Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶೀತಗಾಳಿ, ಮೈ ನಡುಗುವ ಚಳಿ ಪ್ರಮಾಣ ತಗ್ಗಿದ್ದು, ಅಲ್ಲಲ್ಲಿ ಬಿಸಿಲು, ಮೋಡ ಕವಿದ ವಾತಾವರಣವಿದೆ.
ಈ ನಡುವೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.
https://www.newsics.com/2026/01/13/husband-caught-red-handed-while-in-bed-with-his-mistress/