Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪೌರಾಯುಕ್ತರಿಗೆ ನಿಂದಿಸಿದ್ದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ 2023ರ ಕಾಂಗ್ರೆಸ್ ಅಭ್ಯರ್ಥಿ ರಾಜೀವ್‌ಗೌಡ ಅವರಿಗೆ ಕೆಪಿಸಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದೆ.
‘ನಿಮಗೆ ನೋಟಿಸ್ ತಲುಪಿದ ಒಂದು ವಾರದ ಒಳಗಾಗಿ ಸಮಜಾಯಿಷಿ ನೀಡಬೇಕು. ಇಲ್ಲದಿದ್ದರೆ ಕೆಪಿಸಿಸಿ ಶಿಸ್ತು ಸಮಿತಿ ಮುಂದಿನ ಶಿಸ್ತು ಕ್ರಮ ಕೈಗೊಳ್ಳಲಿದೆ’ ಎಂದು ರಾಜೀವ್‌ಗೌಡ ಅವರಿಗೆ ನೀಡಲಾಗಿರುವ ನೋಟಿಸ್‌ನಲ್ಲಿ ಎಚ್ಚರಿಸಲಾಗಿದೆ.
ಅಶ್ಲೀಲ ಪದಗಳಿಂದ ನಿಂದಿಸಿ ಬೆಂಕಿ ಹಾಕುವುದಾಗಿ ಧಮ್ಕಿ ಹಾಕಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ 2 ಎಫ್‌ಐಆರ್ ದಾಖಲಾಗಿವೆ. ಪೌರಾಯುಕ್ತೆ ಅಮೃತಾ ಗೌಡ ಹಾಗೂ ಜೆಡಿಎಸ್ ವತಿಯಿಂದ ನೀಡಲಾದ 2 ದೂರು ಆಧರಿಸಿ ಕೇಸ್ ದಾಖಲಾದ ಬೆನ್ನಲ್ಲೇ ರಾಜೀವ್ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ 3 ಪೊಲೀಸ್ ತಂಡ ರಚಿಸಿ ಶೋಧಕಾರ್ಯ ನಡೆಸಲಾಗಿದೆ.
ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದು, ಪೌರಾಯುಕ್ತರೊಂದಿಗೆ ತಾವು ಆಡಿದ ಮಾತುಗಳಿಂದ ಪಕ್ಷಕ್ಕೆ ಮುಜುಗರ ಆಗಿದೆ. ಹಾಗಾಗಿ ಒಂದು ವಾರದೊಳಗೆ ಸೂಕ್ತ ಸಮಾಜಾಯಿಷಿ ನೀಡಿ. ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ರಾಜೀವ್‌ಗೌಡಗೆ ನೋಟಿಸ್ ಜಾರಿ ಮಾಡಿದ್ದಾರೆ.