Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಪತಿ ತನ್ನ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆಂದು ಕಥೆ ಕಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ನಡೆದಿದೆ.
ಪತಿ ಫಕೀರಪ್ಪ ಗಿಲಕ್ಕನವರ ಜೊತೆ ಮದುವೆಯಾಗಿ 3 ವರ್ಷ ಕಳೆದರೂ ಮಕ್ಕಳಾಗುತ್ತಿಲ್ಲವೆಂದು ಪತ್ನಿ ರಾಜೇಶ್ವರಿ (21) ಆಗಾಗ್ಗೆ ಕಿರಿಕ್ ಮಾಡುತ್ತಿದ್ದಳು. ಇದರಿಂದ ಬೇಸತ್ತ ಪತಿ, ಸಿಟ್ಟಿಗೆದ್ದು ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಘಟನೆ ಬಳಿಕ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಕಥೆ ಕಟ್ಟಿದ ಆರೋಪಿ, ಈ ಬಗ್ಗೆ ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆದರೆ ಅಂತ್ಯಕ್ರಿಯೆ ವೇಳೆ ರಾಜೇಶ್ವರಿಯ ಪೋಷಕರು ಮಗಳ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳನ್ನು ಗಮನಿಸಿ ಅನುಮಾನ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ಅವರು ಬೈಲಹೊಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಆರೋಪಿ ಫಕೀರಪ್ಪ ತನ್ನ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.