Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?
ಕರ್ನಾಟಕಪ್ರಮುಖ

ಪೌರಾಯುಕ್ತರಿಗೆ ಬೆದರಿಕೆ ಹಾಕಿದ್ದ ರಾಜೀವಗೌಡ ಬಂಧನವಾಗಿದ್ದು ಹೇಗೆ? ಇವತ್ತು ಜೈಲು ಸೇರ್ತಾರಾ?

Share
2 Min Read
SHARE

https://youtube.com/shorts/2dkIPQOWaBI?si=yWrxSqwrmu8x_ve-

Subscribe ನ್ಯೂಸಿಕ್ಸ್ ಕನ್ನಡ

newsics.com

ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿ ರಾಜೀವ್ ಗೌಡನ ಬಂಧನವಾಗಿದೆ.

ಕಳೆದ 14 ದಿನಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಸೋಮವಾರ ರಾತ್ರಿ (ಜನವರಿ 26) ಕೇರಳ ಗಡಿಯಲ್ಲಿ ಸಿಕ್ಕಿಬಿದ್ದಿದ್ದಾನೆ.

ರಾಜೀವ್ ಗೌಡನಿಗೆ ಇಷ್ಟು ದಿನ ಮಂಗಳೂರಿನ ಬಹುಕೋಟಿ ಒಡೆಯ ಆಶ್ರಯ ನೀಡಿದ್ದ ಎನ್ನುವ ಸ್ಫೋಟಕ ಮಾಹಿತಿ ಬಯಲಾಗಿದೆ. ಆಶ್ರಯ ನೀಡಿದ್ದ ಉದ್ಯಮಿಯ ಕಾರಿನ ಮೂಲಕವೇ ಸೋಮವಾರ (ಜನವರಿ 26) ಮಂಗಳೂರಿನಿಂದ ಕೇರಳಕ್ಕೆ ಪರಾರಿಯಾಗುತ್ತಿರುವ ವೇಳೆ ರಾಜೀವ್ ಗೌಡನನ್ನು ಪೊಲೀಸರು ಹಿಡಿದು ಕೋಳ ತೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜೀವ್ ಗೌಡ ಸಿಕ್ಕಿಬಿದ್ದಿದ್ಹೇಗೆ?

ಜನವರಿ 12ರಂದು ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡಗೆ ಕಲ್ಟ್ ಸಿನಿಮಾ ಬ್ಯಾನರ್ ತೆರವು ಮಾಡಿದ್ದಕ್ಕೆ ರಾಜೀವ್ ಗೌಡ ಧಮ್ಕಿ ಹಾಕಿದ್ದ. ಜನವರಿ 14ರಂದು ಈ ಬಗ್ಗೆ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ 13 ದಿನಗಳಿಂದ ಚಿಕ್ಕಬಳ್ಳಾಪುರ ಬಿಟ್ಟು ಪರಾರಿಯಾಗಿದ್ದ. ಇದರ ಬೆನ್ನಲ್ಲೇ ಜನವರಿ 24ರಂದು ರಾಜೀವ್‌ನನ್ನು ಕೆಪಿಸಿಸಿ ಶಿಸ್ತುಸಮಿತಿ ಅಮಾನತು ಮಾಡಿತ್ತು. ಜತೆಗೆ FIR ರದ್ದುಕೋರಿ ರಾಜೀವ್ ಸಲ್ಲಿಸಿದ್ದ ಅರ್ಜಿಯನ್ನೂ ಹೈಕೋರ್ಟ್ ವಜಾಗೊಳಿಸಿತ್ತು.

ಹೀಗಾಗಿ ಬಂಧನದ ಭೀತಿಯಲ್ಲಿದ್ದ ರಾಜೀವ್ ಗೌಡನಿಗೆ ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಬಳಿ 3 ದಿನದಿಂದ ಆಶ್ರಯ ಪಡೆದಿದ್ದ. ಇನ್ನು ಪೊಲೀಸರ ಕಣ್ತಪ್ಪಿಸಲು ಮಂಗಳೂರು ರೈಲ್ವೆ ಸ್ಟೇಷನ್ನಲ್ಲಿ ಕಾರು ನಿಲ್ಲಿಸಿ ಕಳ್ಳಾಟ ಆಡಿದ್ದ. ಆದ್ರೆ ಉದ್ಯಮಿ ಕಾರಿನಲ್ಲೇ ತಲಪಾಡಿ ಮಾರ್ಗವಾಗಿ ಕಾಸರಗೋಡಿನತ್ತ ಹೋಗುತ್ತಿದ್ದ ರಾಜೀವ್ ಗೌಡನನ್ನು ಹಿಡಿದು ಕೈಗೆ ಕೋಳ ತೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜೀವ್ ಗೌಡ, ಮಂಗಳೂರಿನ ಉದ್ಯಮಿಯ ಆಶ್ರಯದಲ್ಲಿದ್ದಾನೆ ಎನ್ನುವ ಮಾಹಿತಿ ಪೊಲೀಸರಿಗೆ ತಿಳಿಯುತ್ತಿದ್ದಂತೆಯೇ ಬಂಧನಕ್ಕೆ ಬಲೆ ಬೀಸಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಪೊಲೀಸರ ದಿಕ್ಕು ತಪ್ಪಿಸಲು ಆರೋಪಿ ರಾಜೀವ್ ಗೌಡ, ತನ್ನ ಕಾರು ಮಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿದ್ದ. ಬಳಿಕ ಆಶ್ರಯ ಕೊಟ್ಟಿದ್ದ ಉದ್ಯಮಿಯ ಕಾರಿನಲ್ಲಿ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ಹೋಗಿದ್ದ.

ಮಂಗಳೂರು ರೈಲ್ವೇ ನಿಲ್ದಾಣದಲ್ಲಿ ತನ್ನ ಕಾರು ಬಿಟ್ಟು ಉದ್ಯಮಿಯ ಕಾರಿನಲ್ಲಿ ತೆರಳಿದ್ದಾನೆ ಎಂದು ತಿಳಿದ ಪೊಲೀಸರು, ಉದ್ಯಮಿಯ ಕಾರು ಯಾವ ಕಡೆ ಹೋಗಿದೆ ಎನ್ನುವ ಬಗ್ಗೆ ಕಾರ್ಯಾಚರಣೆ ನಡೆಸಿದ್ದು, ಆಗ ತಲಪಾಡಿ ಮಾರ್ಗವಾಗಿ ಕಾಸರಗೋಡು ಕಡೆ ತೆರಳಿರುವ ಮಾಹಿತಿ ಸಿಕ್ಕಿದೆ. ಬಳಿಕ ಇದೇ ಮಾರ್ಗದಲ್ಲಿ ಉದ್ಯಮಿಯ ಕಾರು ಜಾಡು ಹಿಡಿದು ಹೊರಟ ಶಿಡ್ಲಘಟ್ಟ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡಕ್ಕೆ ಕೇರಳ ಗಡಿ ಭಾಗದಲ್ಲಿ ಆರೋಪಿ ರಾಜೀವ್ ಗೌಡ ಸಿಕ್ಕಿಬಿದ್ದಿದ್ದಾನೆ.

ಸದ್ಯ ಪೊಲೀಸ್ ವೃತ್ತ ನಿರೀಕ್ಷಕ ಆನಂದಕುಮಾರ್ ತಂಡ, ಕೇರಳದ ಗಡಿಭಾಗದಿಂದ ರಾಜೀವ್‌ಗೌಡನನ್ನು ಶಿಡ್ಲಘಟ್ಟ ನಗರ ಠಾಣೆಗೆ ಕರೆತಂದಿದ್ದು, ಮಂಗಳವಾರ ಚಿಂತಾಮಣಿ ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ರಾಜೀವ್ ಗೌಡ ವಿರುದ್ಧ ಜನವರಿ 14 ರಂದು ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಎರಡು ದೂರುಗಳು ದಾಖಲಾಗಿದ್ದವು. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡರಿಂದ ಒಂದು ದೂರು. ಶಾಸಕ ರವಿಕುಮಾರ್ ಪರವಾಗಿ ಒಂದು ದೂರು ದಾಖಲಾಗಿತ್ತು. ಬೆದರಿಕೆ ಪತ್ರ ಹಿನ್ನೆಲೆ ಮೊನ್ನೆ ಮತ್ತೊಂದು ದೂರು ದಾಖಲಾಗಿತ್ತು. ಹೀಗಾಗಿ ರಾಜೀವ್ ಗೌಡ ಬಂಧನಕ್ಕೆ ರಾಜ್ಯದ್ಯಂತ ಒತ್ತಾಯ ಕೇಳಿಬಂದಿತ್ತು. ಸಿಎಂ ಸಿದ್ದರಾಮಯ್ಯ ಕೂಡ ರಾಜೀವ್ ಗೌಡ ಬಂಧನ ವಿಳಂಬಕ್ಕೆ ಕಿಡಿಕಾರಿದ್ದರು.

ಧರ್ಮಸ್ಥಳ ಪಾರ್ಕ್‌ಲ್ಲಿ ಬಿರಿಯಾನಿ ಕಬಾಬ್ ತಿಂದಿದ್ದೇನೆ, ದೇವ್ರ ದಿಂಡ್ರೂ ನಾನು ನಂಬಲ್ಲ :ಡಾಗ್ ಸತೀಶ್ ಹೇಳಿಕೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

TAGGED:How was Rajiv Gowda arrested for threatening the civic commissioner?
Share This Article
Facebook Twitter Copy Link Print
Previous Article ಅಮೆರಿಕದಲ್ಲಿ ಹಿಮಬಿರುಗಾಳಿಗೆ ಸಿಲುಕಿ ಜೆಟ್ ಪಥನ: 7 ಜನರು ಸಾವು
Next Article ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಹೂವಿನ ಬಾಣದಂತೆ ಯುವತಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?