Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬಳ್ಳಾರಿ: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, ಲಾರಿಯಲ್ಲಿದ್ದ ಎಣ್ಣೆ ರಸ್ತೆ ಮೇಲೆ ಭಾರೀ ಪ್ರಮಾಣದಲ್ಲಿ ಸೋರಿಕೆಯಾದ ಘಟನೆ ಕಂಪ್ಲಿ ತಾಲ್ಲೂಕಿನ ದೇವಲಾಪುರ ಕಣಿವೆ ಮಾರೆಮ್ಮ ದೇವಸ್ಥಾನದ ಸಮೀಪ ನಡೆದಿದೆ.
ಅಪಾರ ಪ್ರಮಾಣದಲ್ಲಿ ಅಡುಗೆ ಎಣ್ಣೆ ಸೋರಿಕೆ ಆಗಿದೆ. ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ, ಸ್ಥಳೀಯ ಜನರು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಪಾಮ್ ಆಯಿಲ್ ಸಂಗ್ರಹಿಸಲು ಸ್ಥಳಕ್ಕೆ ಮುಗಿಬಿದ್ದಿದ್ದಾರೆ.
ಬಕೆಟ್, ಕ್ಯಾನ್‌ಗಳು ಮತ್ತು ವಿವಿಧ ಪಾತ್ರೆಗಳನ್ನು ಹಿಡಿದು ಬಂದು ತೈಲವನ್ನು ತುಂಬಿಸಿಕೊಂಡಿದ್ದಾರೆ. ಅಪಘಾತದಲ್ಲಿ ಅದೃಷ್ಟವಶಾತ್ ಲಾರಿಯ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದು, ಕಂಪ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.