Subscribe ನ್ಯೂಸಿಕ್ಸ್ ಕನ್ನಡ
newsics.com
ಈ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಪರಮೇಶ್ವರ್ ಅವರು, ಜಂಟಿ ಪೊಲೀಸ್ ಆಯುಕ್ತ ವಂಶಿ ಕೃಷ್ಣ ಅವರ ನೇತೃತ್ವದಲ್ಲಿ SIT ರಚಿಸಲಾಗಿದೆ. ತನಿಖೆ ಈಗಾಗಲೇ ಆರಂಭವಾಗಿದೆ. ವರದಿ ಬಂದ ಬಳಿಕವೇ ಸ್ಪಷ್ಟ ಚಿತ್ರಣ ದೊರೆಯಲಿದೆ. ತನಿಖೆ ಮುಗಿಯುವವರೆಗೆ ಯಾವುದೇ ಊಹಾಪೋಹಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಹೇಳಿದ್ದಾರೆ.
ಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆ ನಡೆದ ವೇಳೆ ಅವರ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳ ಶೋಧ ಕಾರ್ಯ ನಡೆಯುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಪ್ರಕರಣವು ರಾಜ್ಯಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಏತನ್ಮಧ್ಯೆ ಕೇರಳ ಮೂಲದವರಾದ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆ ಭಾನುವಾರ ಬ್ಯಾನರ್‌ಘಟ್ಟಾ ಸಮೀಪದ Confident Cascade ನಲ್ಲಿ ಕುಟುಂಬ ಸದಸ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ನೆರವೇರಿತು.
ರಾಯ್ ಅವರ ಇಚ್ಛೆಯಂತೆ ಚರ್ಚ್‌ನಲ್ಲಿ ಪ್ರಾರ್ಥನೆ ನಡೆಸಿದ ಬಳಿಕ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಕುಟುಂಬ ಮೂಲಗಳು ತಿಳಿಸಿವೆ.