Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಇಂಟರ್ನೆಟ್‌ನ ಅಪಾಯಗಳು ದಿನೇ ದಿನೇ ಹೆಚ್ಚುತ್ತಲೇ ಇವೆ, ಇದರೊಂದಿಗೆ ಆನ್ಲೈನ್ ವಂಚನೆ ಪ್ರಕರಣಗಳು ಕೂಡ ಏರಿಕೆಯಾಗಿವೆ. ಇದಕ್ಕೆ ಪೂರ್ವಕವಾಗಿ ಬೆಂಗಳೂರಿನಲ್ಲಿ ಯುವಕನೊಬ್ಬAI ಪ್ರೊಫೈಲ್ ಬಳಸಿಕೊಂಡು ಯುವಕನೊಬ್ಬ ₹1.5 ಲಕ್ಷ ಕಳೆದುಕೊಂಡಿದ್ದಾನೆ.
ಈಜಿಪುರದ ಈ ಯುವಕ, ಖಾಸಗಿ ಸಂಸ್ಥೆಯಲ್ಲಿ ಕ್ಲೌಡ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾನೆ. ಜನವರಿ 5 ರಂದು ಡೇಟಿಂಗ್ ಅಪ್ಲಿಕೇಶನ್ ಆ್ಯಪ್ನಲ್ಲಿ ಪ್ರೊಫೈಲ್ ರಚಿಸಿದ ತಕ್ಷಣ ಇಶಾನಿ ಎಂಬ ಯುವತಿಯಿಂದ ರಿಕ್ವೆಸ್ಟ್ ಬಂದಿದೆ.
ಇಬ್ಬರು ಕೂಡ ಏಕಾಂತವಾಗಿ ಮಾತನಾಡಲು ಶುರು ಮಾಡಿದ್ದರು. ಖಾಸಗಿ ವಿಚಾರಗಳನ್ನು ಹಂಚಿಕೊಂಡಿದ್ದರು. ನಂತರ ಈ ಇಬ್ಬರು ಕೂಡ ಮೊಬೈಲ್ ನಂಬರ್ ಶೇರ್ ಮಾಡಿಕೊಂಡು ಅಲ್ಲಿಯೂ ಮಾತನಾಡಲು ಶುರು ಮಾಡಿಕೊಂಡಿದ್ದರು.
ಅದೇ ದಿನ ಈ ಯುವಕನಿಗೆ ಯುವತಿ ಕಡೆಯಿಂದ ವಿಡಿಯೋ ಕಾಲ್ ಬಂದಿದೆ. ಬಟ್ಟೆಯನ್ನು ಬೆಚ್ಚಿ, ಆತನ ಮುಂದೆ ಬೆತ್ತಲೆಯಾಗಿದ್ದಾಳೆ. ನೀನು ಬಟ್ಟೆ ಬಿಚ್ಚು ಎಂದು ಹೇಳಿ, ಅವನನ್ನು ಬೆತ್ತಲೆ ಮಾಡಿದ್ದಾಳೆ. ಆತನ ಕೂಡ ಹುಡುಗಿಯ ತೆವಲಿನಲ್ಲಿ ಬಟ್ಟೆಯನ್ನು ಬಿಚ್ಚಿದ್ದಾನೆ. ವಿಡಿಯೋ ಕರೆ ಕೊನೆಗೊಳ್ಳುತ್ತದೆ. ಅಲ್ಲಿಯವರೆಗೆ ತಾನು ಮತ್ತು ಆಕೆ ಬೆತ್ತಲೆ ಆಗಿರುವ ವಿಡಿಯೋ ರೆಕಾರ್ಡ್ ಆಗಿದೆ ಎಂಬುದು ಆತನಿಗೆ ತಿಳಿದಿರುವುದಿಲ್ಲ. ಸ್ವಲ್ಪ ಸಮಯದ ನಂತರ, ಟೆಕ್ಕಿಗೆ ವೀಡಿಯೊ ಕರೆಯ ಸಮಯದಲ್ಲಿ ಸೆರೆಹಿಡಿಯಲಾದ ತನ್ನ ಖಾಸಗಿ ಚಿತ್ರಗಳ ಬಗ್ಗೆ ಸಂದೇಶ ಬಂದಿದೆ. ಈ ವೇಳೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ.
ಒಂದು ವೇಳೆ ಹಣ ನೀಡದಿದ್ದರೆ ಈ ವಿಡಿಯೋವನ್ನು ನಿನ್ನ ಸ್ನೇಹಿತರು, ಕುಟುಂಬಕ್ಕೆ ಕಳುಹಿಸಿವೆ. ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಳ್ಳುವೆ ಎಂದು ಹೇಳಿದ್ದಾಳೆ. ಇದರಿಂದ ಭಯಗೊಂಡ ಯುವಕ ಮೊದಲು 60 ಸಾವಿರ ಹಾಗೂ ನಂತರ 93,000 ರೂ.ಗಳನ್ನು ಕಳುಹಿಸಿದ್ದಾನೆ. ಇಷ್ಟು ಹಣ ನೀಡಿದ ನಂತರವೂ ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ
ಇದರಿಂದ ಬೇಸತ್ತು ಯುವಕ ತನ್ನ ಸ್ನೇಹಿತನಿಗೆ ಎಲ್ಲ ವಿಷಯ ಹೇಳಿದ್ದಾನೆ. ನಂತರ ಪೊಲೀಸರಿಗೆ ದೂರು ನೀಡಿದ್ದಾನೆ. ಅವರ ದೂರಿನ ಆಧಾರದ ಮೇಲೆ, ಕೇಂದ್ರ ಸೈಬರ್ ಅಪರಾಧ ಪೊಲೀಸ್ ಠಾಣೆಯು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ವಿಭಾಗಗಳು ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 308 (ಸುಲಿಗೆ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
https://www.newsics.com/2026/01/11/26-foot-tall-kempegowda-statue-to-be-built-in-mandya/