https://youtube.com/shorts/2dkIPQOWaBI?si=qOFv3qtqoG_9KZ47
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು : ಸಾಯುವವರೆಗೆ ಜೀವಾವಧಿ ಶಿಕ್ಷೆ ವಿಧಿಸುವ ಅಧಿಕಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಮಾತ್ರ ಹೊಂದಿವೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಮೂರೂವರೆ ವರ್ಷದ ಮಗುವನ್ನು ಕೊಲೆ ಮಾಡಿದ ಪ್ರಕರಣದಲ್ಲಿ ತನಗೆ ಸಾಯುವವರೆಗೆ ಜೀವಾವಧಿ (ಜೈಲು) ಶಿಕ್ಷೆ ವಿಧಿಸಿದ ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶ ರದ್ದು ಕೋರಿ ರುದ್ರೇಶ್ (28) ಎಂಬಾತ ಹೈಕೋರ್ಟ್ಗೆ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರ ನೇತೃತ್ವದ ವಿಭಾಗೀಯ ಪೀಠ, ರುದ್ರೇಶ್ಗೆ ಸಾಯುವವರೆಗೂ ಜೈಲು ಶಿಕ್ಷೆ ವಿಧಿಸಿ ಸೆಷನ್ಸ್ (ಅಧೀನ) ಕೋರ್ಟ್ ಆದೇಶಿಸಿದೆ.
ಈ ಪ್ರಕರಣದ ಆರೋಪಿ ಶಿವಮೊಗ್ಗದ ರುದ್ರೇಶ್ ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾಮತ್ತು ಸೆಷನ್ಸ್ ನ್ಯಾಯಾಲಯ ತನಗೆ ಜೀವನಪರ್ಯಂತ ಜೈಲು ಶಿಕ್ಷೆ ವಿಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ಪಧಿರಿಶೀಲಿಸಿದ ನ್ಯಾ. ಎಚ್.ಪಿ.ಸಂದೇಶ್ ಮತ್ತು ನ್ಯಾ.ಟಿ. ವೆಂಕಟೇಶ್ ನಾಯಕ್ ಅವರಿದ್ದ ವಿಭಾಗೀಯ ಪೀಠ ಇಂತಹ ತೀರ್ಪು ನೀಡಿದೆ.
https://www.newsics.com/2026/01/27/radha-ramana-actress-kavya-gowda-and-her-husband-attacked/