Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ನಟ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ನಿರ್ದೇಶಕಿ ಗೀತು ಮೋಹನ್‌ದಾಸ್ ಇದೀಗ ಸಾಕಷ್ಟು ಪ್ರಶಂಸೆ ಮತ್ತು ಕೆಲವು ಟೀಕೆಗಳನ್ನು ಎದುರಿಸುತ್ತಿದ್ದಾರೆ.
ಇದೀಗ ಟಾಕ್ಸಿಕ್ ಟೀಸರ್ ರಿಲೀಸ್ ಆದ ಬೆನ್ನೆಲೆ ಟಾಕ್ಸಿಕ್ ಟೀಸರ್ ನಲ್ಲಿ ಅಶ್ಲೀಲತೆ ಇದೆ ಎಂದು ಕೇಂದ್ರ ಚಲನಚಿತ್ರ ಪ್ರಮಾಣಿಕರಣ ಮಂಡಳಿ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ವಕೀಲ ಲೋಹಿತ್ ಹನುಮಪುರ ಎಂಬವರು ದೂರು ಕೊಟ್ಟಿದ್ದಾರೆ ಸಾರ್ವಜನಿಕ ನೈತಿಕತೆ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇದೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ದೂರು ನೀಡಿದ್ದಾರೆ.
A ಪ್ರಮಾಣ ಪತ್ರದೊಂದಿಗೆ ಬಿಡುಗಡೆ ಮಾಡುವುದು ಸೂಕ್ತ. ಟಾಕ್ಸಿಕ್ ಚಿತ್ರದ ನಿರ್ಮಾಪಕರಿಗೆ ತಕ್ಷಣ ನಿರ್ದೇಶನ ನೀಡಿ ವಯಸ್ಕ ವಿಷಯ ಇರುವ ಟೀಸರ್ ತೆಗೆಯಲು ಆದೇಶಿಸಬೇಕು. ಅಥವಾ ಸೂಕ್ತವಾಗಿ ತಿದ್ದುಪಡಿ ಮಾಡಲು ಆದೇಶಿಸಬೇಕು. ಇಲ್ಲವಾದರೆ ಸೆನ್ಸಾರ್ ಮಂಡಳಿಯ ವಿರುದ್ಧ ಪ್ರತಿಭಟನೆ ಮಾಡಲಾಗುತ್ತೆ ಎಂದು ಎಚ್ಚರಿಕೆ ನೀಡಲಾಗಿದೆ.
https://www.newsics.com/2026/01/10/novelist-actress-and-dialogue-writer-asha-raghu-is-no-more/