Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಕೇಂದ್ರ ಸರ್ಕಾರ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿ ವಿಬಿ ಜಿ ರಾಮ್ ಜಿ ಎಂದು ಮರು ನಾಮಕರಣ ಮಾಡಿರುವುದರ ವಿರುದ್ಧ ನಿರ್ಣಯ ಕೈಗೊಳ್ಳಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ವಿಶೇಷ ಅಧಿವೇಶನ ಕರೆದಿದೆ. ವಿಶೇಷ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಇದೀಗ ರಾಜ್ಯಪಾಲರು ತಗಾದೆ ತೆಗೆದಿದ್ದಾರೆ.
1 ನಿಮಿಷವೂ ಭಾಷಣ ಮಾಡದೇ ಗವರ್ನರ್ ಅಧಿವೇಶನದಿಂದ ಹೊರ ನಡೆಸಿದ್ದಾರೆ. ರಾಜ್ಯಪಾರ ನಡೆಗೆ ಆಡಳಿತ ಪಕ್ಷದವರು ವಿರೋಧ ವ್ಯಕ್ತಪಡಿಸಿದ್ದಾರೆ. ಸದನದ ಒಳಗೆ ರಾಜ್ಯಪಾಲರಿಗೆ ಭಾಷಣ ಓದಲೇಬೇಕೆಂದು ಬಿ ಕೆ ಹರಿಪ್ರಸಾದ್ ಜೋರು ಧ್ವನಿಯಲ್ಲಿ ಒತ್ತಾಯಿಸಿದ್ದಾರೆ.
ಸರ್ಕಾರ ಕೊಟ್ಟ ಭಾಷಣ ಓದದೆ ಹೊರನಡೆದ ರಾಜ್ಯಪಾಲರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಶಾಸಕರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.