Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕುರಿತು ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಕರ್ನಾಟಕಪ್ರಮುಖ

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ಕುರಿತು ವರದಿ ನೀಡುವಂತೆ ಗೃಹ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಹಿರಿಯ ಐಪಿಎಸ್ ಅಧಿಕಾರಿ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ರಾಮಚಂದ್ರ ರಾವ್‌ ಅವರು ಕಚೇರಿಯಲ್ಲೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆಗಿದ್ದು, ಈ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಗೃಹ ಇಲಾಖೆಗೆ ಸೂಚನೆ ನೀಡಿದ್ದಾರೆ.
ರಾಮಚಂದ್ರ ರಾವ್ ಅವರು ಸಮವಸ್ತ್ರದಲ್ಲಿರುವಾಗಲೇ ತಮ್ಮ ಕಚೇರಿಯ ಒಳಗಡೆಯೇ ಮಹಿಳೆಯನ್ನು ತಪ್ಪಿಕೊಂಡಿರುವ ವಿಡಿಯೋ ಈಗ ವೈರಲ್‌ ಆಗಿದ್ದು, ಇದು 1 ವರ್ಷದ ಹಿಂದೆ ಸೆರೆಯಾಗಿದ್ದ ವಿಡಿಯೋ ಎನ್ನಲಾಗಿದೆ.
ಈ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಡಿಯೋ ಬಗ್ಗೆ ನನಗೆ ಬೆಳಗ್ಗೆಯಷ್ಟೇ ಗೊತ್ತಾಗಿದೆ. ಎಷ್ಟೇ ದೊಡ್ಡವರಾದ್ರು ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನೀಡುವಂತೆ ಗೃಹ ಇಲಾಖೆಗೆ ಸೂಚಿಸಿದ್ದೇನೆ ಎಂದರು.
ಈ ಹಿಂದೆ ತಮ್ಮ ಮಲಮಗಳು, ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ರಾಮಚಂದ್ರ ರಾವ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಅವರನ್ನು ರಾಜ್ಯ ಸರ್ಕಾರ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಮರುನೇಮಕ ಮಾಡಿತ್ತು.
ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲೂ ರಾಮಚಂದ್ರರಾವ್ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಆಗ ಸರ್ಕಾರಕ್ಕೆ ಮುಜುಗರ ಆಗಿತ್ತು. ಈಗ ರಾಸಲೀಲೆ ವಿಡಿಯೋ ವೈರಲ್ ಆಗುತ್ತಲೇ ಮತ್ತೆ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದೆ.

ವಿಡಿಯೋ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಲು ರಾಮಚಂದ್ರ ರಾವ್‌ ಇಂದು ಪರಮೇಶ್ವರ್‌ ಕಚೇರಿಗೆ ಆಗಮಿಸಿದ್ದರು. ಮನೆ ಒಳಗೆ ರಾಮಚಂದ್ರ ರಾವ್‌ ಹೋಗುವ ಮುನ್ನವೇ ಪರಮೇಶ್ವರ್ ಅವರು ಭೇಟಿಗೆ ನಿರಾಕರಿಸಿದರು. ಸಿಬ್ಬಂದಿ ಮೂಲಕ ಭೇಟಿ ಆಗುವುದಿಲ್ಲ ಎಂದು ಪರಮೇಶ್ವರ್ ತಿಳಿಸಿದ್ದರು. ಹೀಗಾಗಿ 5 ನಿಮಿಷದಲ್ಲೇ ರಾಮಚಂದ್ರ ರಾವ್‌ ಪರಮೇಶ್ವರ್‌ ಕಚೇರಿಯಿಂದ ತೆರಳಿದರು.

ಕಿಚ್ಚ ಸುದೀಪ್ ಬಿಗ್ ಬಾಸ್ ನಿರೂಪಣೆ ಬಗ್ಗೆ ಟೀಕೆಗಳ ಹಿಂದಿನ ಕಾರಣವೇನು?

TAGGED:CM Siddaramaiah instructs Home Department to submit report on DGP Ramachandra Rao's rasalileela
Share This Article
Facebook Twitter Copy Link Print
Previous Article ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ಬಹಿರಂಗ: ಪೊಲೀಸ್ ಡ್ರೆಸ್‌ನಲ್ಲೇ ಕಾಮಕೇಳಿ!
Next Article ನೀವು ಈ ತರಕಾರಿ ಸೇವಿಸಿದ್ರೆ ಕ್ಯಾನ್ಸರ್ ನಿಮ್ಮ ಬಳಿಯೂ ಸುಳಿಯಲ್ಲ

Popular Posts

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?