https://youtube.com/shorts/2Z4I0oFUbOQ?si=E_8G5fLxr2N6s9QC
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ರಾಜ್ಯದಲ್ಲಿ ಎಸ್ಎಸ್ಎಲ್ಸಿ (SSLC) ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಶಿಕ್ಷಣ ಇಲಾಖೆಯು ಅತ್ಯಂತ ವಿಭಿನ್ನ ಮತ್ತು ಕಟ್ಟುನಿಟ್ಟಿನ ಯೋಜನೆಯೊಂದನ್ನು ಜಾರಿಗೆ ತಂದಿದೆ. ವಿದ್ಯಾರ್ಥಿಗಳು ಮೊಬೈಲ್ ಮತ್ತು ಟಿವಿಯ ಗೀಳಿಗೆ ಬಿದ್ದು ಓದಿನಿಂದ ದೂರವಾಗುತ್ತಿರುವುದನ್ನು ತಡೆಯಲು ಈಗ ‘ಡಂಗೂರ’ ಸದ್ದು ಮೊಳಗಲಿದೆ!
ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಏಕಾಗ್ರತೆಯಿಂದ ಓದಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆಯು ವಿಶೇಷ ಸುತ್ತೋಲೆಯನ್ನು ಹೊರಡಿಸಿದೆ. ಪೋಷಕರು ಕೂಡ ಈ ಯೋಜನೆಗೆ ಸಾಥ್ ನೀಡುವಂತೆ ಇಲಾಖೆ ಮನವಿ ಮಾಡಿದೆ. ಸದ್ಯ ಶಿಕ್ಷಣ ಇಲಾಖೆ ಬಿಇಒ ಹಂತದಲ್ಲಿ ಈ ಕುರಿತು ಸೂಚನೆ ನೀಡಿದ್ದು, ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿಲ್ಲ.
ಸಂಜೆ 7 ರಿಂದ 9 ‘ನೋ ಮೊಬೈಲ್’: ಪ್ರತಿದಿನ ಸಂಜೆ ಸರಿಯಾಗಿ 7 ಗಂಟೆಯಿಂದ 9 ಗಂಟೆಯವರೆಗೆ ವಿದ್ಯಾರ್ಥಿಗಳು ಮಾತ್ರವಲ್ಲದೆ, ಮನೆಯವರೂ ಕೂಡ ಮೊಬೈಲ್ ಸ್ವಿಚ್ ಆಫ್ ಮಾಡುವಂತೆ ಮತ್ತು ಟಿವಿ ಬಳಸದಂತೆ ಜಾಗೃತಿ ಮೂಡಿಸಲಾಗುತ್ತದೆ.ಹಳ್ಳಿಗಳಲ್ಲಿ ಮತ್ತು ವಾರ್ಡ್ಗಳಲ್ಲಿ ಡಂಗೂರ ಬಾರಿಸುವ ಮೂಲಕ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಓದಿನ ಕಡೆಗೆ ಗಮನ ಹರಿಸುವಂತೆ ಸೂಚನೆ ನೀಡಲು ಇಲಾಖೆ ನಿರ್ಧರಿಸಿದೆ.
https://www.newsics.com/2026/02/04/wife-assaulted-husband-by-sitting-on-top-of-him/