Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ಅವರಿಗೆ ಮನೆಯೂಟ ನೀಡುವ ವಿಚಾರದಲ್ಲಿ ಕೋರ್ಟ್ ಬಿಗ್ ಶಾಕ್ ನೀಡಿದೆ.
ಇತ್ತೀಚೆಗೆ ಪವಿತ್ರಾ ಗೌಡ ಪರವಾಗಿ ವಕೀಲರು ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು.
ಇದರ ಜತೆ ನಾಗರಾಜು ಮತ್ತು ಲಕ್ಷ್ಮಣ್ ಕೂಡ ಮನೆಯೂಟ ಬೇಕೆಂದು ಅರ್ಜಿ ಸಲ್ಲಿಸಿದ್ದರು.
ಕೋರ್ಟ್ ಪವಿತ್ರಾ ಗೌಡ ಹಾಗೂ ಇತರೆ ಇಬ್ಬರಿಗೆ ಮನೆಯೂಟ ನೀಡಬೇಕೆಂದು ಆದೇಶ ನೀಡಿತ್ತು. ಮೊದಲು ದಿನಕ್ಕೊಮ್ಮೆ ಮನೆಯೂಟ ನೀಡುವ ಆದೇಶ ನೀಡಲಾಗಿತ್ತು. ಆ ಬಳಿಕ ಆದೇಶವನ್ನು ಮಾರ್ಪಾಡು ಮಾಡಿ ವಾರಕೊಮ್ಮೆ ಮಾತ್ರ ಮನೆಯೂಟ ನೀಡಬೇಕೆಂದು 57ನೇ ಸಿಸಿಎಚ್ ನ್ಯಾಯಾಲಯ ಹೇಳಿತ್ತು.
57ನೇ ಸಿಸಿಎಚ್ ನ್ಯಾಯಾಲಯ ಆದೇಶವನ್ನು ಪ್ರಶ್ನಿಸಿ ಜೈಲಾಧಿಕಾರಿಗಳು ಹೈಕೋರ್ಟ್ ಮೊರೆ ಹೋಗಿದ್ದರು.
ಯಾವುದೇ ಆರೋಪಿಗೆ ವಿಶೇಷ ಸವಲತ್ತು ನೀಡಬಾರದು. ಒಂದು ವೇಳೆ ಪವಿತ್ರಾ ಗೌಡ ಮತ್ತು ಇತರರಿಗೆ ಮನೆಯೂಟ ನೀಡಿದರೆ ಇತರೆ ಆರೋಪಿಗಳು ಬೇಡಿಕೆ ಇಡುತ್ತಾರೆ. ಆಗ ಜೈಲಿನ ಶಿಸ್ತು ಸಡಿಲವಾಗುತ್ತದೆ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.
ಜೈಲಿನ ಊಟಕ್ಕೆ FSSAI (ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ) 4 ಸ್ಟಾರ್ ನೀಡಿದೆ. ಆದ್ದರಿಂದ ಜೈಲಿನ ಊಟದ ಗುಣಮಟ್ಟದ ಬಗ್ಗೆ ಬೇರೆ ಕೈದಿಗಳು ಆಕ್ಷೇಪ ಎತ್ತಿಲ್ಲ. ಹೀಗಾಗಿ 57ನೇ ಸಿಸಿಹೆಚ್ ಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಲು ರಾಜ್ಯ ಸರ್ಕಾರ ಮನವಿ ಮಾಡಿದೆ.
ವಾದವನ್ನು ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು ನೀಡಬೇಕೆಂದು 57ನೇ ಸಿಸಿಎಚ್ ಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಕಾನೂನಿಗೆ ಎಲ್ಲರೂ ಒಂದೇ. ಯಾರಿಗೂ ವಿಶೇಷ ಸವಲತ್ತು ನೀಡುವಂತಿಲ್ಲ. ಜೈಲು ಕೈಪಿಡಿಯಲ್ಲಿ ಮನೆ ಊಟವನ್ನು ಕೇವಲ ಬಹಳ ವಿಶೇಷ ಸಂದರ್ಭದಲ್ಲಿ ಐಜಿಪಿ ಅವರ ಒಪ್ಪಿಗೆ ಮೇರೆಗೆ ಮಾತ್ರವೇ ನೀಡಬೇಕು, ಅದೂ ಆ ಕಾರಣ ವೈದ್ಯಕೀಯ ಕಾರಣ ಆಗಿರಬೇಕು ಎಂದು ಹೈಕೋರ್ಟ್ ಹೇಳಿದೆ.
ಆ ಮೂಲಕ ಮನೆಯೂಟದ ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡ, ನಾಗರಾಜು ಮತ್ತು ಲಕ್ಷ್ಮಣ್ ಅವರಿಗೆ ಹಿನ್ನಡೆ ಆಗಿದೆ.
ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ: ಕಾರಣವೇನು?