https://youtube.com/shorts/2dkIPQOWaBI?si=yWrxSqwrmu8x_ve-
Subscribe ನ್ಯೂಸಿಕ್ಸ್ ಕನ್ನಡ
newsics.com
ಚಿನ್ನ ಹಾಗೂ ಬೆಳ್ಳಿ ಬೆಲೆ ಭಾರಿ ಏರಿಕೆಯಾಗುತ್ತಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆ ಇಂದು 159,820 ರೂಪಾಯಿಗೆ ಏರಿಕೆಯಾಗಿದೆ. ಇಂದ ಚಿನ್ನದ ಬೆಲೆಯಲ್ಲಿ ಶೇಕಡಾ 1.7 ರಷ್ಟು ಏರಿಕೆಯಾಗಿದೆ. ಚಿನ್ನದ ಬೆಲೆ ಭಾರಿ ಏರಿಕೆಯಾಗಿದ್ದು ನಿಜ. ಇದರಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ. ಆದರೆ ಬೆಳ್ಳಿಗೆ ಹೋಲಿಸಿದರೆ ಚಿನ್ನದ ಬೆಲೆಯ ಏರಿಕೆ ಕಡಿಮೆ.
ಕಳೆದ 48 ಗಂಟೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ ಬರೋಬ್ಬರಿ 35,000 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಬೆಳ್ಳಿ ಎಲ್ಲಾ ದಾಖಲೆ ಮುರಿದಿದ್ದು ಮಾತ್ರವಲ್ಲ, ಬೆಳ್ಳಿಯ ಬೆಲೆ ಏರಿಕೆ ಪ್ರಮಾಣ ಮುಂದೆ ಬಂಗಾರ ಭಾರಿ ಹಿಂದಿದೆ. ಕಾರಣ ಬಂಗಾರ ಮೂರರಿಂದ ನಾಲ್ಕು ದಿನಕ್ಕೆ ಶೇಕಡಾ 1 ರಿಂದ 2ರಷ್ಟು ಏರಿಕೆ ಕಾಣುತ್ತಿದೆ. ಆದರೆ ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಆಗಿರುವ ಏರಿಕೆಗೆ ಬೆಚ್ಚಿ ಬೀಳುವುದು ಗ್ಯಾರೆಂಟಿ
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಜನವರಿ 27ಕ್ಕೆ)
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,195 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,845 ರೂ
18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,146 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 370 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 16,195 ರೂ
22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,845 ರೂ
ಬೆಳ್ಳಿ ಬೆಲೆ 1 ಗ್ರಾಂಗೆ: 370 ರೂ
ಕಳೆದ 10 ದಿನಗಳಲ್ಲಿ ಬೆಳ್ಳಿ ಬೆಲೆ ಬರೋಬ್ಬರಿ ಶೇಕಡಾ 25ರಷ್ಟು ಏರಿಕೆ ಕಂಡಿದೆ. ಹೀಗಾಗಿ ಹೂಡಿಕೆದಾರರು ಇದೀಗ ಬೆಳ್ಳಿ ಮೇಲೆ ಆಸಕ್ತಿ ತೋರುತ್ತಿದ್ದಾರೆ. ಬೆಳ್ಳಿ ಪ್ರತ್ತಿ ವರ್ಷಕ್ಕೆ ಶೇಕಡಾ 70 ರಿಂದ 100ರಷ್ಟು ರಿಟನ್ಸ್ ನೀಡುತ್ತಿದೆ. ಅಂದರೆ ಈ ವರ್ಷ 100 ರೂಪಾಯಿ ಬೆಳ್ಳಿ ಮೇಲೆ ಹೂಡಿಕೆ ಮಾಜಿದ್ದರೆ, ಮುಂದಿನ ವರ್ಷಕ್ಕೆ ಡಬಲ್ ಆಗುತ್ತಿದೆ. ಹೀಗಾಗಿ ಬೆಳ್ಳಿ ಹೂಡಿಕೆದಾರರ ಮೊದಲ ಆಯ್ಕೆಯಾಗಿ ಹೊರಹೊಮ್ಮಿದೆ.