Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ
ಕರ್ನಾಟಕಪ್ರಮುಖ

ಪೌರಾಯುಕ್ತೆಗೆ ಜೀವ ಬೆದರಿಕೆ ಕೇಸ್: ಹಾಸನ ಮಂಗಳೂರು ಸಮೀಪದಲ್ಲಿ ರಾಜೀವ್ ಗೌಡ ಕಾರು ಪತ್ತೆ

Share
3 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಧಮ್ಕಿ ಪ್ರಕರಣ ಸಂಬಂಧ ಆರೋಪಿ ರಾಜೀವ್ ಗೌಡನ ಬಂಧನ ಇನ್ನೂ ಆಗದ ಕಾರಣ ಪೊಲೀಸರ ಕಾರ್ಯವೈಖರಿ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣದ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್ ಬಳಿ ಮಾಹಿತಿ ಪಡೆದಿರುವ ಮುಖ್ಯಮಂತ್ರಿಗಳು, ನ್ಯಾಯಾಲಯಗಳಲ್ಲಿ ಜಾಮೀನು ಅರ್ಜಿ ವಜಾ ಆಗಿದ್ದರೂ ಯಾಕೆ ಆತನನ್ನು ಬಂಧಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಇತ್ತ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನಿಗಾಗಿ ಪೊಲೀಸರು ಶೋಧ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ, ರಾಜೀವ್ ಗೌಡ ಬಂಧನದಿಂದ ತಪ್ಪಿಸಿಕೊಳ್ಳಲು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ರಾಜೀವ್ ಗೌಡ ಹಾಸನ-ಮಂಗಳೂರು ಮಾರ್ಗದ ಸಮೀಪದ ರೈಲ್ವೆ ನಿಲ್ದಾಣದ ಬಳಿ ತಮ್ಮ ಕಾರನ್ನು ಬಿಟ್ಟು ತಪ್ಪಿಸಿಕೊಂಡಿರುವ ಸಾಧ್ಯತೆ ಇದೆ. ಈ ಸಂಬಂಧ ಹಾಸನ-ಮಂಗಳೂರು ಮಾರ್ಗದ ಸಮೀಪ ರಾಜೀವ್ ಗೌಡ ಬಳಸುತ್ತಿದ್ದ ಕಾರು ಪತ್ತೆಯಾಗಿದ್ದು, ಆರೋಪಿಯು ರೈಲ್ವೆ ಮಾರ್ಗದ ಮೂಲಕ ಪರಾರಿಯಾಗಿರುವ ಶಂಕೆಯ ಮೇಲೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಾಹಿತಿ ಸುವರ್ಣ ನ್ಯೂಸ್‌ಗೆ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.

ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಬಂಧನ ವಿಳಂಬ ಕುರಿತು ಪ್ರತಿಕ್ರಿಯೆ ನೀಡಿದ, ರಾಜೀವ್ ಗೌಡ ಬಂಧನ ವಿಳಂಬವಾಗಿರುವ ಕುರಿತು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, “ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಮೊದಲ ದಿನವೇ ಕೂಡಲೇ ಬಂಧನಕ್ಕೆ ಸೂಚನೆ ನೀಡಿದ್ದೆ. ಆದರೆ ಅಷ್ಟರಲ್ಲಿ ಆತ ತಪ್ಪಿಸಿಕೊಂಡು ಹೋಗಿದ್ದಾನೆ. ಎಷ್ಟು ದಿನ ತಪ್ಪಿಸಿಕೊಂಡು ಹೋಗಲು ಸಾಧ್ಯ? ಖಂಡಿತವಾಗಿಯೂ ಅವನನ್ನು ಬಂಧಿಸುತ್ತೇವೆ” ಎಂದು ಹೇಳಿದರು. ಈ ಪ್ರಕರಣದಲ್ಲಿ ಯಾವುದೇ ಒತ್ತಡ, ರಾಜಿ ಅಥವಾ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಕಾನೂನು ತನ್ನ ದಾರಿಯಲ್ಲಿ ಸಾಗುತ್ತದೆ ಎಂದು ಗೃಹ ಸಚಿವರು ಸ್ಪಷ್ಟವಾಗಿ ಹೇಳಿದರು.
ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನದ ಭೀತಿ ಹೆಚ್ಚಳ
ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ರಾಜೀವ್ ಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಚಿಂತಾಮಣಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಈ ಆದೇಶದಿಂದಾಗಿ ರಾಜೀವ್ ಗೌಡರಿಗೆ ಬಂಧನದ ಭೀತಿ ಮತ್ತಷ್ಟು ಹೆಚ್ಚಾಗಿದೆ.
ಪ್ರಕರಣದ ಹಿನ್ನೆಲೆ
ಶಿಡ್ಲಘಟ್ಟ ನಗರದಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಟಿಸಿರುವ ‘ಕಲ್ಟ್’ ಸಿನಿಮಾ ಪ್ರಚಾರಕ್ಕೆ ಅಳವಡಿಸಲಾಗಿದ್ದ ಬ್ಯಾನರ್‌ಗಳನ್ನು ನಗರಸಭೆ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರಿಂದ ಕೋಪಗೊಂಡ ರಾಜೀವ್ ಗೌಡ, ಪೌರಾಯುಕ್ತೆ ಜಿ. ಅಮೃತಾ ಗೌಡ ಅವರಿಗೆ ದೂರವಾಣಿ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧ ಶಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಂತರ ರಾಜೀವ್ ಗೌಡ ಕಾಣೆಯಾಗಿದ್ದರು. ಮುಂಜಾಗ್ರತಾ ಕ್ರಮವಾಗಿ ಅವರು ಚಿಂತಾಮಣಿಯ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಇದರ ನಡುವೆಯೇ, ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ಕಾನೂನು ಸಂಕಷ್ಟ ಮತ್ತಷ್ಟು ಗಂಭೀರವಾಗಿದೆ.
ಶೋಧ ಕಾರ್ಯ ಮುಂದುವರಿಕೆ
ಪ್ರಸ್ತುತ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ರೈಲ್ವೆ ನಿಲ್ದಾಣಗಳು, ಬಸ್ ನಿಲ್ದಾಣಗಳು ಹಾಗೂ ಪ್ರಮುಖ ಮಾರ್ಗಗಳಲ್ಲಿ ತೀವ್ರ ನಿಗಾ ವಹಿಸಲಾಗಿದೆ. ರಾಜೀವ್ ಗೌಡನ ಬಂಧನ ಯಾವುದೇ ಕ್ಷಣದಲ್ಲಾದರೂ ಸಾಧ್ಯ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರಕರಣ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಕಾನೂನು ಮತ್ತು ಆಡಳಿತ ವ್ಯವಸ್ಥೆಯ ಕಠಿಣತೆ ಬಗ್ಗೆ ಹೊಸ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.

ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ

TAGGED:Life threat case against civic body: Rajeev Gowda's car found near HassanMangalore
Share This Article
Facebook Twitter Copy Link Print
Previous Article ವಿದ್ಯಾರ್ಥಿನಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; FSL ವರದಿ ಹೇಳಿದ್ದೇನು?
Next Article ಪ್ರಿಯಕರನಿಗೆ ಕಳಿಸಿದ ಖಾಸಗಿ ಫೋಟೋ ವೈರಲ್; 19ರ ಯುವತಿಗೆ ಬ್ಲ್ಯಾಕ್ಮೆಲ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?