Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ
ಕರ್ನಾಟಕಪ್ರಮುಖ

ಮಾಜಿ ಪ್ರೇಮಿಯ ಪತ್ನಿಗೆ ‘HIV’ ಇಂಜೆಕ್ಷನ್ ಚುಚ್ಚಿದ ಮಹಿಳೆ

Share
2 Min Read
SHARE

https://youtube.com/shorts/yWrDals90_k?si=qTyTxtvMLgrsr7gN

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರೀತಿ ವೈಫಲ್ಯದ ಸೇಡನ್ನು ತೀರಿಸಿಕೊಳ್ಳಲು ಮಹಿಳೆಯೊಬ್ಬಳು ಸಿನಿಮೀಯ ಮಾದರಿಯಲ್ಲಿ ಸಂಚು ರೂಪಿಸಿ, ತನ್ನ ಮಾಜಿ ಪ್ರೇಮಿಯ ಪತ್ನಿಗೆ ಎಚ್‌ಐವಿ ಸೋಂಕಿತ ರಕ್ತವನ್ನು ಇಂಜೆಕ್ಷನ್ ಮೂಲಕ ನೀಡಿದ ಘಟನೆ ಕರ್ನೂಲ್‌ನಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನೂಲ್ ಪೊಲೀಸರು ರವಿವಾರ ಪ್ರಮುಖ ಆರೋಪಿ ವಸುಂಧರಾ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತರನ್ನು ಬಿ. ಬೋಯ ವಸುಂಧರಾ (34), ಖಾಸಗಿ ಆಸ್ಪತ್ರೆಯ ನರ್ಸ್ ಕೊಂಗೆ ಜ್ಯೋತಿ (40) ಹಾಗೂ ಆಕೆಯ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ.

ಏನಿದು ಪ್ರಕರಣ

ವಸುಂಧರಾ ತನ್ನ ಮಾಜಿ ಪ್ರೇಮಿಯು ಮತ್ತೊರ್ವ ಮಹಿಳೆಯನ್ನು ಮದುವೆಯಾಗಿದ್ದನ್ನು ಸಹಿಸಲಾರದೆ, ಆ ದಂಪತಿಯನ್ನು ಬೇರ್ಪಡಿಸಲು ಈ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ವಸುಂಧರಾ ತನ್ನ ಸ್ನೇಹಿತೆಯಾದ ನರ್ಸ್ ಜ್ಯೋತಿ ಸಹಾಯದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಚ್‌ಐವಿ ರೋಗಿಗಳ ರಕ್ತದ ಮಾದರಿಗಳನ್ನು ‘ಸಂಶೋಧನೆ’ ಎಂದು ಸುಳ್ಳು ಹೇಳಿ ಪಡೆದುಕೊಂಡಿದ್ದಳು. ಈ ರಕ್ತವನ್ನು ಫ್ರಿಡ್ಜ್‌ನಲ್ಲಿ ಸಂಗ್ರಹಿಸಿಟ್ಟಿದ್ದಳು. ಜ.9 ರಂದು ಕರ್ನೂಲ್‌ನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿರುವ ಸಂತ್ರಸ್ತೆ (ಮಾಜಿ ಪ್ರೇಮಿಯ ಪತ್ನಿ) ಸ್ಕೂಟರ್‌ನಲ್ಲಿ ಮನೆಗೆ ಮರಳುತ್ತಿದ್ದಾಗ, ಆರೋಪಿಗಳು ಬೈಕ್‌ನಿಂದ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತವಾಗಿ ಕೆಳಗೆ ಬಿದ್ದ ಸಂತ್ರಸ್ತೆಗೆ ಸಹಾಯ ಮಾಡುವ ನೆಪದಲ್ಲಿ ಬಂದ ವಸುಂಧರಾ, ಅವರನ್ನು ಆಟೋರಿಕ್ಷಾಕ್ಕೆ ಹತ್ತಿಸುವ ನಾಟಕವಾಡಿ ಅವರ ದೇಹಕ್ಕೆ ಎಚ್‌ಐವಿ ಸೋಂಕಿತ ಇಂಜೆಕ್ಷನ್ ಚುಚ್ಚಿದ್ದಾಳೆ.

ಸಂತ್ರಸ್ತೆ ಕಿರುಚಿಕೊಂಡಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆಯ ಪತಿ ನೀಡಿದ ದೂರಿನ ಮೇರೆಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಸ್ವತಃ ವೈದ್ಯೆಯಾಗಿರುವುದರಿಂದ ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಪೊಲೀಸರ ಪ್ರಕಾರ, ಎಚ್‌ಐವಿ ವೈರಸ್ ಮಾನವ ದೇಹದ ಹೊರಗೆ ಅಥವಾ ಫ್ರಿಡ್ಜ್‌ನಲ್ಲಿ ದೀರ್ಘಕಾಲ ಇಡಲು ಸಾಧ್ಯವಿಲ್ಲ. ಹೀಗಾಗಿ ಸೋಂಕು ಹರಡುವ ಸಾಧ್ಯತೆ ಕಡಿಮೆ ಎನ್ನಲಾಗಿದ್ದರೂ, ಮುನ್ನೆಚ್ಚರಿಕೆ ವಹಿಸಲಾಗಿದೆ. ಸದ್ಯ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾತಿ ಆರ್ಟ್ಸ್ ನ ಸತೀಶ್

TAGGED:Woman injects 'HIV' to ex-lover's wife
Share This Article
Facebook Twitter Copy Link Print
Previous Article ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಸ್ವಾತಿ ಆರ್ಟ್ಸ್ ನ ಸತೀಶ್
Next Article ವಿದ್ಯಾರ್ಥಿನಿಯ ಒಳ ಉಡುಪಿನಲ್ಲಿ ವೀರ್ಯ ಪತ್ತೆ; FSL ವರದಿ ಹೇಳಿದ್ದೇನು?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?