Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ
ಕರ್ನಾಟಕಪ್ರಮುಖ

ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಶಾಲೆ ತರಗತಿಯಲ್ಲಿ ಶಿಕ್ಷಕ ಆತ್ಮಹತ್ಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಶಿವಮೊಗ್ಗ: ಕರ್ತವ್ಯನಿರತ ಶಿಕ್ಷಕರೊಬ್ಬರು ಶಾಲಾ ಕೊಠಡಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ ಶಿಕಾರಿಪುರ ತಾಲ್ಲೂಕಿನ ಬಳೂರು ಗ್ರಾಮದಲ್ಲಿ ನಡೆದಿದೆ.
ಶಿಕಾರಿಪುರ ತಾಲ್ಲೂಕಿನ ಜೀನಹಳ್ಳಿ ಗ್ರಾಮದ ನಿವಾಸಿ, ಪ್ರಸ್ತುತ ಹೊನ್ನಾಳಿಯಲ್ಲಿ ವಾಸವಿದ್ದ ಧನಂಜಯ (51) ಆತ್ಮ*ಹತ್ಯೆ ಮಾಡಿಕೊಂಡ ಶಿಕ್ಷಕ. ಇವರು ಎಂದಿನಂತೆ ಬೆಳಗ್ಗೆ ಶಾಲೆಗೆ ಆಗಮಿಸಿದ್ದರು. ಶಾಲಾ ಕೆಲಸಕ್ಕೆ ಮುನ್ನ ಗ್ರಾಮದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನೂ ಮುಗಿಸಿ ಶಾಲೆಗೆ ಬಂದಿದ್ದರು. ನಂತರ ವಿದ್ಯಾರ್ಥಿಗಳಿಗೆ ಪಾಠವನ್ನೂ ಮಾಡಿದ್ದರು. ನಂತರ ಈ ಕೃತ್ಯಕ್ಕೆ ಕೈ ಹಾಕಿದ್ದಾರೆ.
ವಿರಾಮದ ವೇಳೆ ನಡೆದ ದುರಂತ
ಮಧ್ಯಾಹ್ನದ ವಿರಾಮದ ಸಮಯದಲ್ಲಿ, ತರಗತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿದ ಶಿಕ್ಷಕರು, ‘ನನಗೆ ಕೆಲವು ದಾಖಲೆಗಳನ್ನು ಬರೆಯುವ ಕೆಲಸವಿದೆ’ ಎಂದು ಹೇಳಿ ಕೊಠಡಿಯ ಬಾಗಿಲು ಮತ್ತು ಕಿಟಕಿಗಳನ್ನು ಹಾಕಿಕೊಂಡಿದ್ದಾರೆ. ಬಹಳ ಹೊತ್ತಾದರೂ ಶಿಕ್ಷಕರು ಹೊರಗೆ ಬಾರದಿರುವುದನ್ನು ಮತ್ತು ವಿದ್ಯಾರ್ಥಿಗಳು ಹೊರಗಡೆ ಕುಳಿತಿರುವುದನ್ನು ಗಮನಿಸಿದ ಸಹ ಶಿಕ್ಷಕರು ಅನುಮಾನಗೊಂಡು ಬಾಗಿಲು ತಟ್ಟಿದ್ದಾರೆ. ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ, ಕಿಟಕಿಯ ಮೂಲಕ ಇಣುಕಿ ನೋಡಿದಾಗ ವಿಷಯ ಬೆಳಕಿಗೆ ಬಂದಿದೆ. ತಕ್ಷಣವೇ ಗ್ರಾಮಸ್ಥರು ಮತ್ತು ಶಿಕ್ಷಕರು ಸೇರಿ ಬಾಗಿಲು ಒಡೆದು ಒಳಪ್ರವೇಶಿಸಿ, ಧನಂಜಯ ಅವರನ್ನು ಕೆಳಗಿಳಿಸಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಪ್ರಯತ್ನಿಸಿದರಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು.
ಕಾರಣ ನಿಗೂಢ
ಶಿಕ್ಷಕರ ಆತ್ಮ*ಹತ್ಯೆಗೆ ನಿಖರ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಶಾಲೆಗೆ ಬಂದಾಗ ಅವರು ಸಹಜವಾಗಿಯೇ ಇದ್ದರು ಎಂದು ಸಹೋದ್ಯೋಗಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಶಿಕಾರಿಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್ನಲ್ಲಿಟ್ಟ ಪತಿ

TAGGED:Teacher commits suicide in classroom after sending students out
Share This Article
Facebook Twitter Copy Link Print
Previous Article ಪತ್ನಿಯ ಕೊಂದು ರುಂಡ ಕತ್ತರಿಸಿ ಡ್ರಮ್ನಲ್ಲಿಟ್ಟ ಪತಿ
Next Article ಫೆಬ್ರವರಿ 13 ರಿಂದ  ಹಂಪಿ ಉತ್ಸವ-2026

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?