Subscribe ನ್ಯೂಸಿಕ್ಸ್ ಕನ್ನಡ
newsics.com
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಭಾರತದಲ್ಲಿರುವ ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ಹೇಳಿದ್ದಾರೆ.
ಹೊಸದಾಗಿ ನೇಮಕಗೊಂಡ ಅಮೆರಿಕ ರಾಯಭಾರಿ ಸೆರ್ಗಿಯೋ ಗೋರ್ ಇಬ್ಬರು ನಾಯಕರು ಯಾವ ವಿಚಾರದ ಬಗ್ಗೆ ಮಾತುಕತೆ ನಡೆಸಿದರು ಎನ್ನುವ ವಿವರ ಬಹಿರಂಗಪಡಿಸಿಲ್ಲ. ಭಾರತ ಮತ್ತು ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಮಧ್ಯೆ ಈ ಬೆಳವಣಿಗೆ ಸಂಭವಿಸಿದ್ದು, ಜಗತ್ತೇ ಕುತೂಹಲದಿಂದ ನೋಡುತ್ತಿದೆ. ಈ ಮಧ್ಯೆ ಟ್ರಂಪ್ ಭಾರತ ಮತ್ತು ಅಮೆರಿಕ ಮಧ್ಯೆ ವ್ಯಾಪಾರ ಒಪ್ಪಂದ ನಡೆದಿದೆ ಎಂದು ಘೋಷಿಸಿದ್ದಾರೆ. ಇದರಿಂದಾಗಿ ಭಾರತದ ಮೇಲೆ ಅಮೆರಿಕ ವಿಧಿಸಿರುವ ಸುಂಕವನನು ಶೇಕಡಾ 25ರಿಂದ ಶೇಕಡಾ 18ಕ್ಕೆ ಇಳಿಸಲಾಗುತ್ತಿದೆ ಎಂದಿದ್ದಾರೆ.
ಇದಕ್ಕೆ ಪ್ರತಿಯಾಗಿ ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸಲು ಒಪ್ಪಿಕೊಂಡಿದೆ ಮತ್ತು 500 ಬಿಲಿಯನ್ ಡಾಲರ್ ಮೌಲ್ಯದ ಅಮೆರಿಕದ ಇಂಧನ ಮತ್ತು ತಂತ್ರಜ್ಞಾನವನ್ನು ಖರೀದಿಸಲಿದೆ ಎಂದು ಮೂಲಗಳು ತಿಳಿಸಿವೆ.
ಸೆರ್ಗಿಯೋ ಗೋರ್ ಹೇಳಿದ್ದೇನು?
ಈ ಮೊದಲು ಸೆರ್ಗಿಯೋ ಗೋರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ʼʼಅಮರಿಕ ಅಧ್ಯಕ್ಷ ಟ್ರಂಪ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದಾರೆ. ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಿ…ʼʼ ಎಂದು ಅವರು ಬರೆದುಕೊಂಡಿದ್ದರು. ಭಾರತ ಸರ್ಕಾರ ಈ ಬಗ್ಗೆ ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರೆಗೆ ಭಂಗ ತರಬಹುದು ಎಚ್ಚರ