Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ವೆನೆಜುವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಾಡೊ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿ ಪದಕವನ್ನು ಗುರುವಾರ ಶ್ವೇತಭವನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೀಡಿದರು.ಟ್ರಂಪ್ ಈ ಪ್ರಶಸ್ತಿಯನ್ನು ಬಹುಕಾಲದಿಂದ ಬಯಸಿದ್ದರು.
ಮಚಾದೊ ಅವರು ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ವಾಷಿಂಗ್ಟನ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಚಾದೊ, ಅಧ್ಯಕ್ಷ ಟ್ರಂಪ್‌ಗೆ ಪುರಸ್ಕಾರ ಪ್ರಧಾನ ಮಾಡಿರುವುದಾಗಿ ಹೇಳಿದರು. ಟ್ರಂಪ್ ಅದನ್ನು ಸ್ವೀಕರಿಸಿದ್ದಾರೆಯೇ ಎಂದು ಅವರು ಹೇಳಲಿಲ್ಲ. ಈ ವಿಷಯದ ಕುರಿತು ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ಮಚಾದೊ ನಿರಾಕರಿಸಿದರು. ವೆನೆಜುವೆಲಾದ ಸ್ವಾತಂತ್ರ್ಯಕ್ಕೆ ಅವರ ವಿಶೇಷ ಕೊಡುಗೆಗಾಗಿ ಪುರಸ್ಕಾರವನ್ನು ಅವರಿಗೆ ಅರ್ಪಿಸಿದ್ದೇನೆ ಎಂದಷ್ಟೇ ಹೇಳಿದ್ದಾರೆ.
ವೆನೆಜುವೆಲಾದಲ್ಲಿ ಪ್ರಜಾಸತ್ತಾತ್ಮಕ ಆಡಳಿತವನ್ನು ಬೆಂಬಲಿಸುವ ಬಗ್ಗೆ ಟ್ರಂಪ್ ಅವರ ಬದ್ಧತೆಯ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಅಲ್ಲಿ ಯಾವಾಗ ಚುನಾವಣೆಗಳು ನಡೆಯಬಹುದು ಎಂಬ ಬಗ್ಗೆ ಅವರು ಯಾವುದೇ ಕಾಲಮಿತಿಯನ್ನು ನೀಡಿಲ್ಲ. ತಮ್ಮ ಚರ್ಚೆಯ ಸಮಯದಲ್ಲಿಯೂ ಟ್ರಂಪ್ ಈ ಬಗ್ಗೆ ಯಾವುದೇ ನಿರ್ದಿಷ್ಟ ಭರವಸೆ ನೀಡಿಲ್ಲ ಎಂದು ಮಚಾಡೊ ಸೂಚಿಸಿದರು.
https://www.newsics.com/2026/01/16/brutal-murder-of-mother-of-three-conspiracy-to-kill-lovedavvi/