Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಿನಲ್ಲಿ ಕುಳಿತು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ; ಕಾರಣವೇನು?
ಕರ್ನಾಟಕಪ್ರಮುಖ

ಕಾರಿನಲ್ಲಿ ಕುಳಿತು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಮುಖಂಡ; ಕಾರಣವೇನು?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆ ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋಲ್ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ದಾವಣಗೆರೆ ಪಾಲಿಕೆಯ ಮಾಜಿ ಸದಸ್ಯ, ಬಿಜೆಪಿ ಮುಖಂಡ ಚಂದ್ರಶೇಖರ್‌ ಸಂಕೋಲ್‌ ಅವರು ತಮ್ಮ ಕಾರಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರಿನಲ್ಲಿ ಕುಳಿತು, ಪೆಟ್ರೋಲ್‌ ಸುರಿದುಕೊಂಡು ಬೆಂಕಿಹಚ್ಚಿಕೊಂಡಿದ್ದಾರೆ. ಕೌಟುಂಬಿಕ ಕಲಹವೇ ಈ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಚಂದ್ರಶೇಖರ್‌ ಅವರ ಇಬ್ಬರು ಮಕ್ಕಳು ಇತ್ತೀಚೆಗೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು. ಇಬ್ಬರೂ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಹೊತ್ತಲ್ಲಿ ಚಂದ್ರಶೇಖರ್‌ ಸಂಕೋಲ್‌ ಜೀವ ಬಿಟ್ಟಿದ್ದಾರೆ. ಇನ್ನು ನಾಗನೂರು ಸಮೀಪದ ತೋಟದಲ್ಲಿ ಈ ಘಟನೆ ನಡೆದಿದ್ದು, ಹದಡಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ
ನಾಗನೂರು ಗ್ರಾಮ ಇರುವುದು ದಾವಣಗೆರೆಯ ಹೊರವಲಯದಲ್ಲಿ. ಅಲ್ಲಿ ಇದ್ದ ತಮ್ಮದೇ ಜಮೀನಿನಲ್ಲಿಯೇ ಚಂದ್ರಶೇಖರ್‌ ಜೀವ ಬಿಟ್ಟಿದ್ದಾರೆ. ಕಾರಿನಲ್ಲಿ ಕುಳಿತಿದ್ದ ಅವರು ಜೊತೆಗೆ ಟೈಯರ್‌ಗಳನ್ನ ಇಟ್ಟುಕೊಂಡಿದ್ದರು. ನಂತರ ಪೆಟ್ರೋಲ್‌ ಸುರಿದು, ಬೆಂಕಿ ಹಚ್ಚಿಕೊಂಡಿದ್ದಾರೆ. ಅಲ್ಲಿ ಟೈಯರ್‌ಗಳು ಬೇರೆ ಇದ್ದಿದ್ದರಿಂದ ಕ್ಷಣಾರ್ಧದಲ್ಲಿ ಕಾರು ಸುಟ್ಟುಕರಕಲಾಗಿದೆ. ಅದರಲ್ಲಿ ಕುಳಿತಿದ್ದ ಚಂದ್ರಶೇಖರ್‌ ಸಂಕೋಲ್‌ ಬೆಂದು ಹೋಗಿದ್ದಾರೆ. ಇವರು ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಮತ್ತು ರೀತಿ ಇಡಿ ಜಿಲ್ಲೆಯನ್ನ ಬೆಚ್ಚಿ ಬೀಳಿಸಿದೆ.

ಚಂದ್ರಶೇಖರ್‌ ಅವರು ತಮ್ಮ ಗ್ರಾಮದಲ್ಲಿ ಸಿಮೆಂಟ್‌, ಕಬ್ಬಿಣದ ಸಾಮಗ್ರಿಗಳ ಅಂಗಡಿ ನಡೆಸುತ್ತಿದ್ದರು. ಅಲ್ಲದೆ ಬಿಜೆಪಿ ಪಕ್ಷದಲ್ಲಿಯೂ ಗುರುತಿಸಿಕೊಂಡಿದ್ದರು. ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರಿಂದ ಇಡೀ ಜಿಲ್ಲೆಯಲ್ಲಿ ಪರಿಚಿತರೂ ಆಗಿದ್ದರು. ಇವರು ಸಾಲವನ್ನೂ ಮಾಡಿಕೊಂಡಿದ್ದರು ಎನ್ನಲಾಗಿದೆ.

ಆದರೆ ಕುಟುಂಬದಲ್ಲಿನ ಕಲಹವೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಮನೆಯ ಜಗಳ ನೋಡಿ ಸಾಕಾಗಿ ಅವರ ಮಗ ಮತ್ತು ಮಗಳು ನೇಣು ಬಿಗಿದು ಕೊಳ್ಳಲು ಯತ್ನಿಸಿದ್ದಾರೆ. ಆಗ ಸ್ಥಳೀಯರೇ ಅವರನ್ನ ಕಾಪಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಈ ವಿಚಾರ ಗೊತ್ತಾಗುತ್ತಿದ್ದಂತೆ ಚಂದ್ರಶೇಖರ್‌ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ;ಆರೋಪಿಗಳು ಅರೆಸ್ಟ್

TAGGED:BJP leader commits suicide sitting in car; What is the reason?
Share This Article
Facebook Twitter Copy Link Print
Previous Article ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ;ಆರೋಪಿಗಳು ಅರೆಸ್ಟ್
Next Article ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್, ಇಂಟರ್ನೆಟ್ ಬಳಸಲ್ವಂತೆ: ಯಾಕೆ?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?