Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ತಿರುವನಂತಪುರಂ: ಕೇರಳದ ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡ ನಂತರ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರಂಗೆ ಆಗಮಿಸಿದರು.
ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯ ನಿಮಿತ್ತ ಕೇರಳಕ್ಕೆ ಆಗಮಿಸಿರುವ ಪ್ರಧಾನಿ ಮೋದಿ, ತಿರುವನಂತಪುರಂ ವಿಮಾನ ನಿಲ್ದಾಣದಿಂದ ಪುತ್ತರಿಕಂಡಂವರೆಗೆ ರೋಡ್ ಶೋ ನಡೆಸಿದರು. ಈ ವೇಳೆ ರಸ್ತೆಯ ಎರಡೂ ಬದಿಗಳು ಜನರು ಮತ್ತು ಬಿಜೆಪಿ ಕಾರ್ಯಕರ್ತರಿಂದ ತುಂಬಿದ್ದವು. ರೋಡ್ ಶೋ ವೇಳೆ ಚೆಂಡೆ ಮೇಳ ಮತ್ತು ಕವಡಿ ಸೇರಿದಂತೆ ವಿವಿಧ ಸಾಂಸ್ಕೃತಿಕ ತಂಡಗಳು ಜನರನ್ನು ಮನರಂಜಿಸಿದವು. ಪ್ರಧಾನಿ ಮೋದಿ ವಾಹನದ ಬಾಗಿಲು ತೆರೆದು ಅಭಿಮಾನಿಗಳತ್ತ ಕೈ ಬೀಸಿದರು.
ನಾಗರಕೋಯಿಲ್-ಮಂಗಳೂರು, ತಿರುವನಂತಪುರಂ-ತಾಂಬರಂ, ತಿರುವನಂತಪುರಂ-ಚರ್ಲಪಲ್ಲಿ ಎಂಬ ಮೂರು ಹೊಸ ಅಮೃತ್ ಭಾರತ್ ರೈಲುಗಳು ಮತ್ತು ತ್ರಿಶೂರ್ ಮತ್ತು ಗುರುವಾಯೂರ್ ನಡುವೆ ಹೊಸ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು.
ಕೇರಳಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ ಸಿಕ್ಕಿತು. ತಿರುವನಂತಪುರಂನಲ್ಲಿ ಮೋದಿಯನ್ನು ಸ್ವಾಗತಿಸಲು ಜನಸಮೂಹ ಬೀದಿಗಳಲ್ಲಿ ಸಾಲುಗಟ್ಟಿ ನಿಂತಿತ್ತು. ಹೂಮಳೆ ಮೂಲಕ ಪ್ರಧಾನಿ ಮೋದಿ ಜನರು ಸ್ವಾಗತ ಕೋರಿದರು. ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಕೇರಳದಲ್ಲಿ ಬಿಗಿ ಭದ್ರತೆ ವಹಿಸಲಾಗಿತ್ತು
https://www.newsics.com/2026/01/23/bengaluru-ranks-2nd-in-the-world-in-traffic-problems/