https://youtube.com/shorts/gtZudXyWr4w?si=_eDYSDBMXS1DPzq5
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಪೊಲೀಸ್ ಕಾನ್ಸ್ಟೇಬಲ್ ಕಾಲೇಜು ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಯಮುನಾ ನಾಯಕ್, ತನಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಪಿಯುಸಿ ವಿದ್ಯಾರ್ಥಿಯೋರ್ವ ಆರೋಪಿಸಿದ್ದಾನೆ.
ಈ ಸಂಬಂಧ ನೊಂದ ವಿದ್ಯಾರ್ಥಿ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರ ಮೇರೆಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ಈ ದೂರಿನ ಮೇರೆಗೆ ಉಪ್ಪಾರಪೇಟೆ ಪೊಲೀಸರು, ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಅರೋಪಿ ಪೇದೆ ಯಮುನಾ ನಾಯಕ್ ನನ್ನು ಬಂಧಿಸಿದ್ದಾರೆ.
ಸದ್ಯ ಯಮುನಾ ನಾಯಕ್‌ನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
https://www.newsics.com/2026/01/26/former-bcci-president-i-s-bindra-passes-away/