Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೃಥಾ ಟೀಕೆ ಬೇಡ, ಚರ್ಚೆಗೆ ಬನ್ನಿ: ಉದ್ಯಮಿ ಮೋಹನ್ ದಾಸ್ ಪೈಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು
ಕರ್ನಾಟಕದೇಶಪ್ರಮುಖ

ವೃಥಾ ಟೀಕೆ ಬೇಡ, ಚರ್ಚೆಗೆ ಬನ್ನಿ: ಉದ್ಯಮಿ ಮೋಹನ್ ದಾಸ್ ಪೈಗೆ ಸಚಿವ ರಾಮಲಿಂಗಾರೆಡ್ಡಿ ಸವಾಲು

Share
3 Min Read
SHARE

https://youtube.com/shorts/vtmMY3C33B4?si=6NGHSVR8AcxO6HfD

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಟ್ವೀಟ್ ಮಾಡುವುದನ್ನು ಬಿಟ್ಟು ನೇರವಾಗಿ ನಮ್ಮ ಬಿಎಂಟಿಸಿ ಎಂಡಿ ಜತೆ ಮುಖಾಮುಖಿ ಚರ್ಚೆಗೆ ಬನ್ನಿ, ನಿಮ್ಮ ಎಲ್ಲ ಪ್ರಶ್ನೆಗಳಿಗೂ ನಮ್ಮ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಎಂಡಿ ಉತ್ತರ ನೀಡಲು ಸಿದ್ಧರಾಗಿದ್ದಾರೆ. ಧೈರ್ಯವಿದ್ದರೆ ಚರ್ಚೆಗೆ ಬನ್ನಿ… ಹೀಗೆಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಯವರು ಉದ್ಯಮಿ ಮೋಹನ್‌ ದಾಸ್‌ ಪೈ ಅವರಿಗೆ ಸವಾಲು ಹಾಕಿದ್ದಾರೆ.

ರಸ್ತೆ ಗುಂಡಿ ವಿಚಾರದಲ್ಲಿ ಉದ್ಯಮಿ ಮೋಹನ್‌ ದಾಸ್‌ ಪೈ ಅವರು ಟೀಕೆ ಮಾಡಿದ್ದರು. ಈಗ ಆ ಟೀಕಾಪ್ರಹಾರಗಳು ಸದ್ಯ ಬಿಎಂಟಿಸಿಯತ್ತ ಹೊರಳಿದೆ.

ಅಶ್ವಿನ್‌ಮಹೇಶ್‌ ಎಂಬುವರು ಟ್ವೀಟ್‌ ಮಾಡಿದ್ದ ಪೋಸ್ಟ್‌ ಉಲ್ಲೇಖಿಸಿ ಮೋಹನ್‌ ದಾಸ್‌ ಅವರು ಎಕ್ಸ್‌ನಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಗ್ಗೆ ಮತ್ತು ಸಚಿವ ರಾಮಲಿಂಗಾ ರೆಡ್ಡಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.
ರಾಮಲಿಂಗರೆಡ್ಡಿಯವರೇ ಸಾರಿಗೆ ಸಚಿವರಾಗಿ‌ ನಿಮ್ಮ ಸಿದ್ಧಾಂತ ಮತ್ತು ನಡೆಯಿಂದ ರಾಜ್ಯಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ ನೀಡುವಲ್ಲಿ ನೀವು ವಿಫಲರಾಗಿದ್ದೀರಿ. ಸಾರ್ವಜನಿಕ ಸಾರಿಗೆಯ ಕೊರತೆಯಿಂದ ಜನ ಪರದಾಡುತ್ತಿದ್ದಾರೆ. ದಯವಿಟ್ಟು ಖಾಸಗಿ ವಲಯಕ್ಕೆ ಅವಕಾಶ ನೀಡಿ.

ಕಳೆದ ಕೆಲವು ವರ್ಷದಿಂದ ಬಸ್‌ಗಳ ವ್ಯವಸ್ಥೆ ಸರಿಯಿಲ್ಲ. ಬಸ್‌ ಓಡಾಟ ಕಡಿಮೆಯಾಗಿದೆ. ಕೇವಲ ಸರ್ಕಾರಿ ಸಂಸ್ಥೆಗಳೇ ಕೆಲಸ ಮಾಡಬೇಕು ಎಂಬ ನಿಮ್ಮ ಹಠಮಾರಿತನ ಏಕೆ? ಜನರಿಗೆ ಸಾರ್ವಜನಿಕ ಸಾರಿಗೆ ಬೇಕು ಎಂದು ಉದ್ಯಮಿ ಮೋಹನ್‌ ದಾಸ್‌ ಪೈ ಅವರು ಪೋಸ್ಟ್‌ ಮಾಡಿದ್ದರು.
ಮೋಹನ್‌ದಾಸ್ ಪೈ ಅವರೇ, ಯಾವುದೇ ವೇದಿಕೆಯಲ್ಲಿ ನಿಮ್ಮೊಂದಿಗೆ ಮುಖಾಮುಖಿ ಚರ್ಚೆ ನಡೆಸಲು ನಮ್ಮ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಒಬ್ಬರೇ ಸಾಕು. ದಯವಿಟ್ಟು ಬನ್ನಿ ಮತ್ತು ಅವರೊಂದಿಗೆ ನೇರವಾಗಿ ಸತ್ಯಾಸತ್ಯತೆಗಳ ಬಗ್ಗೆ ಚರ್ಚಿಸಿ. ನೀವು ಈ ಸವಾಲನ್ನು ಸ್ವೀಕರಿಸಲು ಸಿದ್ಧರಿದ್ದೀರಾ? ಅಥವಾ ಕೇವಲ ಟ್ವೀಟ್ ಮಾಡುವುದಕ್ಕಷ್ಟೇ ಸೀಮಿತವಾಗುತ್ತೀರಾ ಎಂದು ಟಾಂಗ್‌ ಕೊಟ್ಟಿದ್ದಾರೆ.
ನಿಮ್ಮ ದೃಷ್ಟಿಕೋನವು ಕೇವಲ ಪೂರ್ವಾಗ್ರಹ ಪೀಡಿತವಲ್ಲ. ನೀವು ಸಾರ್ವಜನಿಕ ಸೇವೆಯನ್ನು ಕೇವಲ ಲಾಭ-ನಷ್ಟದ ‘ಬ್ಯಾಲೆನ್ಸ್ ಶೀಟ್’ ಮೂಲಕ ನೋಡುತ್ತೀರಿ; ಆದರೆ ನಾನು ಅದನ್ನು 1.5 ಕೋಟಿ ನಾಗರಿಕರ ಸೇವೆಯ ದೃಷ್ಟಿಯಿಂದ ನೋಡುತ್ತಿದ್ದೇನೆ ಎಂದು ಸಚಿವರು ಬರೆದುಕೊಂಡಿದ್ದಾರೆ.
ಮಹಿಳೆಯರಿಗಾಗಿ ಜಾರಿ ಮಾಡಿದ ಶಕ್ತಿ ಯೋಜನೆಯಿಂದ 650 ಕೋಟಿಗೂ ಅಧಿಕ ಉಚಿತ ಪ್ರಯಾಣದ ಮೈಲಿಗಲ್ಲನ್ನು ದಾಟಿದ್ದೇವೆ. ಇದು ಕೇವಲ ಯೋಜನೆಯಲ್ಲ, ಆರ್ಥಿಕ ಸಬಲೀಕರಣದ ದೊಡ್ಡ ಹೆಜ್ಜೆ. ಸಾಮಾಜಿಕ ಸೇವೆ ಖಾಸಗಿ ಸಂಸ್ಥೆಗಳಂತೆ ನಾವು ಕೇವಲ ಲಾಭದಾಯಕ ಮಾರ್ಗಗಳನ್ನು ಮಾತ್ರ ಆರಿಸಿಕೊಳ್ಳುವುದಿಲ್ಲ.
ಶೇ. 30ರಷ್ಟು ಮಾರ್ಗಗಳು ನಷ್ಟದಲ್ಲಿದ್ದರೂ, ಹಳ್ಳಿಯ ಸಾಮಾನ್ಯ ಮನುಷ್ಯ ಮತ್ತು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯ ಸುಲಭವಾಗಿ ಸಿಗಲಿ ಎನ್ನುವುದು ನಮ್ಮ ಆಶಯ. ಶೇ. 30ರಷ್ಟು ಮಾರ್ಗಗಳು ಲಾಭವೂ ಇಲ್ಲದ, ನಷ್ಟವೂ ಇಲ್ಲದ ಸ್ಥಿತಿಯಲ್ಲಿವೆ. ದೂರ ಪ್ರಯಾಣಿಸುವ ಬಸ್‌ಗಳಿಂದಾಗಿ ಶೇ.40ರಷ್ಟು ಲಾಭ ಸಿಗಲಿದೆ. ರಾಜ್ಯದ ಶೇ.98ರಷ್ಟು ಹಳ್ಳಿಗಳಿಗೆ ಬಸ್ ಸಂಪರ್ಕ ಕಲ್ಪಿಸಲಾಗಿದೆ. ಸಮಾಜಕ್ಕೆ ಸೇವೆ ಸಲ್ಲಿಸುವುದು ಹೀಗೆಯೇ ಹೊರತು, ಕೇವಲ ಬೋರ್ಡ್ ಆಫ್ ಡೈರೆಕ್ಟರ್‌ಗಳ ಲಾಭಕ್ಕಲ್ಲ.
ಕರ್ನಾಟಕವು ಒಟ್ಟು 26,054 ಬಸ್‌ಗಳನ್ನು ಕಾರ್ಯಾಚರಣೆ ಮಾಡುತ್ತಿದೆ. ಬೆಂಗಳೂರಿನಲ್ಲಿ ಮಾತ್ರವೇ ನಾವು ಪ್ರತಿದಿನ ಸುಮಾರು 45 ಲಕ್ಷ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದೇವೆ. 7,108 ಬಸ್‌ಗಳ ಪೈಕಿ 1,686 ಎಲೆಕ್ಟ್ರಿಕ್ ಬಸ್‌ಗಳಿದ್ದು, ದಿನಕ್ಕೆ 13 ಲಕ್ಷ ಕಿ.ಮೀ. ಸಂಚರಿಸುತ್ತಾ 66,000 ಟ್ರಿಪ್‌ಗಳನ್ನು ಪೂರೈಸುತ್ತಿದ್ದೇವೆ. ಇದು ಇಡೀ ಭಾರತದಲ್ಲೇ ಅತಿ ಹೆಚ್ಚು.
ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್ ಸೇರಿದಂತೆ, ಬಿಜೆಪಿಯ ಯಾವುದಾದರೂ ಒಂದು ರಾಜ್ಯ ಅಥವಾ ನಗರ ಈ ಮಟ್ಟದ ಸಾರಿಗೆ ವ್ಯಾಪ್ತಿ ಮತ್ತು ದಕ್ಷತೆಯನ್ನು ಹೊಂದಿದ್ದರೆ ತೋರಿಸಿ. ಕಳೆದ ಕೇವಲ 2 ವರ್ಷಗಳಲ್ಲಿ ನಾವು 5,800ಕ್ಕೂ ಹೆಚ್ಚು ಹೊಸ ಬಸ್‌ಗಳನ್ನು ಸೇರಿಸಿದ್ದೇವೆ. ಮಾರ್ಚ್ 2026ರ ವೇಳೆಗೆ ಇನ್ನೂ 2,000 ಬಸ್‌ಗಳು ರಸ್ತೆಗಿಳಿಯಲಿವೆ.
2019 ರಿಂದ 2023ರವರೆಗಿನ ಬಿಜೆಪಿ ಆಡಳಿತದಲ್ಲಿ ಹೊಸ ಬಸ್‌ಗಳ ಸೇರ್ಪಡೆ ಸ್ಥಗಿತಗೊಂಡಿದ್ದಾಗ ಮತ್ತು ನಿಗಮಗಳು ಸೊರಗುತ್ತಿದ್ದಾಗ ನೀವು ಒಂದೇ ಒಂದು ಪ್ರಶ್ನೆ ಮಾಡಿಲ್ಲ ಏಕೆ. ಜನಪರ ಸರ್ಕಾರವು ಉತ್ತಮ ಕೆಲಸ ಮಾಡುತ್ತಿರುವಾಗ ಮಾತ್ರ ನಿಮ್ಮ ಈ ‘ಕಾರ್ಪೊರೇಟ್ ಕಾಳಜಿ’ ಎಚ್ಚರಗೊಳ್ಳುವುದು ಏಕೆ ಎಂದು ಬಹಿರಂಗವಾಗಿ ಪ್ರಶ್ನೆ ಮಾಡಿದ್ದಾರೆ.
ಈ ಹಿಂದೆ ಉದ್ಯಮಿ ಕಿರಣ್‌ ಮಜುಂದಾರ್‌ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಮಧ್ಯೆ ಬೆಂಗಳೂರಿನಲ್ಲಿ ಕಸ, ರಸ್ಯೆ ಸಮಸ್ಯೆ ಬಗ್ಗೆ ಟ್ವೀಟ್‌ ವಾರ್‌ ನಡೆದಿತ್ತು. ಆರೋಪ ಮತ್ತು ಪ್ರತ್ಯಾರೋಪಗಳ ನಂತರ ನೇರ ಭೇಟಿಯಾಗಿದ್ದರು. ಸದ್ಯ ರಾಮಲಿಂಗಾ ರೆಡ್ಡಿ ಮತ್ತು ಉದ್ಯಮಿ ಮೋಹನ್‌ ದಾಸ್‌ ಪೈ ಮಧ್ಯದ ಟಾಕ್‌ವಾರ್‌ ಶುರುವಾಗಿದೆ.

ಮಗುವಿಗೆ ಹೆಸರಿಡಲು ಪ್ರೊಫೆಷನಲ್ ಬೇಬಿ ನೇಮರ್ ಎಷ್ಟು ದುಡ್ಡು ತಗೋತಾರೆ?; ಹೆಸರು ಸೂಚಿಸಿ ಕೋಟ್ಯಾಧಿಪತಿಯಾದ ಮಹಿಳೆ

TAGGED:come to discussion: Minister Ramalingareddy challenges businessman Mohan Das PaiDon't criticize
Share This Article
Facebook Twitter Copy Link Print
Previous Article ಲಕ್ಕುಂಡಿ ಉತ್ಖನನ ವೇಳೆ ಹಾವು ಪತ್ತೆ: ಕೆಲ ಕಾಲ ಕೆಲಸ ಸ್ಥಗಿತ
Next Article ಬೆಂಗಳೂರಿಗರಿಗೆ ಟ್ರಾಫಿಕ್ ಸಮಸ್ಯೆ; ಪ್ರತಿ ವ್ಯಕ್ತಿ ವರ್ಷಕ್ಕೆ 117 ಗಂಟೆ ವ್ಯರ್ಥ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?