Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿ ಮದುವೆಯಾಗುವ ಜೋಡಿಗೆ ಈ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ
ದೇಶಪ್ರಮುಖ

ಪ್ರೀತಿಸಿ ಮದುವೆಯಾಗುವ ಜೋಡಿಗೆ ಈ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಪ್ರೀತಿಸಿ ಮದುವೆಯಾಗುವ ಜೋಡಿಗೆ ಮಧ್ಯಪ್ರದೇಶದ ರತ್ಲಂ ಜಿಲ್ಲೆಯ ಗ್ರಾಮದ ನಿವಾಸಿಗಳು ಸಾಮಾಜಿಕ ಬಹಿಷ್ಕಾರ ಹಾಕುವುದಾಗಿ ಘೋಷಿಸಿದ್ದಾರೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಜಿಲ್ಲಾ ಕೇಂದ್ರದಿಂದ 50 ಕೀ.ಮೀ ದೂರದಲ್ಲಿರುವ ಪಂಚೇವಾ ಗ್ರಾಮದಲ್ಲಿ ಜನವರಿ 23ರಂದು ಈ ಆದೇಶ ಹೊರಡಿಸಲಾಗಿದೆ.
ಕಳೆದ ಆರು ತಿಂಗಳಲ್ಲಿ ಗ್ರಾಮದಲ್ಲಿ ಎಂಟು ಜೋಡಿಗಳು ಪೋಷಕರ ಒಪ್ಪಿಗೆ ಇಲ್ಲದೆ ಮದುವೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಬಹಿಷ್ಕಾರ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಿವಾಸಿಗಳು ಹೇಳಿದ್ದಾರೆ.
‘ಪ್ರೀತಿಸಿ ಮದುವೆಯಾಗುವ ಜೋಡಿ ಹಾಗೂ ಅವರ ಕುಟುಂಬಸ್ಥರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗುತ್ತದೆ ಮತ್ತು ಯಾವುದೇ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುವುದಿಲ್ಲ. ಜತೆಗೆ, ಇಂತಹ ವ್ಯಕ್ತಿಗಳಿಗೆ ಸಹಾಯ ಮಾಡುವವರೂ ಸಹ ಇದೇ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಘೋಷಣೆ ಕೂಗಲಾಗಿದೆ. ಈ ವಿಡಿಯೊ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
‘ಪ್ರೀತಿಸಿ ಮದುವೆಯಾಗುವ ಜೋಡಿಗೆ ಉದ್ಯೋಗಾವಕಾಶ ನೀಡುವುದಿಲ್ಲ. ಹಾಲು ಸೇರಿದಂತೆ ದೈನಂದಿನ ಅಗತ್ಯ ವಸ್ತುಗಳನ್ನು ನಿರಾಕರಿಸಲಾಗುತ್ತದೆ’ ಎಂದೂ ವ್ಯಕ್ತಿ ಹೇಳಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
‘ಪ್ರೇಮ ವಿವಾಹ ವಿರುದ್ಧದ ನಿರ್ಧಾರವನ್ನು ಗ್ರಾಮ ಸಭೆ ತೆಗೆದುಕೊಂಡಿಲ್ಲ. ಆದರೆ, ಕೆಲವು ಗ್ರಾಮಸ್ಥರು ಈ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ಜಿಲ್ಲಾಧಿಕಾರಿ ಮಿಶಾ ಸಿಂಗ್ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೊ ಆಧರಿಸಿ ಘೋಷಣೆ ಕೂಗುತ್ತಿರುವ ವ್ಯಕ್ತಿಯನ್ನು ಈಗಾಗಲೇ ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿವೇಕ್ ಕುಮಾರ್ ಲಾಲ್ ತಿಳಿಸಿದ್ದಾರೆ.

ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?

TAGGED:A couple who falls in love and gets married faces social boycott in this village!
Share This Article
Facebook Twitter Copy Link Print
Previous Article ಹಣ ನೀಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕಲ್ಲಿನಿಂದ ಜಜ್ಜಿ  ಕೊಲೆ ಮಾಡಿದ ಮಗ
Next Article Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?