ ಉದ್ದೇಶದಿಂದ ಟ್ರಂಪ್ ಈ ಕ್ರಮಕ್ಕೆ ಮುಂದಾಗಿದ್ದಾರೆಂದು ಎಂದು ತಿಳಿಸಿದ್ದಾರೆ.

ಒಂದು ವೇಳೆ ಮಸೂದೆಗೆ ಅಮೆರಿಕ ಸಂಸತ್‌ನ ಅನುಮೋದನೆ ಸಿಕ್ಕರೆ ರಷ್ಯಾದಿಂದ ಹೆಚ್ಚಿನ ತೈಲ ಖರೀದಿಸಿರುವ ಭಾರತ, ಬ್ರೆಜಿಲ್‌ನಂಥ ದೇಶಗಳು ಅಮೆರಿಕಕ್ಕೆ ರಫ್ತು ಮಾಡುವ ಉತ್ಪನ್ನಗಳ ಮೇಲೆ ಅಮೆರಿಕ ಶೇ.500ರಷ್ಟು ತೆರಿಗೆ ವಿಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

ಈಗಾಗಲೇ ಪ್ರತಿತೆರಿಗೆ ಹೆಸರಲ್ಲಿ ಭಾರತದ ಉತ್ಪನ್ನಗಳಿಗೆ ಅಮೆರಿಕ ಶೇ.50ರಷ್ಟು ತೆರಿಗೆ ಹೇರಿದೆ. ಅದರ ಬೆನ್ನಲ್ಲೇ ಭಾರತದ ಮೇಲೆ ಕಂಡುಕೇಳರಿಯದ ಪ್ರಮಾಣದ ತೆರಿಗೆ ದಾಳಿಗೆ ಟ್ರಂಪ್‌ ಸಜ್ಜಾಗಿದ್ದಾರೆ. ಆದರೆ ಭಾರತ ಈಗಾಗಲೇ ಅಮೆರಿಕದ ಜೊತೆಗೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಪ್ರಕ್ರಿಯೆಯಲ್ಲಿ ಅಂತಿಮ ಹಂತಕ್ಕೆ ಬಂದಿದೆ. ಒಂದು ವೇಳೆ ಆ ಒಪ್ಪಂದ ಜಾರಿಯಾದರೆ ಮಸೂದೆಯಲ್ಲಿ ಪ್ರಸ್ತಾಪ ಮಾಡಿದಷ್ಟು ತೆರಿಗೆ ಭಾರತದ ಮೇಲೆ ಬೀಳುವ ಸಾಧ್ಯತೆ ಇಲ್ಲ ಎಂದು ವಿಶ್ಲೇಷಿಸಲಾಗಿದೆ.

ಟ್ರಂಪ್‌ ಅಧಿಕಾರಕ್ಕೆ ಏರಿದ ಆರಂಭದಲ್ಲಿ ಭಾರತದಿಂದ ಅಮೆರಿಕಕ್ಕೆ ಆಮದಾಗುವ ವಸ್ತುಗಳ ಮೇಲೆ 25% ಸುಂಕ ವಿಧಿಸಿದ್ದರು. ಬಳಿಕ ರಷ್ಯಾದಿಂದ ಕಚ್ಚಾ ತೈಲವನ್ನು ಆಮದು ಮಾಡುತ್ತಿರುವುದಕ್ಕೆ ಪ್ರತಿಯಾಗಿ 25% ದಂಡದ ರೂಪದಲ್ಲಿ ಸುಂಕ ಹೇರಿದ್ದಾರೆ. ಈ ನಿರ್ಧಾರದಿಂದ ಭಾರತದ ಕೆಲವು ವಸ್ತುಗಳಿಗೆ ಈಗ 50% ಸುಂಕ ಹೇರಲಾಗಿದೆ.

https://x.com/LindseyGrahamSC/status/2009037587416027479?ref_src=twsrc%5Etfw%7Ctwcamp%5Etweetembed%7Ctwterm%5E2009037587416027479%7Ctwgr%5Eec45f80bd12d8a3b81b71d591ec0ccd485f4bf3a%7Ctwcon%5Es1_c10&ref_url=https%3A%2F%2Fpublictv.in%2Fus-sanctions-bill-donald-trump-500-tariff-targeting-india-russia-oil-purchase%2F

TAGGED:Trump threatens to impose 500% tariffs on India
Share This Article
Facebook Twitter Copy Link Print
Previous Article ಬಿಗ್‌ ಬಾಸ್‌ ಮಿಡ್‌ವೀಕ್‌ ಎಲಿಮಿನೇಷನ್‌! ಈ ಸ್ಪರ್ಧಿಯೇ ಮನೆಯಿಂದ ಹೊರಗೆ
Next Article ವಿಪರೀತ ಗೊರಕೆ ಹೊಡೆಯುತ್ತೀರಾ?ಹಾಗಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?