Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಡೆಲಿವರಿ ಬಾಯ್ ಓರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯುವತಿ ತನ್ನ ಮನೆಯ ಮುಂದೆ ಬಿದ್ದಿದ್ದ ಬಾಕ್ಸ್ ಅನ್ನು ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲೇ ಆರೋಪಿಯು ಆಕೆಯನ್ನು ಹಿಂಬಾಲಿಸಿದ್ದಾನೆ. ಬಳಿಕ ರಸ್ತೆಯ ಮಧ್ಯೆ ಬಟ್ಟೆ ಬಿಚ್ಚಿಕೊಂಡು ಅಸಭ್ಯವಾಗಿ ವರ್ತಿಸಿ, ಆಕೆಯನ್ನು ಕರೆಯುತ್ತಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದಕ್ಕೂ ಮೀರಿಸಿ, ಆರೋಪಿಯು ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.
ಯುವತಿ ಕಿರುಚಾಡುತ್ತಿದ್ದಂತೆಯೇ ಆರೋಪಿಯು ಅಲ್ಲಿಂದ ಓಡಿ ಹೋಗಿದ್ದಾನೆ. ಆದರೆ ಕೆಲವೇ ಕ್ಷಣಗಳಲ್ಲಿ ಬೈಕ್ ಮೂಲಕ ಮತ್ತೆ ಸ್ಥಳಕ್ಕೆ ಬಂದಿರುವ ಆರೋಪಿ, ಯುವತಿಯೊಂದಿಗೆ ವಾಗ್ವಾದ ನಡೆಸಿದ್ದಾನೆ ಎನ್ನಲಾಗಿದೆ. ಈ ವೇಳೆ ಆರೋಪಿಯು ಯುವತಿಯ ಕೆನ್ನೆಗೆ ಹಲ್ಲೆ ನಡೆಸಿ,ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಘಟನೆಯಿಂದ ಭೀತಿಗೊಳಗಾದ ಯುವತಿ ತಕ್ಷಣವೇ ಕೊತ್ತನೂರು ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಲೈಂಗಿಕ ಕಿರುಕುಳ, ದೈಹಿಕ ಹಲ್ಲೆ ಹಾಗೂ ಅತ್ಯಾ*ಚಾರಕ್ಕೆ ಯತ್ನ ಸಂಬಂಧಿತ ಕಲಂ ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
https://www.newsics.com/2026/01/10/the-kerala-story-will-be-back-on-screen/