Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಚಳಿಗಾಲದಲ್ಲಿ ದೇಹದಲ್ಲಿರುವ ಪ್ಲೇಟ್‌ಲೆಟ್‌ ಕಡಿಮೆಯಾಗುವುದಕ್ಕೆ ಕಾರಣವೇನು?
ಆರೋಗ್ಯಪ್ರಮುಖಲೈಫ್‌ಸ್ಟೈಲ್

ಚಳಿಗಾಲದಲ್ಲಿ ದೇಹದಲ್ಲಿರುವ ಪ್ಲೇಟ್‌ಲೆಟ್‌ ಕಡಿಮೆಯಾಗುವುದಕ್ಕೆ ಕಾರಣವೇನು?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಕೆಲವರ ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾಗುತ್ತದೆ, ಇದನ್ನು ನಿರ್ಲಕ್ಷಿಸುವುದು ಬಹಳ ಅಪಾಯಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಪ್ಲೇಟ್‌ಲೆಟ್‌ಗಳು ರಕ್ತದ ಪ್ರಮುಖ ಭಾಗವಾಗಿದ್ದು, ರಕ್ತ ಹೆಪ್ಪುಗಟ್ಟುವಿಕೆಗೆ ಮತ್ತು ಗಾಯಗೊಂಡಾಗ ಅತಿಯಾದ ರಕ್ತಸ್ರಾವವನ್ನು ತಡೆಯಲು ಕಾರಣವಾಗುತ್ತದೆ ಎಂಬುದು ನಿಮಗೆ ತಿಳಿದಿರಬಹುದು.
ದೇಹದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾದರೆ, ಸಣ್ಣಪುಟ್ಟ ಗಾಯಗಳು ಸಹ ಗಂಭೀರವಾಗುತ್ತದೆ.
ಆರ್‌ಎಂಎಲ್ ಆಸ್ಪತ್ರೆಯ ವೈದ್ಯಕೀಯ ವಿಭಾಗದ ನಿರ್ದೇಶಕ ಪ್ರೊಫೆಸರ್ ಡಾ. ಸುಭಾಷ್ ಗಿರಿ ಅವರು ತಿಳಿಸಿರುವ ಮಾಹಿತಿ ಪ್ರಕಾರ, ಶೀತ ವಾತಾವರಣದಲ್ಲಿ, ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ, ಇದು ವೈರಲ್ ಸೋಂಕುಗಳ ಅಪಾಯವನ್ನು ಹೆಚ್ಚಿಸುತ್ತದೆ. ಅಂತಹ ಸಂದರ್ಭಗಳಲ್ಲಿ, ದೇಹದ ರಕ್ತ ವ್ಯವಸ್ಥೆಯು ಪರಿಣಾಮ ಬೀರಬಹುದು ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾಗುತ್ತದೆ. ಚಳಿಗಾಲದಲ್ಲಿ, ಸೂರ್ಯನ ಬೆಳಕು ಸರಿಯಾಗಿ ಸಿಗದಿರುವುದು, ಜೊತೆಗೆ ನೀರು ಕುಡಿಯುವ ಪ್ರಮಾಣ ಕಡಿಮೆಯಾಗಿರುವುದು, ದೈಹಿಕ ಚಟುವಟಿಕೆ ಅಷ್ಟಾಗಿ ಇಲ್ಲದಿರುವುದು ಹೀಗೆ ಹಲವು ಕಾರಣಗಳು ರಕ್ತ ಪರಿಚಲನೆಯ ಮೇಲೆ ಪರಿಣಾಮ ಬೀರುತ್ತದೆ. ಅದರಲ್ಲಿಯೂ ಕೆಲವರಲ್ಲಿ, ದೀರ್ಘಕಾಲದ ಕಾಯಿಲೆ ಅಥವಾ ನಿರಂತರ ಔಷಧ ಸೇವನೆಯೂ ಸಹ ಈ ಸಮಸ್ಯೆಯನ್ನು ಇನ್ನಷ್ಟು ಹದಗೆಡಿಸಬಹುದು. ಜೊತೆಗೆ, ಮಕ್ಕಳು, ವೃದ್ಧರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಇರುವವರಲ್ಲಿ ಈ ಅಪಾಯ ಹೆಚ್ಚಾಗಿರುತ್ತದೆ.
ಕಡಿಮೆ ಪ್ಲೇಟ್‌ಲೆಟ್‌ಗಳ ಲಕ್ಷಣಗಳು:
ಪ್ಲೇಟ್‌ಲೆಟ್‌ ಕಡಿಮೆಯಾದಾಗ, ಆಗಾಗ ಮೂಗಿನಿಂದ ರಕ್ತಸ್ರಾವವಾಗುವುದು, ಒಸಡುಗಳಿಂದ ರಕ್ತಸ್ರಾವವಾಗುವುದು ಅಥವಾ ದೇಹದಲ್ಲಿ ನೀಲಿ-ಕಪ್ಪು ಗುರುತುಗಳು ಕಂಡುಬರುತ್ತದೆ. ಆದರೆ ಸಣ್ಣ ಗಾಯವಾದರೂ ಕೂಡ ಬಹಳ ಸಮಯದವರೆಗೆ ರಕ್ತ ಬರುವುದು ಕಳವಳಕ್ಕೆ ಕಾರಣವಾಗಬಹುದು. ಕೆಲವರಲ್ಲಿ ನಿರಂತರವಾಗಿ ದೌರ್ಬಲ್ಯ, ಆಯಾಸ ಮತ್ತು ತಲೆತಿರುಗುವಿಕೆ ಕಂಡುಬರುತ್ತದೆ. ಇನ್ನು ಮಹಿಳೆಯರಲ್ಲಿ ಮುಟ್ಟಿನ ಸಮಯದಲ್ಲಿ ಅತಿಯಾದ ರಕ್ತಸ್ರಾವವು ಕಡಿಮೆ ಪ್ಲೇಟ್‌ಲೆಟ್‌ಗಳ ಸಂಕೇತವೂ ಆಗಿರಬಹುದು. ಈ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಅರ್ಥಮಾಡಿಕೊಳ್ಳದಿದ್ದರೆ, ಸ್ಥಿತಿ ಗಂಭೀರವಾಗಬಹುದು.
ಇದನ್ನು ತಡೆಯುವುದು ಹೇಗೆ?

  • ಸಮತೋಲಿತ ಮತ್ತು ಪೌಷ್ಟಿಕ ಆಹಾರವನ್ನು ಸೇವಿಸಿ.
  • ಉಗುರು ಬೆಚ್ಚಗಿನ ನೀರನ್ನು ಕುಡಿಯುವ ಅಭ್ಯಾಸ ಮಾಡಿಕೊಳ್ಳಿ.
  • ಚಳಿಗಾಲದಲ್ಲಿಯೂ ಸಹ ಸ್ವಲ್ಪ ಸೂರ್ಯನ ಬೆಳಕನ್ನು ಪಡೆದುಕೊಳ್ಳಲು ಪ್ರಯತ್ನಿಸಿ.
  • ವೈರಲ್ ಸೋಂಕು ಬರದಂತೆ ತಡೆಯಿರಿ.
  • ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡುವುದನ್ನು ಮರೆಯಬೇಡಿ.

50 ವರ್ಷದಿಂದ ಈ ವ್ಯಕ್ತಿ ನಿದ್ರೆಯೇ ಮಾಡಿಲ್ಲವಂತೆ

TAGGED:What causes platelets in the body to decrease in winter?
Share This Article
Facebook Twitter Copy Link Print
Previous Article 50 ವರ್ಷದಿಂದ ಈ ವ್ಯಕ್ತಿ ನಿದ್ರೆಯೇ ಮಾಡಿಲ್ಲವಂತೆ
Next Article ಬಳೆ ಚೆನ್ನಾಗಿದೆ ಎಂದಿದ್ದಷ್ಟೇ, ಆಕೆ ಬಳೆಯನ್ನೇ ಬಿಚ್ಚಿಕೊಟ್ಟಳು! ಯುವತಿಯ ಔದಾರ್ಯಕ್ಕೆ ನೆಟ್ಟಿಗರು ಫುಲ್ ಖುಷ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?