https://youtube.com/shorts/kIkAyfI4sxw?si=aggVueBL3fodeELS
Subscribe ನ್ಯೂಸಿಕ್ಸ್ ಕನ್ನಡ
newsics.com
ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್ (20) ಎಂದು ಗುರುತಿಸಲಾಗಿದೆ. ನಾಲ್ವರೂ ರಾತ್ರಿ ಶೆಡ್‌ನ ಕಿಟಕಿ ಹಾಗೂ ಬಾಗಿಲುಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಅಡುಗೆ ಮಾಡಿದ್ದರು ಎನ್ನಲಾಗಿದೆ. ಬೆಳಗಿನ ಜಾವ ಅವರು ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಪ್ರಕರಣದ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
https://www.newsics.com/2026/01/31/silver-price-drops-by-%e2%82%b9-15-thousand-gold-by-%e2%82%b9-9650/