https://youtube.com/shorts/Dd-eFU1bWK0?si=hJq7z4x2IO7dpcdC
Subscribe ನ್ಯೂಸಿಕ್ಸ್ ಕನ್ನಡ
newsics.com
ಕೊಚ್ಚಿ: ಕೇರಳ ಮೂಲದ ದೀಪಕ್ ಸಾವು ಪ್ರಕರಣ ಇಡೀ ದೇಶದಲ್ಲಿ ಸಾಕಷ್ಟು ಸದ್ದು ಮಾಡಿದ್ದು ಬಹುತೇಕರಿಗೆ ಗೊತ್ತಿದೆ. ತಾನು ಮಾಡದೇ ಇರುವ ತಪ್ಪಿಗೆ ಅಮಾಯಕ ದೀಪಕ್ ಸಾವಿಗೆ ಶರಣಾಗಿದ್ದಾನೆ. ತನ್ನ ವೀಲ್ಸ್ ಹುಚ್ಚಿಗೆ ಮಾನವೀಯತೆಯನ್ನು ಮರೆತು ವರ್ತಿಸಿದ ಆರೋಪಿ ಶಿಮ್ಮಿತಾ ಮುಸ್ತಫಾ ವಿರುದ್ಧ ದೇಶಾದ್ಯಂತ ತೀವ್ರ ಟೀಕೆಗಳು ವ್ಯಕ್ತವಾಗಿವೆ. ಆದರೂ ಕೂಡ ಆಕೆಗೆ ಸ್ವಲ್ಪವೂ ಪಶ್ಚಾತ್ತಾಪವಿಲ್ಲ ಎಂಬುದನ್ನು ನ್ಯಾಯಾಲಯವೂ ಗಮನಿಸಿದೆ.
ಪ್ರಸ್ತುತ ನ್ಯಾಯಾಂಗದ ಬಂಧನದಲ್ಲಿರುವ ಆರೋಪಿ ಶಿಮ್ಜಿತಾ, ಇನ್ನಷ್ಟು ದಿನಗಳ ಕಾಲ ಜೈಲಿನ ಕೋಣೆಯಲ್ಲಿ ಕಾಲ ಕಳೆಯಬೇಕಾಗಿದೆ. ಏಕೆಂದರೆ, ಕುಂದಮಂಗಲಂ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆಕೆಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ನ್ಯಾಯಾಲಯವು ಪ್ರಾಸಿಕ್ಯೂಷನ್ ವಾದಗಳನ್ನು ಎತ್ತಿಹಿಡಿದಿದೆ. ಸದ್ಯ ಈ ಪ್ರಕರಣ, ತನಿಖೆಯ ಪ್ರಾಥಮಿಕ ಹಂತದಲ್ಲಿದೆ ಮತ್ತು ಈ ಪರಿಸ್ಥಿತಿಯಲ್ಲಿ ಜಾಮೀನು ನೀಡುವುದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪ್ರಾಸಿಕ್ಯೂಷನ್ ವಾದಿಸಿತು. ಬಸ್ ಸಿಬ್ಬಂದಿ ಮತ್ತು ಇತರ ಪ್ರಯಾಣಿಕರ ಹೇಳಿಕೆಗಳನ್ನು ದಾಖಲಿಸಬೇಕಾಗಿರುವುದರಿಂದ ಆರೋಪಿಗಳನ್ನು ಬಿಡುಗಡೆ ಮಾಡುವುದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಪೊಲೀಸ್ ವರದಿಯಲ್ಲಿ ಸೂಚಿಸಲಾಗಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಜಾಮೀನು ತಿರಸ್ಕರಿಸಿದೆ.