Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿ ಫೋಟೊವನ್ನು ಸಿಎಂ ಸಿದ್ದರಾಮಯ್ಯ ಸ್ವೀಕರಿಸಲು ನಿರಾಕರಿಸಿದ್ದು, ಇದು ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ ಕೊಟ್ಟಿದ್ದು, ಅದನ್ನು ಸಿದ್ದರಾಮಯ್ಯ ತೆಗೆದುಕೊಂಡಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್ ಅವರು, ಸಿದ್ದರಾಮಯ್ಯಗೆ ಹಿಂದೂ ದೇವರನ್ನು ಕಂಡರೆ ಆಗಿ ಬರಲ್ಲ. ತಿಲಕ, ನಾಮ ಹಾಗೂ ಕೃಷ್ಣನನ್ನು ಕಂಡರೇ ಆಗಿ ಬರುವುದಿಲ್ಲ. ಅವರಿಗೆ ಟೋಪಿ ಕಂಡರೆ ಮಾತ್ರ ಖುಷಿಯಾಗುತ್ತದೆ. ಟಿಪ್ಪು ಜಯಂತಿ ಮಾಡಿದರು, ಆಗ ಕೋಮು ಗಲಭೆಗಳು ಆದವು. ಕೋಗಿಲು ಲೇಔಟ್ನ ಮುಸ್ಲಿಮರಿಗೆ ಮನೆಗಳು ಕೊಡುವುದು ಇತ್ಯಾದಿ ಅದು ಅವರ ನಿರಂತರ ಪ್ರಕ್ರಿಯೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಈ ಹಿಂದೆ ಕುಂಕುಮ, ಪೇಟ ತಿರಸ್ಕರಿಸಿದ್ದು ಚರ್ಚೆಗೆ ಗ್ರಾಸವಾಗಿತ್ತು. ಅದೇ ರೀತಿ ಇದೀಗ ರಾಯರ ಫೋಟೊ ತಿರಸ್ಕರಿಸಿದ್ದು ಚರ್ಚೆಗೆ ಗ್ರಾಸವಾಗಿದೆ.