Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಚೆನ್ನೈ: ತಮಿಳುನಾಡಿನಲ್ಲಿ ಮಹಿಳೆಯರನ್ನು ಓದಲು, ಅಧ್ಯಯನ ಮಾಡಲು ಪ್ರೋತ್ಸಾಹಿಸಿದರೆ, ಉತ್ತರ ಭಾರತದಲ್ಲಿ ಮಹಿಳೆಯರನ್ನು ಮದುವೆಯಾಗಲು, ಮಕ್ಕಳನ್ನು ಹೆರಲು ಪ್ರೋತ್ಸಾಹಿಸಲಾಗುತ್ತದೆ ಎಂದು ಡಿಎಂಕೆ ಸಂಸದ ದಯಾನಿಧಿ ಮಾರನ್ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.
ಚೆನ್ನೈ ಸೆಂಟ್ರಲ್‌ನಿಂದ ನಾಲ್ಕು ಬಾರಿ ಡಿಎಂಕೆ ಸಂಸದರಾಗಿರುವ ದಯಾನಿಧಿ ಮಾರನ್ ಅವರು, ಉತ್ತರ ಭಾರತದ ಹೆಣ್ಣುಮಕ್ಕಳನ್ನು ತಮಿಳುನಾಡಿನ ಹೆಣ್ಣುಮಕ್ಕಳ ಜತೆ ಹೋಲಿಸಿ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.
ಕ್ವಾಯ್ದ್-ಇ-ಮಿಲ್ಲತ್ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಮಾರನ್, ನಮ್ಮಲ್ಲಿ ಹೆಣ್ಣುಮಕ್ಕಳು ಲ್ಯಾಪ್‌ಟಾಪ್‌ನೊಂದಿಗೆ ಆತ್ಮವಿಶ್ವಾಸ ಮತ್ತು ಹೆಮ್ಮೆಯಿಂದಿರಬೇಕು. ನೀವು ಸಂದರ್ಶನಕ್ಕೆ ಹಾಜರಾಗಲಿ ಅಥವಾ ಸ್ನಾತಕೋತ್ತರ ಪದವಿ ಪಡೆಯಲಿ. ಆ ವಿಶ್ವಾಸ ತಮಿಳುನಾಡಿನಲ್ಲಿದೆ. ಇಲ್ಲಿ ನಾವು ಹೆಣ್ಣುಮಕ್ಕಳನ್ನು ಓದಲು, ಕಲಿಯಲು, ಉದ್ಯೋಗಕ್ಕೆ ಹೋಗಲು ಪ್ರೋತ್ಸಾಹಿಸುತ್ತೇವೆ. ಆದರೆ ಉತ್ತರ ಭಾರತ ಭಾಗದಲ್ಲಿ ಹುಡುಗಿಯರಿಗೆ ಕೆಲಸಕ್ಕೆ ಹೋಗಬೇಡಿ, ಮನೆಯಲ್ಲಿರಿ, ಅಡುಗೆಮನೆಯಲ್ಲಿರಿ, ಮಗುವನ್ನು ಹೆರಿ, ಅದು ನಿಮ್ಮ ಕೆಲಸ ಎನ್ನುತ್ತಾರೆ.
ಇದು ತಮಿಳುನಾಡು, ದ್ರಾವಿಡ ರಾಜ್ಯ, ಕಲೈನಾರ್ (ಮಾಜಿ ಮುಖ್ಯಮಂತ್ರಿ ದಿವಂಗತ ಎಂ ಕರುಣಾನಿಧಿ), ಅಣ್ಣಾ (ಮಾಜಿ ಮುಖ್ಯಮಂತ್ರಿ ಸಿ ಎನ್ ಅಣ್ಣಾದೊರೈ ಮತ್ತು (ಮುಖ್ಯಮಂತ್ರಿ) ಎಂ.ಕೆ. ಸ್ಟಾಲಿನ್ ಅವರ ನಾಡು. ಇಲ್ಲಿ, ನಿಮ್ಮ ಪ್ರಗತಿ ತಮಿಳುನಾಡಿನ ಪ್ರಗತಿಯಾಗಿದೆ. ಅದಕ್ಕಾಗಿಯೇ ಜಾಗತಿಕ ಕಂಪನಿಗಳು ಚೆನ್ನೈಗೆ ಬರುತ್ತವೆ. ಇಲ್ಲಿರುವ ಎಲ್ಲರೂಒಈ ತಮಿಳಿನಲ್ಲಿ ಮಾತ್ರವಲ್ಲ, ಇಂಗ್ಲಿಷ್‌ನಲ್ಲೂ ಶಿಕ್ಷಣ ಪಡೆದಿದ್ದಾರೆ. ಅವರು ಮುನ್ನಡೆಸುತ್ತಾರೆ. ಸರ್ಕಾರವು ಮಹಿಳೆಯರ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಾವು ಯಾವಾಗಲೂ ನಿಮ್ಮ ಪ್ರೀತಿ ಮತ್ತು ಬೆಂಬಲವನ್ನು ಪಡೆಯುತ್ತೇವೆ ಎಂದು ಬಿಲಿಯನೇರ್ ಕಲಾನಿಧಿ ಮಾರನ್ ಅವರ ಸಹೋದರ ದಯಾನಿಧಿ ಮಾರನ್ ಹೇಳಿದರು.
ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ಟೀಕೆ ವ್ಯಕ್ತವಾಗಿದೆ. ತಮಿಳುನಾಡಿನ ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ, ಮತ್ತೊಮ್ಮೆ ದಯಾನಿಧಿ ಮಾರನ್ ಉತ್ತರ ಭಾರತೀಯರನ್ನು ನಿಂದಿಸಿದ್ದಾರೆ. ದಯಾನಿಧಿ ಮಾರನ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲ ಎಂದು ನಾನು ಭಾವಿಸುತ್ತೇನೆ ಎಂದರು.
ದಯಾನಿಧಿ ಮಾರನ್ ಅವರ ಹೇಳಿಕೆಗಳು ದುರದೃಷ್ಟಕರ ಎಂದು ಬಿಜೆಪಿ ನಾಯಕಿ ಅನಿಲಾ ಸಿಂಗ್ ಹೇಳಿದ್ದಾರೆ. ನಾವು ಭಾರತದಲ್ಲಿ ವಾಸಿಸುತ್ತಿದ್ದೇವೆ. ಭಾರತವು ಶಕ್ತಿಯನ್ನು ಪೂಜಿಸುತ್ತದೆ ಎಂಬುದನ್ನು ಅವರು ಮರೆತಿದ್ದಾರೆ. ಶಕ್ತಿಯನ್ನು ಉತ್ತರ, ದಕ್ಷಿಣ, ಪೂರ್ವ ಮತ್ತು ಪಶ್ಚಿಮ ಎಂದು ವಿಂಗಡಿಸಬಹುದು ಎಂದು ಅವರು ಭಾವಿಸಿದರೆ, ಅವರಿಗೆ ನಮ್ಮ ಸಂಸ್ಕೃತಿ ಬಗ್ಗೆ ಅರಿವಿಲ್ಲ ಎಂದರ್ಥ. ಅವರು ಮೈತ್ರಿ ಮಾಡಿಕೊಂಡಿರುವ ಪಕ್ಷದಲ್ಲಿ ಸೋನಿಯಾ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ವಾದ್ರಾ ಅಥವಾ ನಮ್ಮ ಅಧ್ಯಕ್ಷೆ ದ್ರೌಪದಿ ಮುರ್ಮು ಬಗ್ಗೆ ಮಹಿಳೆಯರಲ್ಲವೇ, ಈ ವಿಭಜಕ ರಾಜಕೀಯ ಕೆಲಸ ಮಾಡುವುದಿಲ್ಲ ಎಂದರು.
ಆದರೆ ಡಿಎಂಕೆ, ದಯಾನಿಧಿ ಮಾರನ್ ಅವರ ಹೇಳಿಕೆಗಳನ್ನು ಸಮರ್ಥಿಸಿಕೊಂಡಿದೆ. ಇದು ರಾಜ್ಯವನ್ನು ಆಳುತ್ತಿರುವ ಪಕ್ಷವನ್ನು ಅವಲಂಬಿಸಿರುತ್ತದೆ. ಈಗ ಕಾಂಗ್ರೆಸ್ ಮಹಿಳೆಯರಿಗೆ ಸಬಲೀಕರಣ ನೀಡುತ್ತಿದೆ. ಕಾಂಗ್ರೆಸ್ ಎಲ್ಲೆಲ್ಲಿ ಆಡಳಿತ ನಡೆಸುತ್ತಿದೆಯೋ ಅಲ್ಲೆಲ್ಲಾ ಅವರು ಮಹಿಳೆಯರ ಶಿಕ್ಷಣಕ್ಕಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಲ್ಲಿ ತಮಿಳುನಾಡಿನಲ್ಲಿ, ನಾವು ಮಹಿಳೆಯರಿಗಾಗಿ ಹೋರಾಡಿದ್ದೇವೆ, ಅವರನ್ನು ಸಬಲೀಕರಣಗೊಳಿಸಿದ್ದೇವೆ. ನಾವು ಅವರಿಗೆ ಶಿಕ್ಷಣ ನೀಡಿದ್ದೇವೆ. ನಾವು ಅವರಿಗೆ ಉದ್ಯೋಗ ನೀಡಿದ್ದೇವೆ. ಸರ್ಕಾರಿ ಉದ್ಯೋಗಗಳಲ್ಲಿಯೂ ನಾವು ಸ್ಥಾನಗಳನ್ನು ಕಾಯ್ದಿರಿಸಿದ್ದೇವೆ. ನಾವು ಮೊದಲಿನಿಂದಲೂ ಮಹಿಳಾ ಹಕ್ಕುಗಳ ಪ್ರಗತಿಗಾಗಿ ಕೆಲಸ ಮಾಡುತ್ತಿದ್ದೇವೆ. ಉತ್ತರದಲ್ಲಿ, ಮಹಿಳೆಯರಿಗಾಗಿ ಹೋರಾಡಲು ಯಾರೂ ಇಲ್ಲ ಅಷ್ಟೆ ಎಂದು ಡಿಎಂಕೆಯ ಟಿಕೆಎಸ್ ಎಳಂಗೋವನ್ ಹೇಳಿದ್ದಾರೆ.
https://twitter.com/i/status/2011446917344178420
ಬಳೆ ಚೆನ್ನಾಗಿದೆ ಎಂದಿದ್ದಷ್ಟೇ, ಆಕೆ ಬಳೆಯನ್ನೇ ಬಿಚ್ಚಿಕೊಟ್ಟಳು! ಯುವತಿಯ ಔದಾರ್ಯಕ್ಕೆ ನೆಟ್ಟಿಗರು ಫುಲ್ ಖುಷ್
ಚಳಿಗಾಲದಲ್ಲಿ ದೇಹದಲ್ಲಿರುವ ಪ್ಲೇಟ್‌ಲೆಟ್ ಕಡಿಮೆಯಾಗುವುದಕ್ಕೆ ಕಾರಣವೇನು?