Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ.
ಬನ್ನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ, ಡಾ. ನಾಗೇಂದ್ರಪ್ಪ ಸೇರಿ ಇತರರ ವಿರುದ್ಧ ಕೇಸು ದಾಖಲಾಗಿದೆ.
ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಹಾಗೂ ಸಹಚರರು ಸೇರಿ ಎಸ್. ಬೆಂಗೀಪುರದಲ್ಲಿ ಅಕ್ರಮ ವಲಸಿಗರ ಶೆಡ್ ಗಳ ಮೇಲೆ ದಾಖಲೆ ಕೇಳಿ ದಾಳಿ ನಡೆಸಲಾಗಿತ್ತು. ಜಾಗದ ಮಾಲೀಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿತ್ತು. ಜೀವ ಬೆದರಿಕೆ ಹಾಕಿರುವುದಾಗಿ ಪುನೀತ್ ಮತ್ತು ಸಹಚರರ ವಿರುದ್ಧ ದೂರು ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ವಿಚಾರಣೆಗಾಗಿ ಪುನೀತ್ ಕೆರೆಹಳ್ಳಿ ವಶಕ್ಕೆ ಪಡೆಯಲಾಗಿದೆ.
https://www.newsics.com/2026/01/17/kartik-aaryan-returns-rs-15-crore-remuneration-to-producers/