Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು
ಕರ್ನಾಟಕಪ್ರಮುಖ

ಜಾತ್ರೆಯಲ್ಲಿ ಸಿಪಿಐ ಮೈಮೇಲೆ ಹರಿದ ಎತ್ತಿನಗಾಡಿ; ಪ್ರಾಣಾಪಾಯದಿಂದ ಪಾರು

Share
1 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಭದ್ರತಾ ಕರ್ತವ್ಯದಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಮೇಲೆ ಎತ್ತಿನಗಾಡಿ ಹರಿದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತಮಟದಹಳ್ಳಿ ಗೇಟ್ ಬಳಿ ನಡೆದಿದೆ.

ಅಂತರಘಟ್ಟೆ ದುರ್ಗಾಂಬ ಜಾತ್ರೆಯ ಬಂದೋಬಸ್ತ್‌ಗಾಗಿ ನಿಯೋಜನೆಗೊಂಡಿದ್ದ ಅಜ್ಜಂಪುರ ಸರ್ಕಲ್ ಇನ್ಸ್‌ಪೆಕ್ಟರ್ (ಸಿಪಿಐ) ವೀರೇಂದ್ರ ಅವರು ರಸ್ತೆಯಲ್ಲಿ ವಾಹನಗಳ ನಿಯಂತ್ರಣ ಮಾಡುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಎತ್ತಿನಗಾಡಿಯನ್ನು ಕಂಡು ತಪ್ಪಿಸಿಕೊಳ್ಳಲು ಅವರು ಪ್ರಯತ್ನಿಸಿದ್ದಾರೆ. ಆದರೆ, ಓಡುವಷ್ಟರಲ್ಲಿ ನಿಯಂತ್ರಣ ತಪ್ಪಿದ ಎತ್ತಿನಗಾಡಿ ಅವರ ಮೈಮೇಲೆಯೇ ನುಗ್ಗಿದೆ.
ಇನ್ಸ್‌ಪೆಕ್ಟರ್ ವೀರೇಂದ್ರ ಅವರು ಕೆಳಗೆ ಬೀಳುತ್ತಿದ್ದಂತೆ ಎತ್ತಿನಗಾಡಿಯ ಚಕ್ರ ಅವರ ಮೇಲೆ ಹರಿದಿದೆ. ಅದೃಷ್ಟವಶಾತ್, ಅದು ಕಬ್ಬಿಣದ ಚಕ್ರದ ಗಾಡಿಯಾಗಿರದೆ ರಬ್ಬರ್ ಟೈರ್ ಗಾಡಿಯಾಗಿದ್ದರಿಂದ (ಟೈರ್ ಗಾಡಿ) ಇನ್ಸ್‌ಪೆಕ್ಟರ್ ಅವರಿಗೆ ಉಂಟಾಗಬಹುದಾದ ಭೀಕರ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ. ಆದರೂ ಚಕ್ರ ಮೈಮೇಲೆ ಹರಿದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ
ಘಟನೆ ನಡೆದ ತಕ್ಷಣವೇ ಸ್ಥಳೀಯರು ಸಹಾಯದಿಂದ ಗಾಯಾಳು ಸಿಪಿಐ ಅವರನ್ನು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಸ್ತುತ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ದುಡಿಮೆಯನ್ನೇ ಕನಸಾಗಿ ಮಾಡಿಕೊಂಡು ಜೀವನ ಮಾಡಿದ್ದೆ ; ನಿರೂಪಕಿ ಅನುಶ್ರೀ ಕಣ್ಣೀರು

TAGGED:CPI runs over bullock cart at fair; escapes fatality!
Share This Article
Facebook Twitter Copy Link Print
Previous Article ದುಡಿಮೆಯನ್ನೇ ಕನಸಾಗಿ ಮಾಡಿಕೊಂಡು ಜೀವನ ಮಾಡಿದ್ದೆ ; ನಿರೂಪಕಿ ಅನುಶ್ರೀ ಕಣ್ಣೀರು
Next Article ನಟಿ ಆಕಾಂಕ್ಷಾ ವಿರುದ್ಧ 11ಕೋಟಿ ವಂಚನೆ ಆರೋಪ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?