Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹುಬ್ಬಳ್ಳಿ: ಮಹಿಳೆಗೆ ಮದ್ಯ ಕುಡಿಸಿ ಆಕೆಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಸಂತ್ರಸ್ತೆ ನೀಡಿದ್ದ ದೂರಿನ ಆಧಾರದಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಕಾಮುಕರು ಕೃತ್ಯದ ವಿಡಿಯೋ ಕೂಡ ಮಾಡಿಕೊಂಡು ಅದನ್ನು ಹರಿಬಿಟ್ಟಿದ್ದರು ಎನ್ನಲಾಗಿದೆ. ಇನ್ನು ಸಂತ್ರಸ್ತೆಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗ್ತಿದೆ.
ಹುಬ್ಬಳ್ಳಿಯಲ್ಲಿ ನಡೆದ ಈ ಕೃತ್ಯದ ಆರೋಪಿಗಳಾದ ಶಿವಾನಂದ್ (29) ಮತ್ತು ಗಣೇಶ್ ಗಿಡ್ಡಣ್ಣವರ (31) ಇಬ್ಬರನ್ನೂ ಬಂಧನ ಮಾಡಲಾಗಿದೆ. ಬಂಧಿತರು ಶಿವಶಂಕರ ಕಾಲೋನಿ ನಿವಾಸಿಗಳು ಆಗಿದ್ದು, ಈ ಇಬ್ಬರನ್ನು ಮೇಲೆ ದೈಹಿಕ ಹಲ್ಲೆ ನಡೆಸಿರುವ ಸ್ಥಳೀಯರ ವಿರುದ್ಧ ಪ್ರತಿ ದೂರು ದಾಖಲಾಗಿದದ್ದು, ಅತ್ಯಾಚಾರ ಕ್ಕೊಳಗಾದ ಮಹಿಳೆಗೆಯನ್ನ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ.
ಘಟನೆ ಬಗ್ಗೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಪ್ರತಿಕ್ರಿಯಿಸಿದ್ದು, ಜ.9ರಂದು ಅಂಬೇಡ್ಕರ್ ಮೈದಾನದಿಂದ ಇಬ್ಬರು ಯುವಕರು ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದಿದ್ದರು. ಮದ್ಯ ಕುಡಿಸಿ ಅನುಚಿತವಾಗಿ ವರ್ತಿಸಿ ವಿಡಿಯೋ ಮಾಡಿಕೊಂಡಿದ್ದಾರೆ. ಒಂದು ದಿನದ ನಂತರ ಮಹಿಳೆ ಠಾಣೆಗೆ ಬಂದು ಅತ್ಯಾಚಾರ ಮಾಡಿ ವಿಡಿಯೋ ಮಾಡಿ ಹರಿಬಿಟ್ಟ ಬಗ್ಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ಆರೋಪಿಗಳಾದ ಶಿವಾನಂದ, ಗಣೇಶ್ಗೆ ಸ್ಥಳೀಯರು ಥಳಿಸಿದ್ದಾರೆ. ಕಟ್ಟಿಹಾಕಿ ತಲೆ ಬೋಳಿಸಿದ್ದಾರೆ. ಹಲ್ಲೆ ಸಂಬಂಧ ನಾಲ್ವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿಸಿದ್ದಾರೆ.
ಗಂಡನಿಗೆ 30 ಲಕ್ಷ ಹಣ, ಚಿನ್ನಕ್ಕೆ ಬ್ಲ್ಯಾಕ್ ಮೇಲ್ ಮಾಡಿದ ಪತ್ನಿ: ಬೀದಿಗೆ ಬಂತು ‘ಬೆತ್ತಲೆ’ ಫೋಟೋ ಕಿತ್ತಾಟ