Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ
ಕರ್ನಾಟಕಪ್ರಮುಖ

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

Share
1 Min Read
SHARE

https://youtube.com/shorts/2Z4I0oFUbOQ?si=2AWNIubhEa82xcJv

Subscribe ನ್ಯೂಸಿಕ್ಸ್ ಕನ್ನಡ

newsics.com

ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ಕೋರ್ಟ್‌ದಲ್ಲೇ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದರು.

2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆ ರಾಜ್ಯದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಯುವಕ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ನಂತರ ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕ್ರೌರ್ಯ ಮೆರೆಯಲಾಗಿತ್ತು. ಈ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು.

ಈ ಘಟನೆಯ ನಂತರ ಪೊಲೀಸರು ಓಡಿಹೋಗಿದ್ದ ಪ್ರೇಮಿಗಳನ್ನು ಪತ್ತೆಹಚ್ಚಿ ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಿದ್ದು, ದಂಪತಿ ಪ್ರಸ್ತುತ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಬಾಲಾಪರಾಧಿ ಸೇರಿ 13 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇಂದು ಬೆಳಿಗ್ಗೆ ಬೆಳಗಾವಿ ಹಿಂಡಲಗಾ ಜೈಲಿನಿಂದ ಪೊಲೀಸ್ ವಾಹನಗಳಲ್ಲಿ ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಎರಡು ವರ್ಷಗಳ ವಿಚಾರಣೆಯ ಬಳಿಕ, ಬಾಲಾಪರಾಧಿಯನ್ನು ಹೊರತುಪಡಿಸಿ ಉಳಿದ 12 ಮಂದಿ ಆರೋಪಿಗಳು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ.

ನಿಗೂಢವಾಗುತ್ತಲೇ ಇದೆ ಸಿಜೆ ರಾಯ್ ಆತ್ಮ*ಹ*ತ್ಯೆ ಕಾರಣ, ತನಿಖೆ ವೇಳೆ ಹೊರಬರುತ್ತಲೇ ಇದೆ ಹೊಸ ಹೊಸ ವಿಚಾರ

TAGGED:Vantamuri woman's undressing case; 12 accused get 5 years rigorous imprisonment
Share This Article
Facebook Twitter Copy Link Print
Previous Article ಮಹಿಳೆಯರಲ್ಲಿ ಹೆಚ್ಚಾಗ್ತಿರೋ ಕ್ಯಾನ್ಸರ್; ಮಾಹಿತಿ ಬಿಚ್ಚಿಟ್ಟ ಆಂಕಾಲಜಿಸ್ಟ್‌ಗಳು
Next Article ತೆಲುಗು ಹಿರಿಯ ನಟ ಮೋಹನ್ ಬಾಬು ಮತ್ತು ಪುತ್ರ ಮಂಚು ವಿಷ್ಣು ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?