https://youtube.com/shorts/Dd-eFU1bWK0?si=LMJU3zpxmXbcfjrx
Subscribe ನ್ಯೂಸಿಕ್ಸ್ ಕನ್ನಡ
newsics.com
ಶಿವಮೊಗ್ಗ: ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್‌ಡಿ)ಯಿಂದ ಸೋಂಕಿತ ಯುವಕ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ತೀರ್ಥಹಳ್ಳಿ ತಾಲೂಕಿನ ಕಟಗಾರು ಗ್ರಾಮದ 29 ವರ್ಷದ ಯುವಕ ಸೋಂಕಿನಿಂದಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಜನವರಿ 20 ರಿಂದ ಯುವಕ ತೀವ್ರ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯವಾಗಿ ಚಿಕಿತ್ಸೆ ಪಡೆದರೂ ಜ್ವರದ ತೀವ್ರತೆ ಕಡಿಮೆಯಾಗಿರಲಿ.
ಕಳೆದ ಭಾನುವಾರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಯುವಕ ಕೊನೆಯುಸಿರೆಳೆದಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆಯು ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಕಟಗಾರು ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಜ್ವರದ ಲಕ್ಷಣವಿರುವವರ ತಪಾಸಣೆಗೆ ಸೂಚಿಸಿದೆ. ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ಕೂಡಲೇ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.
ಕಾರ್ಪೊರೇಟ್ ಜಗತ್ತಿನಲ್ಲಿ ವಿವಾಹೇತರ ಸಂಬಂಧಗಳ ಬಗ್ಗೆ ಹಾಗಾದ್ರೆ ಯುವತಿ ಹೇಳಿದ್ದೇನು?ವಿಡಿಯೋ ನೋಡಿ
Ajit Pawar’s body is completely burnt! ವಿಮಾನ ಛಿದ್ರ ಛಿದ್ರ, ಪೂರ್ತಿ ಸುಟ್ಟುಹೋದ ಅಜಿತ್ ಪವಾರ್ ದೇಹ!