Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಂಗಳೂರಿನ ಸೆಂಟ್ರಲ್ ಪವರ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿಪಿಆರ್ಐ) ನ ಜಂಟಿ ನಿರ್ದೇಶಕ ರಾಜಾರಾಮ್ ಮೋಹನರಾವ್ ಚೆನ್ನು ಮತ್ತು ಸುಧೀರ್ ಗ್ರೂಪ್ ಆಫ್ ಕಂಪನಿಗಳ ನಿರ್ದೇಶಕ ಅತುಲ್ ಖನ್ನಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿದೆ.
ಸಿಬಿಐ ದಾಳಿ ವೇಳೆ 3.59 ಕೋಟಿ ರೂ. ನಗದು, 4 ಲಕ್ಷ ರೂ.ಗೂ ಅಧಿಕ ಮೌಲ್ಯದ ವಿದೇಶಿ ಕರೆನ್ಸಿಗಳು ಪತ್ತೆಯಾಗಿವೆ
ಸುಧೀರ್ ಗ್ರೂಪ್ ಆಫ್ ಕಂಪನೀಸ್’ ಉತ್ಪಾದಿಸಿದ ವಿದ್ಯುನ್ಮಾನ ಪರಿಕರಗಳಿಗೆ ಸಂಬಂಧಿಸಿ ಅನುಕೂಲಕರವಾದ ಪರೀಕ್ಷಾ ವರದಿಗಳನ್ನು ನೀಡಲು ಚೆನ್ನು ಅವರು ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಕಂಪನಿಯ ನಿರ್ದೇಶಕ ಅತುಲ್ ಖನ್ನಾ ಅವರನ್ನೂ ಬಂಧಿಸಲಾಗಿದೆ’ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.
ಎಫ್ಐಆರ್ ದಾಖಲಾದ ನಂತರ, ಸಿಬಿಐ ಅಧಿಕಾರಿಗಳು ಶುಕ್ರವಾರ ಬೆಂಗಳೂರಿನಲ್ಲಿ 9.5 ಲಕ್ಷ ರೂ. ಲಂಚದ ವಹಿವಾಟು ನಡೆಸುತ್ತಿದ್ದಾಗ ಜಂಟಿ ನಿರ್ದೇಶಕ ರಾಜಾರಾಮ್ ಮೋಹನರಾವ್ ಅವರನ್ನು ಬಂಧಿಸಿದ್ದಾರೆ.
ರಾಜಾರಾಮ್ ನಿವಾಸದಲ್ಲಿ ನಡೆದ ದಾಳಿಯ ಸಂದರ್ಭದಲ್ಲಿ, ಸಿಬಿಐ ಅಧಿಕಾರಿಗಳು 3.59 ಕೋಟಿ ರೂ. ನಗದು, 4,05,858 ರೂ. ಮೌಲ್ಯದ ವಿದೇಶಿ ಕರೆನ್ಸಿಗಳು, ಚಿನ್ನಾಭರಣಗಳು, ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಇದರಲ್ಲಿ ಅಮೆರಿಕನ್ ಡಾಲರ್, ಹಾಂಕಾಂಗ್ ಡಾಲರ್, ಸಿಂಗಾಪುರ್ ಡಾಲರ್, ಇಂಡೋನೇಷಿಯನ್ ರುಪಿಯಾ, ಮಲೇಷಿಯನ್ ರಿಂಗಿಟ್, ಯುರೋ, ಯುವಾನ್, ಸ್ವೀಡಿಷ್ ಕ್ರೋನಾ ಮತ್ತು ಯುಎಇ ದಿರ್ಹಮ್ಗಳು ಸೇರಿವೆ. ದಾಳಿಗಳ ಪರಿಣಾಮವಾಗಿ ಇಲ್ಲಿಯವರೆಗೆ ಸುಮಾರು 3.76 ಕೋಟಿ ರೂ.ಗಳಷ್ಟು (ವಿದೇಶಿ ಕರೆನ್ಸಿ ಸೇರಿದಂತೆ) ನಗದು ಪತ್ತೆಯಾಗಿದೆ. ಶೋಧ ಕಾರ್ಯ ಮುಂದುವರೆದಿದೆ.
https://www.newsics.com/2026/01/10/dental-student-commits-suicide-after-being-insulted-by-lecturer/