Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್, ಕೊಲೆಗಾರನ ಬಂಧಿಸಿದ ಪೊಲೀಸರು
ಕರ್ನಾಟಕಪ್ರಮುಖ

ಟೆಕ್ಕಿ ಸಾವು ಪ್ರಕರಣಕ್ಕೆ ಟ್ವಿಸ್ಟ್, ಕೊಲೆಗಾರನ ಬಂಧಿಸಿದ ಪೊಲೀಸರು

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಟೆಕ್ಕಿ ಮಹಿಳೆಯ ನಿಗೂಢ ಸಾವು ಪ್ರಕರಣಕ್ಕೆ ಸ್ಪೋಟಕ ತಿರುವು ದೊರೆತಿದೆ.

ಆರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದ ಟೆಕ್ಕಿ ಶರ್ಮಿಳಾ ಅವರ ಸಾವು, ವಾಸ್ತವವಾಗಿ ಕೊಲೆ ಎಂಬುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರ್ಮಿಳಾರನ್ನು ಪ್ರೀತಿಸುತ್ತಿದ್ದ ಕರ್ನಲ್ ಕುರೈ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸವಿದ್ದರು. ಆರೋಪಿ ಕರ್ನಲ್ ಕುರೈ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿತ್ತು. ಆದರೆ ಯುವಕ ಕುರೈ ಶರ್ಮಿಳಾಳನ್ನು ಪ್ರೀತಿ ಮಾಡ್ತಿದ್ದ. ಈ ವಿಚಾರ ತಿಳಿಯದ ಟೆಕ್ಕಿ ಶರ್ಮಿಳಾ ಕೊಲೆಯಾಗಿದ್ದಾಳೆ.

ಈ ಸಂಬಂಧ ಶರ್ಮಿಳಾ ಪ್ರಿಯಕರ ಕೇರಳ ಮೂಲದ ಕರ್ನಲ್ ಕುರೈ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ರಾಮಮೂರ್ತಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು, ದಟ್ಟ ಹೊಗೆ ಆವರಿಸಿದ್ದು, ಈ ದುರ್ಘಟನೆಯಲ್ಲಿ ಉಸಿರುಗಟ್ಟಿ ಮಂಗಳೂರು ಮೂಲದ 34 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಶರ್ಮಿಳಾ ಮೃತಪಟ್ಟಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ರಾಮಮೂರ್ತಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ ಕೊನೆಗೂ ಬಯಲಾಗಿದೆ. ತನಿಖೆ ವೇಳೆ ಟೆಕ್ಕಿ ಶರ್ಮಿಳಾ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಟೆಕ್ಕಿ ಶರ್ಮಿಳಾಳನ್ನ ಓನ್ ಸೈಡ್ ಲವ್ ಮಾಡ್ತಿದ್ದ, ಎದುರು ಮನೆಯ ಕೇರಳ ಮೂಲದ ಯುವಕ ಕರ್ನಲ್ ಕುರೈ ಕೊಲೆಗಾರ ಎಂದು ಬಯಲಾಗಿದೆ. ಈತನಿಗೆ ಇನ್ನೂ 18 ವರ್ಷವಾಗಿದ್ದು, ಈತ ಕಾಲೇಜು ಓದುತ್ತಿದ್ದ. ಆದ್ರೆ, ತನ್ನ ವಯಸ್ಸಿಗಿಂತ ದೊಡ್ಡವಳಾಗಿದ್ದ 34 ವರ್ಷದ ಟೆಕ್ಕಿ ಶರ್ಮಿಳಾ ಮೇಲೆ ಲವ್ ಆಗಿದೆ. ಆದ್ರೆ, ಈ ವಿಚಾರವನ್ನು ಶರ್ಮಿಳಾಗೆ ಹೇಳಿರಲಿಲ್ಲ. ತಾನೇ ಮನಸ್ಸಲ್ಲಿ ಇಟ್ಟುಕೊಂಡು ಕೊನೆಗೆ ಆಕೆಯನ್ನು ಭೀಕರವಾಗಿ ಹತ್ಯೆಗೈದಿದ್ದಾನೆ.

ಬಂಧಿತ ಆರೋಪಿ ಕೇರಳ ಮೂಲದವನು ಎಂದು ತಿಳಿದುಬಂದಿದೆ. ಶರ್ಮಿಳಾ ಕಳೆದ ಎರಡು ವರ್ಷಗಳಿಂದ ಸುಬ್ರಹ್ಮಣ್ಯ ಲೇಔಟ್‌ನಲ್ಲಿ ವಾಸವಿದ್ದರು. ಇನ್ನು ಆರೋಪಿ ಕರ್ನಲ್ ಕುರೖ ಪಕ್ಕದ ಮನೆ ವಾಸಿಯಾಗಿದ್ದರಿಂದ ಮುಖ ಪರಿಚಯವಿದ್ದು, ಪ್ರತಿದಿನ ಇಬ್ಬರೂ ಮಾತನಾಡುತ್ತಿದ್ದು, ಇದರ ನಡುವೆ ಕುರೈಗೆ ಶರ್ಮಿಳನ ಮೇಲೆ ಲವ್ ಆಗಿದೆ. ಆದ್ರೆ, ಈ ಲವ್ ವಿಚಾರವನ್ನು ಶರ್ಮಿಳಾಗೆ ಹೇಳಿರಲಿಲ್ಲ. ಹೀಗೆ ಒಂದು ದಿನ ಅಂದರೆ ಜನವರಿ 3ರಂದು ಕರ್ನಲ್ ಕುರೈ, ಬಾಲ್ಕನಿ ಮೂಲಕ ಶರ್ಮಿಳಾಳ ಮನೆಯೊಳಗೆ ನುಗ್ಗಿದ್ದು, ಸಡನ್ ಆಗಿ ಹಿಂಬದಿಯಿಂದ ಶರ್ಮಿಳಾಳನ್ನು ಅಪ್ಪಿಕೊಂಡಿದ್ದ. ಆಗ ಶರ್ಮಿಳಾ ಕರ್ನಲ್ ಕುರೈನಿಂದ ಬಿಡಿಸಿಕೊಳ್ಳಲು ಯತ್ನಿಸಿದ್ದಾಳೆ. ಆ ವೇಳೆ ಕುರೈ, ಶರ್ಮಿಳಾಳ ಕುತ್ತಿಗೆ ಭಾಗಕ್ಕೆ ಬಲವಾಗಿ ಹೊಡೆದಿದ್ದು, ಇದರಿಂದ ಶರ್ಮಿಳಾ, ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಬಳಿಕ ಶರ್ಮಿಳಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಅಲ್ಲದೇ ಸಾಕ್ಷಿ ನಾಶ ಮಾಡಲು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎನ್ನುವುದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

ಮೃತ ಶರ್ಮಿಳಾ (34) ಅವರು ಮಂಗಳೂರಿನ ಕಾವೂರು ಮೂಲದವರು. ಕಳೆದ ಒಂದೂವರೆ ವರ್ಷಗಳಿಂದ ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸ್ನೇಹಿತೆಯೊಂದಿಗೆ ವಾಸವಾಗಿದ್ದರು. ಮನೆ ಸಮೀಪದ ಖಾಸಗಿ ಸಾಫ್ಟ್‌ವೇರ್ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಘಟನೆ ನಡೆದ ದಿನ ಶರ್ಮಿಳಾಗೆ ರಜೆ ಇದ್ದು, ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು. ಇದನ್ನೇ ಗಮನಿಸಿ ಕರ್ನಲ್ ಮನೆಯೊಳಗೆ ನುಗ್ಗಿ ಈ ರೀತಿ ಕೃತ್ಯ ಎಸಗಿದ್ದಾನೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್, ಇಂಟರ್ನೆಟ್ ಬಳಸಲ್ವಂತೆ: ಯಾಕೆ?

TAGGED:police arrest killerTechie's death case gets a twist
Share This Article
Facebook Twitter Copy Link Print
Previous Article ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮೊಬೈಲ್, ಇಂಟರ್ನೆಟ್ ಬಳಸಲ್ವಂತೆ: ಯಾಕೆ?
Next Article ಹೊಸ ಮನೆಗೆ 1 ಕೋಟಿಯ ಸ್ಟೌವ್‌, 14 ಲಕ್ಷದ ಫ್ರಿಜ್‌: ವೈರಲ್ ವಿಡಿಯೋ ನೋಡಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?