https://youtube.com/shorts/8CqHwGKEL5g?si=1-oJ_JGuSNaYETpQ
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿಚಾರವಾಗಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದ್ದು, ಮತ್ತೊಂದು ಪ್ರಕರಣದಲ್ಲಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ. ಈ ಮೂಲಕ ಪುನೀತ್ ಕೆರೆಹಳ್ಳಿಗೆ ರಿಲೀಫ್ ಸಿಕ್ಕಿದೆ.
ಹೈಕೋರ್ಟ್ ಏಕಸದಸ್ಯ ಪೀಠ ಇಂದು ಪ್ರಕರಣದ ವಿಚಾರಣೆ ಮಾಡಿದ್ದು, ಎಲ್ಲೆಡೆ ಅಕ್ರಮ ವಲಸಿಗರು ಬಂದು ಸೇರಿದ್ದಾರೆ. ಅಕ್ರಮ ವಲಸಿಗರಿದ್ದಾರೆಂದು ತೋರಿಸಿದರೂ ಕೇಸ್ ಹಾಕುತ್ತೀರಿ ಎಂದು ಪೊಲೀಸರನ್ನ ತರಾಟೆ ತೆಗೆದುಕೊಂಡ ಪೀಠ ವಲಸಿಗರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದೀರಾ ತಿಳಿಸಿ ಎಂದು ಸರ್ಕಾರವನ್ನ ಪ್ರಶ್ನಿಸಿದೆ. ಸರ್ಕಾರದ ಪ್ರತಿಕ್ರಿಯೆಗಾಗಿ ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಬಿಂಗೀಪುರ ಗ್ರಾಮದಲ್ಲಿ ಶಂಕಿತ ಬಾಂಗ್ಲಾ ವಲಸಿಗರು ಇರುವ ಜಾಗಕ್ಕೆ ಪುನೀತ್ ಕೆರೆಹಳ್ಳಿ ತಂಡ ತೆರಳಿದ್ದರು. ಅಲ್ಲಿದ್ದ ವಲಸೆ ಕಾರ್ಮಿಕರ ದಾಖಲೆಗಳನ್ನ ಪರಿಶೀಲನೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದರು. ಇದಾದ ಬಳಿಕ ಜಾಗದ ಮಾಲೀಕ ಸಿದ್ದೇಶ್ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇತಿದಂತೆ ಇತರರ ವಿರುದ್ಧ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು.
ಪ್ರಕರಣ ದಾಖಲು ಮಾಡಿಕೊಂಡಿದ್ದ ಬನ್ನೇರುಘಟ್ಟ ಪೊಲೀಸರು ತಡರಾತ್ರಿ ಪುನೀತ್ ಕೆರೆಹಳ್ಳಿಯನ್ನ ಬಂಧಿಸಿದ್ದರು. ಬಳಿಕ ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಆ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಪಡೆದಿದ್ದರು. ಸದ್ಯ ಇದೇ ಪ್ರಕರಣಕ್ಕೆ ತಡೆ ನೀಡಲಾಗಿದೆ.
https://www.newsics.com/2026/02/05/udupi-youth-who-won-49-crore-lottery-overnight/