Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ
ಕರ್ನಾಟಕದೇಶಪ್ರಮುಖ

Weather forecast ಸೈಕ್ಲೋನ್ ಎಫೆಕ್ಟ್: ರಾಜ್ಯದಲ್ಲಿ ಮತ್ತಷ್ಟು ಚಳಿ, ಅಲ್ಲಲ್ಲಿ ಮಳೆ

Share
2 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಈಗಾಗಲೇ ನೆರೆಯ ತಮಿಳುನಾಡಿಗೆ ಭಾರೀ ಮಳೆ ಎಚ್ಚರಿಕೆ ನೀಡಿದ್ದ ಹವಾಮಾನ ಇಲಾಖೆ ಇದೀಗ ಅದರ ಪರಿಣಾಮ ಕರ್ನಾಟಕದ ಮೇಲೂ ಆಗಲಿದೆ ಎಂದು ಮಾಹಿತಿ ನೀಡಿದೆ.

ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಇದಕ್ಕೆ ಇಂಬು ನೀಡುವಂತೆ ನಿನ್ನೆ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಚದುರಿದಂತೆ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ನೇರ ಪರಿಣಾಮ ತಮಿಳುನಾಡು ಮಾತ್ರವಲ್ಲದೇ ಈಗ ಕರ್ನಾಟಕದ ಮೇಲೆ ಬೀರಲಾರಂಭಿಸಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಗಣನೀಯವಾಗಿ ಕುಸಿದಿದೆ. ದಿನವಿಡೀ ಮೋಡಕವಿದ ವಾತಾವರಣ ಚಳಿಯ ಪ್ರಮಾಣ ಹೆಚ್ಚಳವಾಗುವಂತೆ ಮಾಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜನವರಿ 26ರಿಂದ ಜನವರಿ 28ರವರೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಈ ಬದಲಾದ ಹವಾಮಾನ ಪರಿಸ್ಥಿತಿ ಮಲೆನಾಡು ಮತ್ತು ಬಯಲು ಸೀಮೆಯ ಜನರಲ್ಲಿ ಆತಂಕ ಮನೆ ಮಾಡಿದೆ, ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ.
ತಮಿಳುನಾಡಿನಿಂದ ಬಂಗಾಳಕೊಲ್ಲಿಯ ನೈಋುತ್ಯ ಭಾಗದಲ್ಲಿ ಮತ್ತು ಶ್ರೀಲಂಕಾಗೆ ಹೊಂದಿಕೊಂಡಿರುವ ಪೂರ್ವ ದಿಕ್ಕಿನಲ್ಲಿ ಸೃಷ್ಟಿಯಾಗಿದ್ದ ವಾಯುಭಾರ ಕುಸಿತ ಇದೀಗ ತನ್ನ ಪಥ ಬದಲಿಸಿದೆ. ಈ ವ್ಯವಸ್ಥೆ ಇದೀಗ ಕೊಮೊರಿನ್ ಪ್ರದೇಶದಿಂದ ಉತ್ತರ ಕೇರಳ ಕರಾವಳಿಯವರೆಗೆ ಅರೇಬಿಯನ್ ಸಮುದ್ರದಾದ್ಯಂತ ಸರಾಸರಿ ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿ ಸಕ್ರಿಯವಾಗಿದೆ.
ಈ ಮಾರುತಗಳ ಚಲನೆಯಿಂದಾಗಿ ತೇವಾಂಶ ಭರಿತ ಗಾಳಿ ರಾಜ್ಯದ ಒಳನಾಡಿನತ್ತ ಬೀಸುತ್ತಿದೆ. ಇದರ ಪರಿಣಾಮ ಕರ್ನಾಟಕ ಪ್ರದೇಶದಲ್ಲಿ ಅಸ್ಥಿರತೆ ಉಂಟಾಗಿದ್ದು, ಗಾಳಿಯ ಒತ್ತಡ ಕಡಿಮೆಯಾಗಿ ಮೋಡಗಳು ದಟ್ಟವಾಗಿ ಕವಿಯುತ್ತಿವೆ. ಈ ಪ್ರಕ್ರಿಯೆಯಿಂದಾಗಿ ದಕ್ಷಿಣ ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯಾಗಿದ್ದರೆ. ಉತ್ತರ ಭಾಗದಲ್ಲಿ ಚಳಿ ತೀವ್ರಗೊಂಡಿದೆ.
ಹವಾಮಾನ ಇಲಾಖೆ ಪ್ರಕಾರ ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಕೊಡಗು, ಹಾಸನ ದಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ಮಲೆನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಿನ್ನೆ ಸಂಜೆ ಸಾಧಾರಣ ಮಳೆಯಾಗಿದೆ. ಮುಂದಿನ 48 ಗಂಟೆಗಳಲ್ಲಿ ಇದೇ ರೀತಿಯ ಮತ್ತೊಂದು ಸುತ್ತಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

https://x.com/i/status/2015975772570481003

TAGGED:Cyclone effect: More cold in the statescattered rain
Share This Article
Facebook Twitter Copy Link Print
Previous Article ಪ್ರೀತಿಸಿ ಮದುವೆಯಾಗುವ ಜೋಡಿಗೆ ಈ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ
Next Article ಹೇಗೆ ಸೆಲ್ಯೂಟ್ ಹೊಡಿಬೇಕು ಅನ್ನೋದು IAS ಅಧಿಕಾರಿಗೆ ಗೊತ್ತಿಲ್ವಾ; ಟ್ರೋಲ್ ಆದ ಟೀನಾ ದಾಬಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?